ದೇವದತ್ ಪಡಿಕ್ಕಲ್ 
ಕ್ರಿಕೆಟ್

IPL 2025: ಟ್ರೋಫಿ ರೇಸ್ ನಲ್ಲಿರುವ RCBಗೆ ಆಘಾತ; Devdutt Padikkal ಟೂರ್ನಿಯಿಂದಲೇ ಔಟ್, ಕನ್ನಡಿಗ ಎಂಟ್ರಿ!

ಪಡಿಕ್ಕಲ್ ಬದಲಿಗೆ ತಂಡದಲ್ಲಿ ಮತ್ತೋರ್ವ ಕನ್ನಡಿಗ ಆಟಗಾರನಿಗೆ ಸ್ಥಾನ ಕಲ್ಪಿಸಲಾಗಿದ್ದು, ಕನ್ನಡಿಗ ಮಯಾಂಕ್ ಅಗರ್ವಾಲ್ ತಂಡ ಸೇರಿಕೊಳ್ಳಲ್ಲಿದ್ದಾರೆ.

ಬೆಂಗಳೂರು: ಹಾಲಿ ಐಪಿಎಲ್ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ತೋರುತ್ತಾ ಪ್ರಶಸ್ತಿ ಗೆಲ್ಲುವ ಫೇವರಿಟ್ ತಂಡವಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ದೊಡ್ಡ ಆಘಾತ ಎದುರಾಗಿದ್ದು, ತಂಡದ ಪ್ರಮುಖ ಸ್ಟಾರ್ ಬ್ಯಾಟರ್ ದೇವದತ್ ಪಡಿಕ್ಕಲ್ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದಲೇ ಔಟ್ ಆಗಿದ್ದಾರೆ.

ಮಂಡಿರಜ್ಜು ಗಾಯ (hamstring injury)ದ ಸಮಸ್ಯೆಗೆ ತುತ್ತಾಗಿರುವ ದೇವದತ್ ಪಡಿಕ್ಕಲ್ ಐಪಿಎಲ್ 2025 ರ ಉಳಿದ ಪಂದ್ಯಗಳಿಂದ ದೂರ ಉಳಿಯಲಿದ್ದಾರೆ ಎಂದು ಆರ್ ಸಿಬಿ ತಂಡದ ಮೂಲಗಳು ತಿಳಿಸಿವೆ.

ಇನ್ನು ಪಡಿಕ್ಕಲ್ ಬದಲಿಗೆ ತಂಡದಲ್ಲಿ ಮತ್ತೋರ್ವ ಕನ್ನಡಿಗ ಆಟಗಾರನಿಗೆ ಸ್ಥಾನ ಕಲ್ಪಿಸಲಾಗಿದ್ದು, ಕನ್ನಡಿಗ ಮಯಾಂಕ್ ಅಗರ್ವಾಲ್ ತಂಡ ಸೇರಿಕೊಳ್ಳಲ್ಲಿದ್ದಾರೆ. ಈಗಾಗಲೇ ತಂಡದ ಆಡಳಿತ ಮಂಡಳಿ ಮಯಾಂಕ್ ಅಗರ್ವಾಲ್ ಗೆ ಮಾಹಿತಿ ನೀಡಿದ್ದು, ಶೀಘ್ರ ಮಯಾಂಕ್ ತಂಡ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದೆ.

ಇನ್ನು ಹಾಲಿ ಐಪಿಎಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರಿ ತಂಡದಲ್ಲಿ ಸ್ಥಾನ ಭದ್ರಪಡಿಸಿಕೊಂಡಿದ್ದ ದೇವದತ್ ಪಡಿಕ್ಕಲ್, ಹಾಲಿ ಟೂರ್ನಿಯಲ್ಲಿ ಎರಡು ಅರ್ಧಶತಕಗಳ ಸಹಿತ 10 ಪಂದ್ಯಗಳಲ್ಲಿ 150.61 ಸ್ಟ್ರೈಕ್ ರೇಟ್‌ನಲ್ಲಿ 247 ರನ್ ಗಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಆರ್‌ಸಿಬಿ ಕ್ರಿಕೆಟ್ ನಿರ್ದೇಶಕ ಮೊ ಬೊಬಟ್, 'ಟೂರ್ನಮೆಂಟ್‌ನ ಈ ಹಂತದಲ್ಲಿ, ವಿಶೇಷವಾಗಿ ಈ ಋತುವಿನಲ್ಲಿ ಅವರು ಬೀರಿದ ಪ್ರಭಾವದ ನಂತರ, ದೇವದತ್ ಅವರನ್ನು ಕಳೆದುಕೊಳ್ಳುವುದು ನಿಜಕ್ಕೂ ದುರದೃಷ್ಟಕರ. ಅವರು ನಮ್ಮ ಅಗ್ರ ಕ್ರಮಾಂಕದ ಬ್ಯಾಟಿಂಗ್ ನ ಪ್ರಮುಖ ಭಾಗವಾಗಿದ್ದಾರೆ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾವು ಬಯಸುತ್ತೇವೆ.

ಅದೇ ಸಮಯದಲ್ಲಿ, ಮಯಾಂಕ್ ಅಗರ್ವಾಲ್ ಅವರನ್ನು ಆರ್‌ಸಿಬಿಗೆ ಸ್ವಾಗತಿಸಲು ನಾವು ಸಂತೋಷಪಡುತ್ತೇವೆ. ಋತುವಿನ ಅಂತ್ಯಕ್ಕೆ ನಾವು ಹೋಗುತ್ತಿದ್ದಂತೆ ಅವರ ಅನುಭವ ಮತ್ತು ಬಹುಮುಖ ಪ್ರತಿಭೆ ನಮಗೆ ಅಮೂಲ್ಯವೆಂದು ಸಾಬೀತುಪಡಿಸುತ್ತದೆ' ಎಂದು ಅಭಿಪ್ರಾಯಪಟ್ಟಿದ್ದಾರೆ.

ಮಯಾಕ್ ಅಗರ್ವಾಲ್ ನುರಿತ ಮತ್ತು ಅನುಭವಿ ಆಟಗಾರನಾಗಿದ್ದು, ಈ ವರೆಗೂ 127 ಪಂದ್ಯಗಳನ್ನು ಆಡಿದ್ದಾರೆ, ಇದರಲ್ಲಿ ಅವರು ಒಂದು ಶತಕ ಮತ್ತು 13 ಅರ್ಧಶತಕಗಳನ್ನು ದಾಖಲಿಸಿದ್ದಾರೆ.

ಉಳಿದಂತೆ ಹಾಲಿ ಟೂರ್ನಿಯಲ್ಲಿ ಭರ್ಜರಿ ಫಾರ್ಮ್ ನಲ್ಲಿರುವ ಆರ್ ಸಿಬಿ 11 ಪಂದ್ಯಗಳ ಪೈಕಿ 8 ರಲ್ಲಿ ಗೆದ್ದು 3ರಲ್ಲಿ ಸೋತು 16 ಅಂಕಗಳೊಂದಿಗೆ +0.482 ನೆಟ್ ರನ್ ರೇಟ್ ನಲ್ಲಿ 2ನೇ ಸ್ಥಾನದಲ್ಲಿದೆ. ಇನ್ನು ಅಷ್ಟೇ ಅಂಕಗಳೊಂದಿಗೆ +0.793 ನೆಟ್ ರನ್ ರೇಟ್ ನೊಂದಿಗೆ ಗುಜರಾತ್ ಅಗ್ರಸ್ಥಾನದಲ್ಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ