ವರುಣ್ ಚಕ್ರವರ್ತಿ 
ಕ್ರಿಕೆಟ್

IPL 2025: CSK ವಿಕೆಟ್ ಪಡೆದು ಬ್ಯಾಟ್ಸ್ ಮನ್ ಗೆ ಹೊರಹೋಗುವಂತೆ ಸನ್ನೆ ಮಾಡಿದ ವರುಣ್ ಚಕ್ರವರ್ತಿ; ಭಾರಿ ದಂಡ ವಿಧಿಸಿದ BCCI

ಈಗಾಗಲೇ ಪ್ಲೇಆಫ್ ರೇಸ್‌ನಿಂದ ಹೊರಗುಳಿದಿರುವ ಸಿಎಸ್‌ಕೆ ಬುಧವಾರ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಗೆಲುವು ಸಾಧಿಸಿದೆ. ಇತ್ತ ಕೆಕೆಆರ್ ಕೂಡ ಬಹುತೇಕ ಪ್ಲೇಆಫ್‌ನಿಂದ ಹೊರಗುಳಿಯುವಂತಾಗಿದೆ.

ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧದ ಪಂದ್ಯದ ವೇಳೆ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದ ಸ್ಪಿನ್ನರ್ ವರುಣ್ ಚಕ್ರವರ್ತಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಭಾರಿ ದಂಡ ವಿಧಿಸಿದೆ. ಪ್ಲೇಆಫ್ ಕನಸು ಕಾಣುತ್ತಿದ್ದ ಅಜಿಂಕ್ಯ ರಹಾನೆ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಕನಸಿಗೆ ತಣ್ಣೀರೆರೆಚಿರುವ CSK ಎರಡು ವಿಕೆಟ್ ಅಂತರದಿಂದ ಗೆಲುವು ಸಾಧಿಸಿದೆ.

ಈಗಾಗಲೇ ಪ್ಲೇಆಫ್ ರೇಸ್‌ನಿಂದ ಹೊರಗುಳಿದಿರುವ ಸಿಎಸ್‌ಕೆ ಬುಧವಾರ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಗೆಲುವು ಸಾಧಿಸಿದೆ. ಈ ಪಂದ್ಯದ ವೇಳೆ ವಿಕೆಟ್ ಪಡೆದು ಸಂಭ್ರಮಾಚರಣೆ ಮಾಡಿದ ವರುಣ್ ಚಕ್ರವರ್ತಿಗೆ ಪಂದ್ಯ ಶುಲ್ಕದ ಶೇ 25ರಷ್ಟು ದಂಡ ಮತ್ತು ಒಂದು ಡಿಮೆರಿಟ್ ಪಾಯಿಂಟ್ ವಿಧಿಸಲಾಗಿದೆ.

'ವರುಣ್ ಚಕ್ರವರ್ತಿ ಅವರು ಆರ್ಟಿಕಲ್ 2.5 ರ ಅಡಿಯಲ್ಲಿ ಲೆವೆಲ್ 1 ಅಪರಾಧವನ್ನು ಮಾಡಿದ್ದು, ಒಪ್ಪಿಕೊಂಡಿದ್ದಾರೆ. ಮ್ಯಾಚ್ ರೆಫರಿಯ ಶಿಕ್ಷೆಯನ್ನು ಸ್ವೀಕರಿಸಿದ್ದಾರೆ. ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ದಂಡ ವಿಧಿಸಲಾಗಿದೆ' ಎಂದು ಘಟನೆಯನ್ನು ಉಲ್ಲೇಖಿಸದೆ ಐಪಿಎಲ್ ಹೇಳಿಕೆಯಲ್ಲಿ ತಿಳಿಸಿದೆ.

ಆರ್ಟಿಕಲ್ 2.5ರ ಅಡಿಯಲ್ಲಿ 'ಯಾವುದೇ ಆಟಗಾರ ಔಟ್ ಆದ ಬಳಿಕ ಬ್ಯಾಟ್ಸ್‌ಮನ್ ಕಡೆಗೆ ಯಾವುದೇ ಭಾಷೆ, ಕ್ರಿಯೆ ಅಥವಾ ಸನ್ನೆ' ಮಾಡಿದರೆ ದಂಡ ವಿಧಿಸಲಾಗುತ್ತದೆ.

ಎರಡು ವಿಕೆಟ್‌ಗಳನ್ನು ಪಡೆದ ವರುಣ್ ಚಕ್ರವರ್ತಿ, ಡೆವಾಲ್ಡ್ ಬ್ರೆವೀಸ್ ಅವರನ್ನು 52 ರನ್‌ಗಳಿಗೆ ಔಟ್ ಮಾಡಿದ ನಂತರ ಮೈದಾನದಿಂದ ಹೊರಹೋಗುವಂತೆ ಸನ್ನೆ ಮಾಡಿದರು. ದಕ್ಷಿಣ ಆಫ್ರಿಕಾದ ಆಟಗಾರನ ಆಕರ್ಷಕ ಅರ್ಧಶತಕ CSK ಪಂದ್ಯವನ್ನು ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran war: ಅಲಿ ಖಮೇನಿ ಪುತ್ರ ಮೊಜ್ತಾಬಾ ಖಮೇನಿ ಇರಾನ್ ನೂತನ ಪರಮೋಚ್ಛ ನಾಯಕರಾಗಿ ಆಯ್ಕೆ

ರೋಚಕ ಎನಿಸುವ ಇರಾನ್ ಸಮರಾಂಗಣ ವಿಶ್ಲೇಷಣೆಗಳ ಅಸಲಿಯತ್ತೇನು? (ತೆರೆದ ಕಿಟಕಿ)

US-Israel Iran War: ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದ್ದೇ ಆದರೆ, ರಾಜ್ಯದ ಆರ್ಥಿಕತೆ ಮೇಲೆ ಭಾರೀ ಹೊಡೆತ..!

Israel Iran war: ಭಾರತಕ್ಕೆ ಬಿಗ್ ಶಾಕ್, ಕತಾರ್ ನಿಂದ ಕೈಗಾರಿಕೆಗಳಿಗೆ ಅನಿಲ ಸರಬರಾಜು ಕಡಿತ!

Israel-Iran war: Dohaದಲ್ಲಿ ಸಿಲುಕಿದ Indian basketball team, ತಂಡದಲ್ಲಿದ್ದಾರೆ ಮೂವರು ಕನ್ನಡಿಗರು..!

SCROLL FOR NEXT