ಸಾಂದರ್ಭಿಕ ಚಿತ್ರ 
ಕ್ರಿಕೆಟ್

ಮೇ 11 ರಂದು ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಐಪಿಎಲ್ ಪಂದ್ಯ ಅಹಮದಾಬಾದ್‌ ಗೆ ಶಿಫ್ಟ್

ಆಪರೇಷನ್ ಸಿಂಧೂರ ನಂತರ ಶ್ರೀನಗರ, ಲೇಹ್, ಜಮ್ಮು, ಅಮೃತಸರ, ಪಠಾಣ್‌ಕೋಟ್, ಚಂಡೀಗಢ, ಜೋಧ್‌ಪುರ, ಜೈಸಲ್ಮೇರ್, ಶಿಮ್ಲಾ, ಧರ್ಮಶಾಲಾ ಮತ್ತು ಜಾಮ್‌ನಗರ ಸೇರಿದಂತೆ 18 ವಿಮಾನ ನಿಲ್ದಾಣಗಳನ್ನು ಬಂದ್ ಮಾಡಲಾಗಿದೆ.

ಅಹಮದಾಬಾದ್‌: ಭಾರತೀಯ ಸೇನೆ ಬುಧವಾರ ಬೆಳಗಿನ ಜಾವ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಧರ್ಮಶಾಲಾ ವಿಮಾನ ನಿಲ್ದಾಣ ಸೇರಿದಂತೆ ಹಲವು ವಿಮಾನ ನಿಲ್ದಾಣಗಳ ಬಂದ್ ಮಾಡಲಾಗಿದೆ.

ಈ ಹಿನ್ನೆಲೆಯಲ್ಲಿ ಧರ್ಮಶಾಲಾದಲ್ಲಿ ಮೇ 11 ರಂದು ನಡೆಯಬೇಕಿದ್ದ ಮುಂಬೈ ಇಂಡಿಯನ್ಸ್ vs ಪಂಜಾಬ್ ಕಿಂಗ್ಸ್ ಐಪಿಎಲ್ ಪಂದ್ಯವನ್ನು ಅಹಮದಾಬಾದ್‌ಗೆ ಸ್ಥಳಾಂತರಿಸಲಾಗಿದೆ ಎಂದು ಗುಜರಾತ್ ಕ್ರಿಕೆಟ್ ಅಸೋಸಿಯೇಷನ್ ​​ಕಾರ್ಯದರ್ಶಿ ಅನಿಲ್ ಪಟೇಲ್ ಅವರು ತಿಳಿಸಿದ್ದಾರೆ.

ಇದುವರೆಗೆ 11 ಪಂದ್ಯಗಳಿಂದ 13 ಅಂಕಗಳೊಂದಿಗೆ, ಡೆಲ್ಲಿ ಕ್ಯಾಪಿಟಲ್ಸ್ ಪ್ರಸ್ತುತ ಪಾಯಿಂಟ್ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಪಂಜಾಬ್ ಕಿಂಗ್ಸ್ 15 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

ಆಪರೇಷನ್ ಸಿಂಧೂರ ನಂತರ ಶ್ರೀನಗರ, ಲೇಹ್, ಜಮ್ಮು, ಅಮೃತಸರ, ಪಠಾಣ್‌ಕೋಟ್, ಚಂಡೀಗಢ, ಜೋಧ್‌ಪುರ, ಜೈಸಲ್ಮೇರ್, ಶಿಮ್ಲಾ, ಧರ್ಮಶಾಲಾ ಮತ್ತು ಜಾಮ್‌ನಗರ ಸೇರಿದಂತೆ 18 ವಿಮಾನ ನಿಲ್ದಾಣಗಳನ್ನು ಬಂದ್ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಾಳೆ ಅರ್ಧಕ್ಕೆ ಹಾರಲಿದೆ ತ್ರಿವರ್ಣ ಧ್ವಜ; ದೇಶಾದ್ಯಂತ ಶೋಕಾಚರಣೆ: ಕತಾರ್‌ನ ಮಾಜಿ ಅಮೀರ್ ನಿಧನಕ್ಕೆ PM ಮೋದಿ ಸಂತಾಪ

ಅಮೆರಿಕ ಜೊತೆ ಒಪ್ಪಂದ 'ಮುಗಿದಿದೆ': ಹೊಸ ದಾಳಿಗಳ ಬೆನ್ನಲ್ಲೇ ಇರಾನ್ ಘೋಷಣೆ

ಮಾರುವೇಷ ಯಾಕೆ ಸ್ವಾಮಿ.. ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

'ಊಸರವಳ್ಳಿಯಂತೆ ಬದಲಾಗ್ತಾರೆ': ಹಿಂದಿ ಬರಲ್ಲ ಅಂತ ಪೋಸ್ ಕೊಟ್ಟೋರು, ದೆಹಲಿಯ CJPಯಲ್ಲಿ ಹಿಂದಿಯಲ್ಲೇ ಭಾಷಣ; ನೆಟ್ಟಿಗರು ಗರಂ, Video

'ಮಾ ಇಂಟಿ ಬಂಗಾರಂ' ಜಾಗತಿಕ ಬಾಕ್ಸ್ ಆಫೀಸ್ ನಲ್ಲಿ 100 ಕೋಟಿ ರೂ ಕಲೆಕ್ಷನ್! ನಾಯಕಿ ಪ್ರಧಾನ ಚಿತ್ರದ ಯಶಸ್ಸಿನ ಗುಟ್ಟು ಹಂಚಿಕೊಂಡ ಸಮಂತಾ!