ಕ್ರಿಕೆಟ್

ರೋಹಿತ್ ಶರ್ಮಾ ಬೆನ್ನಲ್ಲೇ ಟೆಸ್ಟ್‌ ಕ್ರಿಕೆಟ್‌ಗೆ ಕೊಹ್ಲಿ ವಿದಾಯ?: BCCI ಗೆ ನಿರ್ಧಾರ ತಿಳಿಸಿದ ವಿರಾಟ್‌

ಜೂನ್‌ 20ರಿಂದ ಆರಂಭವಾಗಲಿರುವ ಇಂಗ್ಲೆಂಡ್‌ ವಿರುದ್ದದ ಟೆಸ್ಟ್‌ ಸರಣಿಗೆ ತಾನು ಅಲಭ್ಯರಾಗುವುದಾಗಿ ವಿರಾಟ್‌ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.

ನವದೆಹಲಿ: ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಲು ಬಯಸಿರುವುದಾಗಿ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ಮಾಹಿತಿ ನೀಡಿದ್ದಾರೆ. ಆದರೆ, ತಮ್ಮ ನಿರ್ಧಾರವನ್ನು ಮತ್ತೊಮ್ಮೆ ಪರಿಶೀಲಿಸುವಂತೆ ಅವರಿಗೆ ಅಧಿಕಾರಿಗಳು ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಜೂನ್‌ 20ರಿಂದ ಆರಂಭವಾಗಲಿರುವ ಇಂಗ್ಲೆಂಡ್‌ ವಿರುದ್ದದ ಟೆಸ್ಟ್‌ ಸರಣಿಗೆ ತಾನು ಅಲಭ್ಯರಾಗುವುದಾಗಿ ವಿರಾಟ್‌ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ. ಆದರೆ ಬಿಸಿಸಿಐ ಹಿರಿಯ ಅಧಿಕಾರಿಗಳು ವಿರಾಟ್‌ ಕೊಹ್ಲಿಗೆ ತನ್ನ ನಿರ್ಧಾರವನ್ನು ಮರುಪರಿಶೀಲಿಸಲು ತಿಳಿಸಿದ್ದಾರೆ ಎನ್ನಲಾಗಿದೆ. ರೋಹಿತ್‌ ಶರ್ಮಾ ಅವರು ಕೆಲವೇ ದಿನಗಳ ಹಿಂದೆ ಟೆಸ್ಟ್‌ ಮಾದರಿಗೆ ವಿದಾಯ ಹೇಳಿದ್ದರು. ವಿರಾಟ್‌ ಮತ್ತು ರೋಹಿತ್‌ ಶರ್ಮಾ ಅವರು ಈ ಹಿಂದೆ ಒಂದೇ ಸಮಯದಲ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ್ದರು.

ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಟೆಸ್ಟ್ ಸರಣಿಗೆ ತಂಡವನ್ನು ಅಂತಿಮಗೊಳಿಸಲು ಆಯ್ಕೆ ಸಮಿತಿ ಸಭೆ ನಡೆಸಲಿರುವ ಸ್ವಲ್ಪ ದಿನ ಮುಂಚಿತವಾಗಿ ಈ ಮಹತ್ವದ ಬೆಳವಣಿಗೆ ಸಂಭವಿಸಿದೆ. ಇಂಗ್ಲೆಂಡ್‌ ಸರಣಿಯೊಂದಿಗೆ ಭಾರತ ಹೊಸ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಸೈಕಲ್‌ ಆರಂಭಿಸಲಿದೆ. ಟೆಸ್ಟ್ ಪ್ರವಾಸಕ್ಕಾಗಿ ತಂಡವನ್ನು ಮೇ ಕೊನೆಯ ವಾರದ ಮೊದಲು ಆಯ್ಕೆ ಮಾಡಲಾಗುವುದು ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಈ ಹಿಂದೆ ತಿಳಿಸಿದ್ದರು.

ಕಳೆದ ಡಿಸೆಂಬರ್‌ ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಬಾರ್ಡರ್‌ ಗಾವಸ್ಕರ್‌ ಟ್ರೋಫಿ ಸರಣಿಯಲ್ಲಿ ವಿರಾಟ್‌ ಕೊಹ್ಲಿ ಕಳಪೆ ಫಾರ್ಮ್‌ ನಿಂದ ಬಳಲಿದ್ದರು. ಐದು ಪಂದ್ಯಗಳಲ್ಲಿ ಅವರು ಕೇವಲ 186 ರನ್‌ ಮಾತ್ರ ಗಳಿಸಿದ್ದರು. ಮೊದಲ ಟೆಸ್ಟ್‌ ನಲ್ಲಿ ಶತಕ ಗಳಿಸಿದ್ದರೂ ಉಳಿದ ನಾಲ್ಕು ಪಂದ್ಯಗಳಿಂದ ಅವರು ಕೇವಲ 86 ರನ್‌ ಮಾತ್ರ ಮಾಡಿದ್ದರು. 38 ವರ್ಷದ ರೋಹಿತ್ ಶರ್ಮಾ ವಿರಾಟ್ ಕೊಹ್ಲಿ 123 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 30 ಶತಕಗಳೊಂದಿಗೆ 9,230 ರನ್ ಗಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT