ಬಿಸಿಸಿಐ 
ಕ್ರಿಕೆಟ್

England Test series: ಮೇ 23ರಂದು ಟೀಂ ಇಂಡಿಯಾ ಹೊಸ ನಾಯಕ, ತಂಡ ಪ್ರಕಟ

ಬಿಸಿಸಿಐ ಪತ್ರಿಕಾಗೋಷ್ಠಿ ನಡೆಸಿ, ಇಂಗ್ಲೆಂಡ್ ಪ್ರವಾಸಕ್ಕೆ ತೆರಳುವ ತಂಡದೊಂದಿಗೆ ಭಾರತ ಕ್ರಿಕೆಟ್ ತಂಡದ ಹೊಸ ಟೆಸ್ಟ್ ನಾಯಕನನ್ನು ಘೋಷಿಸಲಿದೆ.

ಟೆಸ್ಟ್ ಕ್ರಿಕೆಟ್‌ಗೆ ರೋಹಿತ್ ಶರ್ಮಾ ನಿವೃತ್ತಿ ಘೋಷಿಸಿರುವ ಹಿನ್ನೆಲೆಯಲ್ಲಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮೇ 23 ರಂದು ಟೀಂ ಇಂಡಿಯಾಗೆ ಹೊಸ ನಾಯಕನನ್ನು ನೇಮಿಸಲಿದೆ. ಇಂಗ್ಲೆಂಡ್ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಮೇ 20 ರೊಳಗೆ ಘೋಷಿಸಲಾಗುವುದು ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಹೇಳಿದ್ದರು. ಆದರೆ, ಇದೀಗ ನಾಯಕ ಮತ್ತು ತಂಡದ ಘೋಷಣೆ ತಡವಾಗಲಿದೆ.

ಕ್ರಿಕ್‌ಬಜ್ ಪ್ರಕಾರ, ಬಿಸಿಸಿಐ ಪತ್ರಿಕಾಗೋಷ್ಠಿ ನಡೆಸಿ, ಇಂಗ್ಲೆಂಡ್ ಪ್ರವಾಸಕ್ಕೆ ತೆರಳುವ ತಂಡದೊಂದಿಗೆ ಭಾರತ ಕ್ರಿಕೆಟ್ ತಂಡದ ಹೊಸ ಟೆಸ್ಟ್ ನಾಯಕನನ್ನು ಘೋಷಿಸಲಿದೆ. ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲು ಬಯಸಿರುವುದಾಗಿ ಬಿಸಿಸಿಐಗೆ ತಿಳಿಸಿದ್ದಾರೆ ಎಂಬ ಕಾರಣಕ್ಕೆ ಈ ದಿನಾಂಕವನ್ನು ಒಂದೆರಡು ದಿನ ಮುಂದಕ್ಕೆ ತಳ್ಳಲಾಗಿದೆ.

ಇದೀಗ, ಬಿಸಿಸಿಐ ವಿರಾಟ್ ಕೊಹ್ಲಿ ಅವರ ನಿರ್ಧಾರವನ್ನು ಬದಲಿಸಿಕೊಳ್ಳುವಂತೆ ಮನವೊಲಿಸಲು ಪ್ರಯತ್ನಿಸುತ್ತಿದೆ. ಟೀಂ ಇಂಡಿಯಾದ ಮಾಜಿ ನಾಯಕ ಯು-ಟರ್ನ್ ತೆಗೆದುಕೊಳ್ಳುತ್ತಾರಾ ಎಂಬುದಕ್ಕೆ ಕಾಲವೇ ಉತ್ತರಿಸಬೇಕಿದೆ. ಇದರಿಂದಾಗಿಯೇ ಇಂಗ್ಲೆಂಡ್ ಟೆಸ್ಟ್ ಸರಣಿಗೆ ಭಾರತದ ತಂಡವನ್ನು ಮೇ 20ರ ಬದಲು ಮೇ 23 ರಂದು ಪ್ರಕಟಿಸಲು ಕಾರಣವಾಗಿರಬಹುದು ಎನ್ನಲಾಗಿದೆ.

ರೋಹಿತ್ ಶರ್ಮಾ ನಿವೃತ್ತಿ ಘೋಷಿಸುವ ಮುನ್ನವೇ, ಜಸ್ಪ್ರೀತ್ ಬುಮ್ರಾ ಅವರನ್ನು ಟೀಂ ಇಂಡಿಯಾದ ನಾಯಕನಾಗಿ ಘೋಷಿಸಲು ಬಿಸಿಸಿಐ ಆಸಕ್ತಿ ಹೊಂದಿರಲಿಲ್ಲ ಎಂದು ವರದಿಯಾಗಿತ್ತು. ಬುಮ್ರಾ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಭಾರತದ ಉಪನಾಯಕರಾಗಿದ್ದರು. ಆದರೆ, ಬುಮ್ರಾ ನಾಯಕನಾದರೆ ಒತ್ತಡಕ್ಕೆ ಸಿಲುಕುವ ಸಾಧ್ಯತೆ ಇರುವುದರಿಂದ ಬಿಸಿಸಿಐ ಬೇರೊಬ್ಬರನ್ನು ನಾಯಕನನ್ನಾಗಿ ಮಾಡುವುದಕ್ಕೆ ಚಿಂತಿಸುತ್ತಿದೆ ಎನ್ನಲಾಗಿದೆ.

ಟೀಂ ಇಂಡಿಯಾದ ನಾಯಕನ ಸ್ಥಾನಕ್ಕೆ ರಿಷಭ್ ಪಂತ್ ಮತ್ತು ಶುಭಮನ್ ಗಿಲ್ ಅವರ ಹೆಸರುಗಳಿವೆ. ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮರಳಿದಾಗಿನಿಂದ ರಿಷಭ್ ಪಂತ್ ಉತ್ತಮ ಫಾರ್ಮ್‌ನಲ್ಲಿಲ್ಲ. ಇದಲ್ಲದೆ, ಲಕ್ನೋ ಸೂಪರ್ ಜೈಂಟ್ಸ್ ನಾಯಕನಾಗಿ ಅವರ ನಾಯಕತ್ವವು ಪ್ರಶ್ನಾರ್ಹವಾಗಿದೆ. ಈಮಧ್ಯೆ, ಶುಭಮನ್ ಗಿಲ್ ಭಾರತದ ಏಕದಿನ ಮತ್ತು ಟಿ20ಐಗಳಲ್ಲಿ ಉಪನಾಯಕರಾಗಿದ್ದಾರೆ. ಮತ್ತು ಅವರು ಗುಜರಾತ್ ಟೈಟಾನ್ಸ್ ಅನ್ನು ಅದ್ಭುತವಾಗಿ ಮುನ್ನಡೆಸುತ್ತಿದ್ದಾರೆ.

ಗಿಲ್ ಅವರು ಪಂತ್‌ಗಿಂತ ಎರಡು ವರ್ಷ ಚಿಕ್ಕವರು. ಟೆಸ್ಟ್ ಕ್ರಿಕೆಟ್‌ನಲ್ಲಿ ಅವರ ಪ್ರದರ್ಶನ ಉತ್ತಮವಾಗಿಲ್ಲದಿದ್ದರೂ, ಅವರನ್ನು ಭಾರತದ ಸಂಭಾವ್ಯ ನಾಯಕ ಎಂದು ಬಹಳ ಹಿಂದಿನಿಂದಲೂ ಗುರುತಿಸಲಾಗಿದೆ. ಬಿಸಿಸಿಐ ಇಂಗ್ಲೆಂಡ್‌ಗೆ ತಂಡವನ್ನು ಘೋಷಿಸಿದಾಗ ಗಿಲ್ ಅವರನ್ನು ಭಾರತದ ಹೊಸ ಟೆಸ್ಟ್ ನಾಯಕನನ್ನಾಗಿ ಹೆಸರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT