ಚಿನ್ನಸ್ವಾಮಿ ಕ್ರೀಡಾಂಗಣ 
ಕ್ರಿಕೆಟ್

IPL 2025: ಭಾರಿ ಮಳೆಯಿಂದ RCB ವಿರುದ್ಧದ ಪಂದ್ಯ ರದ್ದು; ಟೂರ್ನಿಯಿಂದ ಹೊರಬಿದ್ದ KKR

ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿಗದಿಯಾಗಿದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು(RCB) ಹಾಗೂ ಕೊಲ್ಕತ್ತಾ ನೈಟ್‌ ರೈಡರ್ಸ್‌(KKR) ನಡುವಿನ ಪಂದ್ಯ ಭಾರಿ ಮಳೆಯಿಂದ ರದ್ದಾಗಿದೆ.

ಬೆಂಗಳೂರು: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯಿಂದಾಗಿ ಸ್ಥಗಿತಗೊಂಡಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ಶನಿವಾರ ಪುನರಾರಂಭವಾಗುವ ಮುನ್ನವೇ ಮಳೆಯಿಂದ ರದ್ದಾಗಿದ್ದು, ಕ್ರಿಕೆಟ್ ಅಭಿಮಾನಿಗಳಿಗೆ ತೀವ್ರ ನಿರಾಸೆ ಮೂಡಿಸಿದೆ.

ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿಗದಿಯಾಗಿದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು(RCB) ಹಾಗೂ ಕೊಲ್ಕತ್ತಾ ನೈಟ್‌ ರೈಡರ್ಸ್‌(KKR) ನಡುವಿನ ಪಂದ್ಯ ಭಾರಿ ಮಳೆಯಿಂದ ರದ್ದಾಗಿದೆ.

ಕೆಕೆಆರ್‌ಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿತ್ತು. ಆದರೆ ಮಳೆಯಿಂದ ಪಂದ್ಯವೇ ರದ್ದಾಗಿರುವುದರಿಂದ ಟೂರ್ನಿಯಿಂದ ಹೊರಬಿದ್ದಿದೆ. ಪಂದ್ಯ ಮಳೆಯಿಂದ ರದ್ದಾಗಿರುವುದರಿಂದ ಎರಡೂ ತಂಡಗಳಿಗೆ ತಲಾ ಒಂದು ಪಾಯಿಂಟ್ ಸಿಗುತ್ತದೆ.

ಕೆಕೆಆರ್ ತಂಡ 12 ಪಂದ್ಯಗಳಲ್ಲಿ 5 ಗೆಲುವು, 6 ಸೋಲು ಮತ್ತು ಒಂದು ರದ್ದಾದ ಪಂದ್ಯದೊಂದಿಗೆ ಪ್ರಸ್ತುತ 12 ಅಂಕಗಳನ್ನು ಹೊಂದಿದೆ.

ಇನ್ನು ಆರ್ ಸಿಬಿ ಆಡಿರುವ 11 ಪಂದ್ಯಗಳಲ್ಲಿ 8 ರಲ್ಲಿ ಗೆಲುವು ಸಾಧಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಈಗ ಒಂದು ಪಂದ್ಯ ರದ್ದಾದರೂ ಪ್ಲೇ ಆಫ್ ಸ್ಥಾನ ಖಾತ್ರಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT