ಸಾಯಿ ಸುದರ್ಶನ್ ಹಾಗೂ ಶುಭಮನ್ ಗಿಲ್ 
ಕ್ರಿಕೆಟ್

IPL 2025: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಟೈಟನ್ಸ್ ಭರ್ಜರಿ ಗೆಲುವು

ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೆ.ಎಲ್. ರಾಹುಲ್ ಅವರ ಭರ್ಜರಿ ಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ ಮೂರು ವಿಕೆಟ್‌ ಕಳೆದುಕೊಂಡು 199 ರನ್‌ ಸೇರಿಸಿತು.

ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್(IPL)ನ 60ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಭಾನುವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ.

ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೆ.ಎಲ್. ರಾಹುಲ್ ಅವರ ಭರ್ಜರಿ ಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ ಮೂರು ವಿಕೆಟ್‌ ಕಳೆದುಕೊಂಡು 199 ರನ್‌ ಸೇರಿಸಿತು.

ಗೆಲುವಿಗೆ 200 ರನ್ ಗಳ ಬೃಹತ್ ಗುರಿ ಬೆನ್ನತ್ತಿದ ಗುಜರಾತ್ ಟೈಟನ್ಸ್, ಸಾಯಿ ಸುದರ್ಶನ್(108) ಅವರ ಶತಕ ಹಾಗೂ ಶುಭಮನ್‌ ಗಿಲ್‌(93) ಅವರ ಅಬ್ಬರದ ಅರ್ಧಶತಕದ ನೆರವಿನಿಂದ ಯಾವುದೇ ವಿಕೆಟ್ ನಷ್ಟವಿಲ್ಲದೆ 19 ಓವರ್ ಗಳಲ್ಲಿ 205 ರನ್ ಗಳಿಸುವ ಮೂಲಕ 10 ವಿಕೆಟ್ ಗಳಿಂದ ಗೆಲುವು ಸಾಧಿಸಿತು.

ಮೂರು ವರ್ಷಗಳ ನಂತರ ರಾಹುಲ್ ಶತಕ

ರಾಹುಲ್ 65 ಎಸೆತಗಳಲ್ಲಿ 14 ಬೌಂಡರಿ ಮತ್ತು 4 ಸಿಕ್ಸರ್‌ಗಳಿಂದ ಅಜೇಯ 112 ರನ್ ಬಾರಿಸಿ ಪೆವಿಲಿಯನ್​ಗೆ ಮರಳಿದರು. ಈ ಶತಕದೊಂದಿಗೆ ರಾಹುಲ್ 3 ವರ್ಷಗಳ ಕಾಯುವಿಕೆಗೂ ಅಂತ್ಯ ಹಾಡಿದರು. ಇದಕ್ಕೂ ಮೊದಲು, ಐಪಿಎಲ್ 2022 ರ ಸೀಸನ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕನಾಗಿ 2 ಶತಕ ಬಾರಿಸಿದ್ದರು. ಒಟ್ಟಾರೆಯಾಗಿ, ಇದು ರಾಹುಲ್ ಅವರ ಐಪಿಎಲ್ ವೃತ್ತಿಜೀವನದಲ್ಲಿ 5 ನೇ ಶತಕವಾಗಿದೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT