ಪಂಜಾಬ್ ತಂಡ 
ಕ್ರಿಕೆಟ್

IPL 2025: ರಾಜಸ್ಥಾನ ರಾಯಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಗೆಲುವು

ಇಂದು ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಪಂಜಾಬ್, ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 219 ರನ್‌ ಸೇರಿಸಿತು.

ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್(IPL)ನ 59ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಭಾನುವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ 10 ರನ್‌ಗಳಿಂದ ಗೆಲುವು ಸಾಧಿಸಿದೆ. ಈ ಮೂಲಕ ಪಂಜಾಬ್ ಪೂರ್ಣ ಎರಡು ಅಂಕಗಳನ್ನು ಕಲೆ ಹಾಕಿ, ಅಂಕ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಬಡ್ತಿ ಪಡೆದಿದೆ.

ಇಂದು ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಪಂಜಾಬ್, ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 219 ರನ್‌ ಸೇರಿಸಿತು.

ಗೆಲುವಿಗೆ 220 ರನ್ ಗಳ ಬೃಹತ್ ಗುರಿ ಬೆನ್ನತ್ತಿದ ರಾಜಸ್ಥಾನ ರಾಯಲ್ಸ್‌, ವೈಭವ್ ಸೂರ್ಯವಂಶಿ ಅವರ ಸಿಡಿಲಬ್ಬರದ ಬ್ಯಾಟಿಂಗ್‌ ಹೊರತಾಗಿಯೂ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 209 ರನ್‌ ಗಳಿಸಿ 10 ರನ್ ಗಳಿಂದ ಸೋಲೊಪ್ಪಿಕೊಂಡಿತು.

ಪಂಜಾಬ್ ಈಗ 17 ಅಂಕಗಳೊಂದಿಗೆ ಪಟ್ಟಿಯಲ್ಲಿ 2 ನೇ ಸ್ಥಾನದಲ್ಲಿದೆ ಮತ್ತು ಪ್ಲೇ-ಆಫ್‌ಗೆ ಪರಿಣಾಮಕಾರಿಯಾಗಿ ಅರ್ಹತೆ ಪಡೆದಿದೆ.

34 ರನ್‌ಗಳಿಗೆ ಮೂರು ವಿಕೆಟ್‌ ಕಳೆದುಕೊಂಡು ಸಂಕಷ್ಟದಲ್ಲಿದ್ದ ಪಂಜಾಬ್ ತಂಡಕ್ಕೆ ಮಧ್ಯಮ ಕ್ರಮಾಂಕದಲ್ಲಿ ನೆಹಾಲ್‌ ವಧೇರಾ, ನಾಯಕ ಶ್ರೇಯಸ್‌ ಅಯ್ಯರ್‌ ಉತ್ತಮ ಜೊತೆಯಾಟದ ಕಾಣಿಕೆ ನೀಡಿ ತಂಡಕ್ಕೆ ನೆರವಾದರು. ಈ ಜೋಡಿ ನೀಡಿದ ಭರ್ಜರಿ ಜೊತೆಯಾಟದ ಕಾರಣದಿಂದಲೇ ಪಂಜಾಬ್‌ ಕಿಂಗ್ಸ್‌ ಸವಾಲಿನ ಮೊತ್ತ ಸೇರಿಸಿತು.

ವಧೇರಾ, ಶ್ರೇಯಸ್ ಜೋಡಿ 44 ಎಸೆತಗಳಲ್ಲಿ 67 ರನ್‌ ಸೇರಿಸಿತು. ಶ್ರೇಯಸ್‌ ಅಯ್ಯರ್‌ 5 ಬೌಂಡರಿ ನೆರವಿನಿಂದ 30 ರನ್‌ ಸಿಡಿಸಿ ಔಟ್ ಆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಾಕಿಸ್ತಾನದ ಉನ್ನತ ರಾಜತಾಂತ್ರಿಕರಿಗೆ ಭಾರತದ ಸಮನ್ಸ್; ಗಡಿಯಾಚೆಗಿನ ಒಳನುಸುಳುವಿಕೆಯ ವಿರುದ್ಧ ಪ್ರತಿಭಟನೆ

ಶಿಕ್ಷಕರ ಕೊರತೆ ಎಂದು ದೂರಿದ್ದೇ ತಪ್ಪಾಯ್ತು ಪಂಜಾಬ್ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತು!

ಸ್ಟೈಲಿಶ್ ಕಪ್ಪು ಉಡುಪಿನಲ್ಲಿ ಮಿಂಚಿದ ಪಾರ್ವತಿ ತಿರುವೋತ್; ದಂಗಾದ ಅಭಿಮಾನಿಗಳು, Video!

Asian Games 2026: ಮಲೇಷ್ಯಾ ಸೋಲಿಸಿ ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

ಬಿಜೆಪಿ ಜಿಲ್ಲಾಧ್ಯಕ್ಷರಿಂದ ನನ್ನ ಮೇಲೆ ಪದೇ ಪದೇ ಅತ್ಯಾಚಾರ: ಉತ್ತರ ಪ್ರದೇಶ ಪಕ್ಷದ ನಾಯಕಿಯ ಗಂಭೀರ ಆರೋಪ