ಟಾಮ್ ಕರ್ರಾನ್  
ಕ್ರಿಕೆಟ್

ಭಾರತ-ಪಾಕಿಸ್ತಾನ ಉದ್ವಿಗ್ನತೆ ವೇಳೆ ಮಗುವಿನಂತೆ ಅತ್ತರೇ? ಕೊನೆಗೂ ಮೌನ ಮುರಿದ ಇಂಗ್ಲೆಂಡ್ ವೇಗಿ Tom Curran!

ಮತ್ತೆ ಲೀಗ್ ಆರಂಭವಾಗುತ್ತಿರುವುದಕ್ಕೆ ಸಂತೋಷವಾಗುತ್ತಿದೆ. ಎರಡು ವಿಶೇಷ ದೇಶಗಳ ನಡುವೆ ನಿರಂತರ ಶಾಂತಿಗಾಗಿ ನಾನು ಪ್ರಾರ್ಥಿಸುತ್ತೇನೆ.

ನವದೆಹಲಿ: ಭಾರತ -ಪಾಕಿಸ್ತಾನ ಉದ್ವಿಗ್ನತೆ ಸಂದರ್ಭದಲ್ಲಿ ಇಂಗ್ಲೆಂಡ್ ನ ವೇಗಿ ಟಾಮ್ ಕರ್ರಾನ್ ಮಗುವಿನಂತೆ ಅತ್ತಿದ್ದರು ಎಂದು ಹೇಳಲಾಗಿತ್ತು. ಈ ಕುರಿತು ಕೊನೆಗೂ ಅವರು ಮೌನ ಮುರಿದಿದ್ದಾರೆ. ಬಾಂಗ್ಲಾದೇಶದ ಆಲ್‌ರೌಂಡರ್ ರಿಶಾದ್ ಹೊಸೈನ್ ನೀಡಿದ ಹೇಳಿಕೆಯನ್ನು ಅವರು ತಳ್ಳಿ ಹಾಕಿದ್ದಾರೆ.

ಈ ಕುರಿತು ಇನ್ಸ್ಟಾಗ್ರಾಮ್ ನಲ್ಲಿ ಫೋಸ್ಟ್ ಮಾಡಿರುವ ಕರ್ರಾನ್, ಕಠಿಣ ಸಂದರ್ಭದಲ್ಲಿ ನಾನು ಅತ್ತಿಲ್ಲ ಎಂದು ಸ್ಪಷ್ಪಪಡಿಸಿದ್ದಾರೆ.

ಸದ್ಯ ಪಾಕಿಸ್ತಾನ್ ಸೂಪರ್ ಲೀಗ್‌ನಲ್ಲಿ (PSL) ಲಾಹೋರ್ ಖಲಂದರ್ಸ್‌ಗಾಗಿ ಆಡುತ್ತಿರುವ ಕರ್ರಾನ್, ಕದನ ವಿರಾಮದ ನಂತರ ಲೀಗ್ ಮತ್ತೆ ಪುನರಾರಂಭ ಆಗಿರುವುದಕ್ಕೆ ಸಮಾಧಾನ ವ್ಯಕ್ತಪಡಿಸಿದ್ದಾರೆ.

ಮತ್ತೆ ಲೀಗ್ ಆರಂಭವಾಗುತ್ತಿರುವುದಕ್ಕೆ ಸಂತೋಷವಾಗುತ್ತಿದೆ. ಎರಡು ವಿಶೇಷ ದೇಶಗಳ ನಡುವೆ ನಿರಂತರ ಶಾಂತಿಗಾಗಿ ನಾನು ಪ್ರಾರ್ಥಿಸುತ್ತೇನೆ. "Btw promise ನಾನು ಅತ್ತಿಲ್ಲ ಎಂದು ನಗುವ ಎಮೋಜಿ ಹಾಕಿದ್ದಾರೆ.

ಈ ಹಿಂದೆ ಟಾಮ್ ಕರ್ರಾನ್ ವಿಮಾನ ನಿಲ್ದಾಣಕ್ಕೆ ಹೋದಾಗ ಮುಚ್ಚಿದ್ದರಿಂದ ಅವರು ಚಿಕ್ಕ ಮಗುವಿನಂತೆ ಅತ್ತಿದ್ದರು. ಅವರನ್ನು ಸಮಾಧಾನಪಡಿಸಲು ಎರಡು ಅಥವಾ ಮೂರು ಜನರು ಬೇಕಾದರು ಎಂದು ರಿಶಾದ್ ಕ್ರಿಕ್‌ಬಜ್‌ಗೆ ತಿಳಿಸಿದರು. ಆದಾಗ್ಯೂ, ತದನಂತರ ರಿಷಾದ್ ತನ್ನ ಹೇಳಿಕೆಗಾಗಿ ಕರ್ರಾನ್ ಮತ್ತು ಮಿಚ್ಚೆಲ್ ಅವರ ಕ್ಷಮೆಯಾಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್