ಐಪಿಎಲ್ ಪ್ಲೇ ಆಫ್ (ಸಂಗ್ರಹ ಚಿತ್ರ) 
ಕ್ರಿಕೆಟ್

IPL 2025: ಐಪಿಎಲ್ ಇತಿಹಾಸ, ಒಂದೇ ಬಾರಿಗೆ 3 ತಂಡಗಳು ಪ್ಲೇಆಫ್ ಗೆ ಪ್ರವೇಶ

ಮೊದಲು ಬ್ಯಾಟಿಂಗ್ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಿಗಧಿತ 20 ಓವರ್ ನಲ್ಲಿ ಕೆಎಲ್ ರಾಹುಲ್ ರ ಅಜೇಯ ಶತಕದ ನೆರವಿನಿಂದ 3 ವಿಕೆಟ್ ನಷ್ಟಕ್ಕೆ 199 ರನ್ ಗಳಿಸಿತು.

ನವದೆಹಲಿ: ಹಾಲಿ ಐಪಿಎಲ್ ಟೂರ್ನಿಯಲ್ಲಿ ಅಪರೂಪದ ದಾಖಲೆಯೊಂದು ನಿರ್ಮಾಣವಾಗಿದ್ದು ಒಂದೇ ದಿನ ಬರೊಬ್ಬರಿ 3 ತಂಡಗಳು ಏಕಕಾಲದಲ್ಲಿ ಪ್ಲೇಆಫ್ ಹಂತಕ್ಕೆ ಪ್ರವೇಶ ಪಡೆದಿವೆ.

ನಿನ್ನೆ ನಡೆದ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಟೈಟನ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡ ಬರೊಬ್ಬರಿ 10 ವಿಕೆಟ್ ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿತು. ಮೊದಲು ಬ್ಯಾಟಿಂಗ್ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಿಗಧಿತ 20 ಓವರ್ ನಲ್ಲಿ ಕೆಎಲ್ ರಾಹುಲ್ ರ ಅಜೇಯ ಶತಕದ ನೆರವಿನಿಂದ 3 ವಿಕೆಟ್ ನಷ್ಟಕ್ಕೆ 199 ರನ್ ಗಳಿಸಿತು.

ಡೆಲ್ಲಿ ನೀಡಿದ 200 ರನ್ ಗಳ ಬೃಹತ್ ಗುರಿ ಬೆನ್ನು ಹತ್ತಿದ ಗುಜರಾತ್ ಟೈಟನ್ಸ್ ಸಾಯಿ ಸುದರ್ಶನ್ ಅಜೇಯ ಶತಕ (108*) ಮತ್ತು ನಾಯಕ ಶುಭ್ ಮನ್ ಗಿಲ್ (93*) ಅರ್ಧಶತಕದ ನೆರವಿನಿಂದ 10 ವಿಕೆಟ್ ಅಂತರದ ಭರ್ಜರಿ ಜಯ ಸಾಧಿಸಿತು. ಈ ಮೂಲಕ ಗುಜರಾತ್ ತಾನು ಮಾತ್ರವಲ್ಲದೇ ತನ್ನೊಂದಿಗೆ ಇತರೆ 2 ತಂಡಗಳನ್ನೂ ಕೂಡ ಪ್ಲೇ ಆಫ್ ಹಂತಕ್ಕೇರಿಸಿದೆ.

ಹಾಲಿ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಗುಜರಾತ್ ಟೈಟನ್ಸ್, ಆರ್ ಸಿಬಿ ಮತ್ತು ಪಂಜಾಬ್ ಕಿಂಗ್ಸ್ ಪ್ಲೇಆಫ್ ಹಂತಕ್ಕೆ ಪ್ರವೇಶ ಪಡೆದಿವೆ. ಬಾಕಿ ಇರುವ ಒಂದು ಸ್ಥಾನಕ್ಕಾಗಿ ಮುಂಬೈ ಇಂಡಿಯನ್ಸ್, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಭಾನುವಾರ ನಡೆದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವು 18 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಆರ್‌ಸಿಬಿ ಮತ್ತು ಪಿಬಿಕೆಎಸ್ ತಂಡಗಳು ತಲಾ 17 ಅಂಕಗಳೊಂದಿಗೆ ಎರಡನೇ ಮತ್ತು ಮೂರನೇ ಸ್ಥಾನದಲ್ಲಿವೆ. ಈ ತಂಡಗಳು ತಲಾ 12 ಪಂದ್ಯಗಳನ್ನು ಆಡಿವೆ.

4ನೇ ಸ್ಥಾನಕ್ಕಾಗಿ ತೀವ್ರ ಪೈಪೋಟಿ

ಪ್ರಸ್ತುತ 4ನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ತಂಡ 12 ಪಂದ್ಯಗಳಿಂದ 14 ಅಂಕಗಳನ್ನು ಹೊಂದಿದೆ. ಡೆಲ್ಲಿ ಕ್ಯಾಪಿಟಲ್ಸ್ ಕೂಡ 12 ಪಂದ್ಯಗಳಿಂದ 14 ಅಂಕಗಳನ್ನು ಹೊಂದಿದೆ. ಲಕ್ನೋ ಸೂಪರ್ ಜೈಂಟ್ಸ್ ತಂಡ 11 ಪಂದ್ಯಗಳಿಂದ 10 ಅಂಕಗಳನ್ನು ಹೊಂದಿದೆ.

ಈ ಪೈಕಿ ಮುಂಬೈ ತಂಡ ಬಾಕಿ ಇರುವ 2 ಪಂದ್ಯಗಳನ್ನು ಗೆದ್ದರೆ ಅದರ ಅಂಕಗಳಿಗೆ 18 ಆಗಲಿದ್ದು, ಆಗ ಅಧಿಕೃತವಾಗಿ ಪ್ಲೇಆಫ್ ಪ್ರವೇಶ ಮಾಡಲಿದೆ. ಅಂತೆಯೇ ಲಕ್ನೋ ತಂಡ ತನ್ನ ಪಾಲಿನ ಮೂರೂ ಪಂದ್ಯಗಳನ್ನು ಗೆದ್ದರೆ ಅದರ ಅಂಕಗಳಿಕೆ 16ಕ್ಕೇರುತ್ತದೆ.

ಆಗ ಲಕ್ನೋ ಇತರೆ ತಂಡಗಳ ಫಲಿತಾಂಶದ ಮೇಲೆ ಅದರ ಪ್ಲೇಆಫ್ ಭವಿಷ್ಯ ನಿಲ್ಲುತ್ತದೆ. ಡೆಲ್ಲಿ ಕ್ಯಾಪಿಟಲ್ಸ್ ಕೂಡ 12 ಪಂದ್ಯಗಳಿಂದ 13 ಅಂಕಗಳಿಸಿದ್ದು ಬಾಕಿ ಇರುವ ಎರಡೂ ಪಂದ್ಯಗಳನ್ನು ಗೆದ್ದರೆ ಅದರ ಅಂಕಗಳಿಕೆ 17 ಆಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT