ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್ 
ಕ್ರಿಕೆಟ್

IPL 2025: 'virtual quarterfinal'; MI vs DC ಪಂದ್ಯವನ್ನು ಮುಂಬೈನಿಂದ ಬೇರೆಡೆಗೆ ಸ್ಥಳಾಂತರಿಸಿ ಎಂದ ಡೆಲ್ಲಿ ಕ್ಯಾಪಿಟಲ್ಸ್ ಮಾಲೀಕ

ಅಕ್ಯೂವೆದರ್ ಪ್ರಕಾರ, ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದ ಸಮಯದಲ್ಲಿ ಮುಂಬೈನಲ್ಲಿ ಮಳೆಯಾಗುವ ಸಾಧ್ಯತೆ ಶೇ 90ರಷ್ಟಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಡೆಲ್ಲಿ ಕ್ಯಾಪಿಟಲ್ಸ್‌ನ (DC) ಸಹ-ಮಾಲೀಕ ಪಾರ್ಥ ಜಿಂದಾಲ್, ಬುಧವಾರ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಮುಂಬೈ ಇಂಡಿಯನ್ಸ್ (MI) ವಿರುದ್ಧದ ಡಿಸಿ ಪಂದ್ಯವನ್ನು ಮುಂಬೈನಿಂದ ಬೇರೆಡೆಗೆ ಸ್ಥಳಾಂತರಿಸುವಂತೆ ಬಿಸಿಸಿಐಗೆ ಪತ್ರ ಬರೆದಿದ್ದಾರೆ. ಐಪಿಎಲ್ 2025ರ ಪ್ಲೇಆಫ್ ಭರವಸೆಯನ್ನು ಜೀವಂತವಾಗಿಟ್ಟುಕೊಳ್ಳಲು ಉಭಯ ತಂಡಗಳಿಗೂ ಇದು ಗೆಲ್ಲಲೇಬೇಕಾಗಿರುವ ಪಂದ್ಯವಾಗಿದ್ದು, ಎಂಐ ಮತ್ತು ಡಿಸಿ ಸದ್ಯ ಅಂಕ ಪಟ್ಟಿಯಲ್ಲಿ ಕ್ರಮವಾಗಿ 4 ಮತ್ತು 5 ನೇ ಸ್ಥಾನದಲ್ಲಿವೆ. ಈಗಾಗಲೇ ಮೂರು ತಂಡಗಳು ಪ್ಲೇಆಫ್‌ನಲ್ಲಿ ಸ್ಥಾನ ಪಡೆದಿದ್ದು, ಉಳಿದಿರುವ ನಾಲ್ಕನೇ ಮತ್ತು ಕೊನೆಯ ಸ್ಥಾನಕ್ಕಾಗಿ ಸೆಣಸಲಿವೆ.

ಇಎಸ್‌ಪಿಎನ್‌ಕ್ರಿಕ್‌ಇನ್ಫೋ ಪ್ರಕಾರ, ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯ ಸಹ-ಮಾಲೀಕ ಪಾರ್ಥ ಜಿಂದಾಲ್ ಪಂದ್ಯದ ಮುನ್ನಾದಿನದಂದು ಇಮೇಲ್‌ನಲ್ಲಿ ಮುಂಬೈನಲ್ಲಿ ಡಿಸಿ ಮತ್ತು ಎಂಐ ಪಂದ್ಯವು ಮಳೆಯಿಂದ ರದ್ದಾಗುವ ಸಾಧ್ಯತೆಯಿದೆ. ಪಂದ್ಯವನ್ನು ಮುಂಬೈನಿಂದ ಹೊರಗೆ ಬೇರೆಡೆಗೆ ಸ್ಥಳಾಂತರಿಸುವುದು ಲೀಗ್‌ನ ಹಿತದೃಷ್ಟಿಯಿಂದ ಉತ್ತಮ ಎಂದು ಹೇಳಿದ್ದಾರೆ. ಘರ್ಷಣೆಯನ್ನು 'ವರ್ಚುವಲ್ ಕ್ವಾರ್ಟರ್‌ಫೈನಲ್' ಎಂದು ಕರೆದಿದ್ದಾರೆ.

ಅಕ್ಯೂವೆದರ್ ಪ್ರಕಾರ, ಪಂದ್ಯದ ಸಮಯದಲ್ಲಿ ಮುಂಬೈನಲ್ಲಿ ಮಳೆಯಾಗುವ ಸಾಧ್ಯತೆ ಶೇ 90ರಷ್ಟಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

'ಮುಂಬೈನಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಪಂದ್ಯ ರದ್ದಾಗುವ ಸಾಧ್ಯತೆ ಹೆಚ್ಚಿದೆ. ಸ್ಥಿರತೆ ಮತ್ತು ಲೀಗ್‌ನ ಹಿತದೃಷ್ಟಿಯಿಂದ ಆರ್‌ಸಿಬಿ ಮತ್ತು ಎಸ್‌ಆರ್‌ಹೆಚ್ ನಡುವಿನ ಪಂದ್ಯವನ್ನು ಬೆಂಗಳೂರಿನಿಂದ ಹೊರಗೆ ಸ್ಥಳಾಂತರಿಸಿರುವಂತೆಯೇ, ನಾಳೆ ನಡೆಯಲಿರುವ ಪಂದ್ಯವನ್ನು ಕೂಡ ಬೇರೆ ಸ್ಥಳಕ್ಕೆ ಸ್ಥಳಾಂತರಿಸಬೇಕೆಂದು ನಾನು ವಿನಂತಿಸುತ್ತೇನೆ. ಏಕೆಂದರೆ 21ರಂದು ಮುಂಬೈನಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಕಳೆದ 6 ದಿನಗಳಿಂದ ನಮಗೆ ತಿಳಿದಿದೆ' ಎಂದಿದ್ದಾರೆ.

ಐಪಿಎಲ್ 2025ರಲ್ಲಿ ಕೊನೆ ಕ್ಷಣದ ನಿಯಮ ಬದಲಾವಣೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಕೆಕೆಆರ್ ಸಿಇಒ ವೆಂಕಿ ಮೈಸೂರು ಬಿಸಿಸಿಐಗೆ ಪತ್ರ ಬರೆದ ದಿನವೇ ಜಿಂದಾಲ್ ಅವರು ಮೇಲ್ ಮಾಡಿದ್ದಾರೆ. ಮಳೆ ಬೆದರಿಕೆಯನ್ನು ಗಮನದಲ್ಲಿಟ್ಟುಕೊಂಡು ಪಂದ್ಯದ ಅವಧಿಗೆ 60 ಹೆಚ್ಚುವರಿ ನಿಮಿಷಗಳನ್ನು ಸೇರಿಸುವ ಬಿಸಿಸಿಐ ನಿರ್ಧಾರ ಬೆಂಗಳೂರಿನಲ್ಲಿ ಆರ್‌ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನವೇ ಬಂದಿದ್ದರೆ ಆ ಪಂದ್ಯ ರದ್ದಾಗುತ್ತಿರಲಿಲ್ಲ.ಇದರಿಂದ ತಂಡಕ್ಕೆ ಅನ್ಯಾಯವಾಗಿದೆ ಎಂದು ಕೆಕೆಆರ್ ದೂರಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

SCROLL FOR NEXT