ಮಿಚೆಲ್ ಮಾರ್ಷ್ 
ಕ್ರಿಕೆಟ್

IPL 2025: ಮಿಚೆಲ್ ಶತಕದ ಮಿಂಚು; GT ವಿರುದ್ಧ LSG ಗೆಲುವು

ಮಿಚೆಲ್‌ ಮಾರ್ಷ್‌ ಅವರು 10 ಬೌಂಡರಿ, 8 ಸಿಕ್ಸರ್‌ ಒಳಗೊಂಡಂತೆ 117 ರನ್‌ ಬಾರಿಸಿ ಔಟ್ ಆದರು. ಇದು ಮಿಚೆಲ್‌ ಮಾರ್ಷ್‌ ಅವರ ಐಪಿಎಲ್ ವೃತ್ತಿ ಜೀವನದ ಮೊದಲ ಶತಕವಾಗಿದೆ.

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್(IPL)ನ 64ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ಗುರುವಾರ ಪ್ರಬಲ ಗುಜರಾತ್ ಟೈಟಾನ್ಸ್ ತಂಡ(GT) ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ.

ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡ, ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು.

ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಲಕ್ನೋ ಸೂಪರ್ ಜೈಂಟ್ಸ್, ಆರಂಭಿಕರಾದ ಮಿಚೆಲ್ ಮಾರ್ಷ್(117 ) ಅವರ ಅಬ್ಬರದ ಶತಕ ಹಾಗೂ ನಿಕೋಲಸ್‌ ಪೂರನ್‌(56) ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ ಎರಡು ವಿಕೆಟ್ ಕಳೆದುಕೊಂಡು 235 ರನ್ ಗಳ ಬೃಹತ್ ಮೊತ್ತ ಕಲೆ ಹಾಕಿತು.

ಮಿಚೆಲ್‌ ಮಾರ್ಷ್‌ ಅವರು 10 ಬೌಂಡರಿ, 8 ಸಿಕ್ಸರ್‌ ಒಳಗೊಂಡಂತೆ 117 ರನ್‌ ಬಾರಿಸಿ ಔಟ್ ಆದರು. ಇದು ಮಿಚೆಲ್‌ ಮಾರ್ಷ್‌ ಅವರ ಐಪಿಎಲ್ ವೃತ್ತಿ ಜೀವನದ ಮೊದಲ ಶತಕವಾಗಿದೆ.

ಗೆಲುವಿಗೆ 236ರನ್ ಗಳ ಬೃಹತ್ ಗುರಿ ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡ, 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 202 ರನ್ ಗಳಿಸುವ ಮೂಲಕ ಸೋಲು ಒಪ್ಪಿಕೊಂಡಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ