ಸಂಗ್ರಹ ಚಿತ್ರ 
ಕ್ರಿಕೆಟ್

IPL 2025: ಕೊನೆಯ ಓವರ್‌ಗಳಲ್ಲಿ ಮುಗ್ಗರಿಸಿದ RCB; SRH ಗೆ 42 ರನ್‌ ಗೆಲುವು!

ಇಂಡಿಯನ್ ಪ್ರಿಮಿಯರ್ ಲೀಗ್ (IPL 2025) 65ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಆರ್ ಸಿಬಿ ವಿರುದ್ಧ ಗೆಲುವು ಸಾಧಿಸಿದೆ.

ಇಂಡಿಯನ್ ಪ್ರಿಮಿಯರ್ ಲೀಗ್ (IPL 2025) 65ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಆರ್ ಸಿಬಿ ವಿರುದ್ಧ ಗೆಲುವು ಸಾಧಿಸಿದೆ.

ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ತಂಡ ನಿಗದಿತ 20 ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 231 ರನ್ ಗಳಿಸಿ ಆರ್ ಸಿಬಿಗೆ ಗೆಲ್ಲಲು 232 ರನ್ ಗಳ ಬೃಹತ್ ಗುರಿ ನೀಡಿತ್ತು. ಈ ಗುರಿ ಬೆನ್ನಟ್ಟಿದ ಆರ್ ಸಿಬಿ 189 ರನ್ ಗಳಿಗೆ ಆಲೌಟ್ ಆಗುವ ಮೂಲಕ 42 ರನ್ ಗಳಿಂದ ಸೋಲು ಕಂಡಿದೆ.

ಆರ್‌ಸಿಬಿ ಪ್ಲೇಆಫ್‌ಗೆ ತಲುಪಿದೆ. ಆದಾಗ್ಯೂ, ಅಂಕಪಟ್ಟಿಯಲ್ಲಿ ಅಗ್ರ-2 ರಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಲು RCB ತನ್ನ ಉಳಿದ 2 ಪಂದ್ಯವನ್ನು ಗೆಲ್ಲಬೇಕಾಗಿತ್ತು. ಈಗ ಆರ್‌ಸಿಬಿ ಇತರ ತಂಡಗಳ ಫಲಿತಾಂಶಗಳನ್ನು ಅವಲಂಬಿಸಬೇಕಾಗುತ್ತದೆ. ಆರ್ ಸಿಬಿ ಪರ ಪಿಲ್ ಸಾಲ್ಟ್ 62 ಹಾಗೂ ವಿರಾಟ್ ಕೊಹ್ಲಿ 43 ರನ್ ಗಳಿಸಿ ತಂಡಕ್ಕೆ ಉತ್ತಮ ಆರಂಭ ತಂದುಕೊಟ್ಟರು. ಆದರೆ ಮಿಡಲ್ ಆರ್ಡರ್ ಕೈಕೊಟ್ಟಿದ್ದರಿಂದ ಗೆಲ್ಲುವ ಪಂದ್ಯವನ್ನು ಆರ್ ಸಿಬಿ ಕೈಚೆಲ್ಲಿತು. ಮಾಯಾಂಕ್ ಅಗರವಾಲ್ 11, ಪಾಟಿದಾರ್ 18 ಮತ್ತು ಜಿತೇಶ್ ಶರ್ಮಾ 24 ರನ್ ಗಳಿಸಿದ್ದು ಮತ್ಯಾರು ಎರಡಂಕಿ ದಾಟಿಲ್ಲ. ಹೈದರಾಬಾದ್ ಪರ ಪ್ಯಾಟ್ ಕಮಿನ್ಸ್ 3, ಈಶಾನ್ ಮಲಿಂಗಾ 2 ವಿಕೆಟ್ ಪಡೆದರು.

ಹೈದರಾಬಾದ್ ಪರ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ 48 ಎಸೆತಗಳಲ್ಲಿ ಅಜೇಯ 94 ರನ್ ಗಳಿಸಿದರು. ಅಭಿಷೇಕ್ ಶರ್ಮಾ (17 ಎಸೆತಗಳಲ್ಲಿ 34), ಹೆನ್ರಿಕ್ ಕ್ಲಾಸೆನ್ (13 ಎಸೆತಗಳಲ್ಲಿ 24), ಅನಿಕೇತ್ ವರ್ಮಾ (9 ಎಸೆತಗಳಲ್ಲಿ 26) ಮತ್ತು ಟ್ರಾವಿಸ್ ಹೆಡ್ (10 ಎಸೆತಗಳಲ್ಲಿ 17) ತಮ್ಮ ಆಕ್ರಮಣಕಾರಿ ಬ್ಯಾಟಿಂಗ್ ಮೂಲಕ ಆರ್‌ಸಿಬಿ ಬೌಲರ್‌ಗಳ ಮೇಲೆ ಒತ್ತಡ ಹೇರಿದರು. ಆರ್ ಸಿಬಿ ಪರ ರೊಮಾರಿಯೊ ಶೆಫರ್ಡ್ ಎರಡು ಓವರ್‌ಗಳಲ್ಲಿ 14 ರನ್‌ಗಳಿಗೆ ಎರಡು ವಿಕೆಟ್ ಪಡೆದರೆ, ಭುವನೇಶ್ವರ್ ಕುಮಾರ್, ಲುಂಗಿ ಎನ್‌ಗಿಡಿ, ಸುಯಾಶ್ ಶರ್ಮಾ ಮತ್ತು ಕೃನಾಲ್ ಪಾಂಡ್ಯ ತಲಾ ಒಂದು ವಿಕೆಟ್ ಪಡೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT