ಆರ್ ಸಿಬಿಯ ವಿರಾಟ್ ಕೊಹ್ಲಿ ಸಾಂದರ್ಭಿಕ ಚಿತ್ರ 
ಕ್ರಿಕೆಟ್

IPL 2025 ಪ್ಲೇ-ಆಫ್‌: GTಗೆ ಸೋಲು; ಟಾಪ್-2ರಲ್ಲಿ MI, RCB ಗೆ ಅವಕಾಶ!

ಅಂತಿಮ ಲೀಗ್ ಹಂತದ ಪಂದ್ಯದಲ್ಲಿ ಅವರ ನಿವ್ವಳ ರನ್ ರೇಟ್ ಗಣನೀಯ ಹೊಡೆತಕ್ಕೆ ಕಾರಣವಾಗಲಿದ್ದು, ಪಾಯಿಂಟ್ ಟೇಬಲ್ ನಲ್ಲಿ ಈಗಿರುವ ಸ್ಥಾನ ಕಳೆದುಕೊಳ್ಳಲಿದ್ದು, ಟಾಪ್-2ರಲ್ಲಿ MI,RCBಗೆ ಅವಕಾಶ ಇರಲಿದೆ.

ಚೆನ್ನೈ: ಭಾನುವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 83 ರನ್ ಗಳ ಅಂತರದಿಂದ ಸೋತ ನಂತರ ಐಪಿಎಲ್ 2025 ರಲ್ಲಿ ಗುಜರಾತ್ ಟೈಟಾನ್ಸ್‌ನ ಟಾಪ್-2 ಆಸೆಗೆ ಹೊಡೆತ ಬಿದ್ದಿದೆ. ಈ ಹಿನ್ನಡೆಯ ಹೊರತಾಗಿಯೂ, ಗುಜರಾತ್ ಟೈಟಾನ್ಸ್ ತನ್ನ ಎಲ್ಲಾ 14 ಲೀಗ್ ಪಂದ್ಯಗಳಿಂದ 18 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ಆದಾಗ್ಯೂ, ಅಂತಿಮ ಲೀಗ್ ಹಂತದ ಪಂದ್ಯದಲ್ಲಿ ಅವರ ನಿವ್ವಳ ರನ್ ರೇಟ್ ಗಣನೀಯ ಹೊಡೆತಕ್ಕೆ ಕಾರಣವಾಗಲಿದ್ದು, ಪಾಯಿಂಟ್ ಟೇಬಲ್ ನಲ್ಲಿ ಈಗಿರುವ ಸ್ಥಾನ ಕಳೆದುಕೊಳ್ಳಲಿದ್ದು, ಟಾಪ್-2ರಲ್ಲಿ MI,RCBಗೆ ಅವಕಾಶ ಇರಲಿದೆ.

ಇಂದು ಪಂಜಾಬ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಪ್ಲೇ-ಆಫ್​ ಸ್ಥಾನಕ್ಕಾಗಿ ಪೈಪೋಟಿ ನಡೆಯಲಿದೆ. ನಾಳೆ ಲೀಗ್ ಹಂತದ ಕೊನೆಯ ಪಂದ್ಯ ಆರ್​ಸಿಬಿ ಮತ್ತು ಎಲ್​ಎಸ್​​ಜಿ ನಡುವೆ ನಡೆಯಲಿದೆ. ಈಗಾಗಲೇ ಪಾಯಿಂಟ್ಸ್​ ಟೇಬಲ್​​ನಲ್ಲಿ 17 ಪಾಯಿಂಟ್ ಗಳೊಂದಿಗೆ ಮೂರನೇ ಸ್ಥಾನದಲ್ಲಿರುವ ಆರ್​ಸಿಬಿ ನಾಳೆ ನಡೆಯಲಿರುವ ಪಂದ್ಯವನ್ನು ಗೆದ್ದರೆ ಮಾತ್ರ ಪಾಯಿಂಟ್ಸ್​ ಟೇಬಲ್​​ನಲ್ಲಿ ಟಾಪ್-2ರಲ್ಲಿ ಇರಲಿದೆ.

ಹೀಗಾಗಿ ನಾಳೆ ನಡೆಯಲಿರುವ ಪಂದ್ಯವು ಆರ್​ಸಿಬಿಗೆ ಮಾಡು, ಇಲ್ಲವೇ ಮಡಿ ಆಗಿದೆ. ಒಂದು ವೇಳೆ ಲಕ್ನೋ ವಿರುದ್ಧ ಆರ್ ಸಿಬಿ ಗೆದ್ದರೆ ಟಾಪ್-2 ರಲ್ಲಿ ಅವಕಾಶ ಪಡೆಯಲಿದೆ. ಒಂದು ವೇಳೆ ಸೋತರೆ ಮೂರನೇ ಅಥವಾ ನಾಲ್ಕನೇ ಸ್ಥಾನ ಪಡೆಯಬೇಕಾಗುತ್ತದೆ.

ಇಂದು ನಡೆಯಲಿರುವ ಪಂಜಾಬ್ ಕಿಂಗ್ಸ್- ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದಲ್ಲಿ ಒಂದು ವೇಳೆ ಮುಂಬೈ ಸೋತರೆ, ಆರ್ ಸಿಬಿ ನೆಟ್ ರನ್ ರೇಟ್ ಆಧಾರದಲ್ಲಿ ನಂಬರ್ 1 ಸ್ಥಾನ ಪಡೆಯಲು ಭಾರಿ ಅಂತರದಿಂದ ಗೆಲುವು ಸಾಧಿಸಬೇಕಾದ ಅಗತ್ಯವಿದೆ. ಒಂದು ವೇಳೆ ಪಂಜಾಬ್ ನ್ನು ಮುಂಬೈ ಸೋಲಿಸಿದರೆ, ಆರ್ ಸಿಬಿ ಯಾವುದೇ ಪಂದ್ಯ ಗೆದ್ದರೂ ಟಾಪ್ -2 ರಲ್ಲಿ ಬರಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!