ಐಪಿಎಲ್ 2025ರ 70ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 227 ಗಳಿಸುವ ಮೂಲಕ ತನ್ನ ಇನ್ನಿಂಗ್ಸ್ ಅನ್ನು ಕೊನೆಗೊಳಿಸಿದೆ. ಲಕ್ನೋ ಬ್ಯಾಟ್ಸ್‌ಮನ್ ರಿಷಭ್ ಪಂತ್ 61 ಎಸೆತಗಳಲ್ಲಿ 118 ರನ್ ಗಳಿಸಿ ತಂಡ ದಾಖಲೆ ಮೊತ್ತ ಪೇರಿಸಲು ನೆರವಾದರು. ಪಂತ್ ಅವರ ಇನ್ನಿಂಗ್ಸ್‌ನಲ್ಲಿ 11 ಬೌಂಡರಿಗಳು ಮತ್ತು 8 ಸಿಕ್ಸರ್‌ಗಳು ಸೇರಿವೆ. ಲಕ್ನೋ ಬ್ಯಾಟ್ಸ್‌ಮನ್‌ಗಳ ವಿರುದ್ಧ ಆರ್‌ಸಿಬಿ ಬೌಲರ್‌ಗಳು ಕಷ್ಟವನ್ನು ಎದುರಿಸಿದರು. ರೊಮಾರಿಯೊ ಶೆಫರ್ಡ್ 4 ಓವರ್‌ಗಳಲ್ಲಿ 51 ರನ್ ನೀಡಿ 1 ವಿಕೆಟ್ ಪಡೆದರು. ಈಗ ಆರ್‌ಸಿಬಿ ಗೆಲ್ಲಲು 228 ರನ್‌ಗಳ ಗುರಿಯನ್ನು ತಲುಪಬೇಕಾಗಿದೆ.
ಟಾಸ್ ಸೋತು ಬ್ಯಾಟಿಂಗ್ ಮಾಡಿದ ಲಖನೌ ಪರ ಆರಂಭಿಕ ಬ್ಯಾಟರ್ ಮಿಚೆಲ್ ಮಾರ್ಷ್ ಸ್ಫೋಟಕ ಬ್ಯಾಟಿಂಗ್ ಮಾಡಿ 37 ಎಸೆತಗಳಲ್ಲಿ 67 ರನ್ ಗಳಿಸಿ ತಂಡಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು. ನಂತರ ಬಂದ ರಿಷಬ್ ಪಂತ್ ಸ್ಫೋಟಕ ಬ್ಯಾಟಿಂಗ್ ಮಾಡಿ ಶತಕ ಸಿಡಿಸಿದರು. ಇನ್ನುಳಿದಂತೆ ಪೂರನ್ 13 ರನ್ ಗಳಿಸಿ ಔಟಾದರು.