ಸೂರ್ಯಕುಮಾರ್ ಯಾದವ್ 
ಕ್ರಿಕೆಟ್

IPL 2025: 15 ವರ್ಷಗಳ ಹಿಂದಿನ ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ಸೂರ್ಯಕುಮಾರ್ ಯಾದವ್

ನಾಲ್ಕು ತಂಡಗಳು ಪ್ಲೇಆಫ್ ಸ್ಥಾನ ಪಡೆದಿದ್ದರೂ, ಮೊದಲೆರಡು ಸ್ಥಾನ ಯಾರಿಗೆ ಎನ್ನುವುದು ಕೊನೆಯ ಪಂದ್ಯದ ನಂತರ ತಿಳಿಯಲಿದೆ. ಲೀಗ್ ಹಂತದಲ್ಲಿ ಇನ್ನೊಂದು ಪಂದ್ಯ ಬಾಕಿ ಉಳಿದಿದ್ದು, ಮಂಗಳವಾರ ಫಲಿತಾಂಶ ಲಭ್ಯವಾಗಲಿದೆ.

ಸೋಮವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 2025ರ ಲೀಗ್ ಹಂತದ ತಮ್ಮ ಕೊನೆಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್‌ (PBKS) ತಂಡದ ಉತ್ತಮ ಬೌಲಿಂಗ್ ಪ್ರಯತ್ನದ ಹೊರತಾಗಿಯೂ ಮುಂಬೈ ಇಂಡಿಯನ್ಸ್ (MI) ತಂಡದ ಸೂರ್ಯಕುಮಾರ್ ಯಾದವ್ ಏಳು ವಿಕೆಟ್‌ ನಷ್ಟಕ್ಕೆ 184 ರನ್‌ ಕೆಲಹಾಕಲು ತಂಡಕ್ಕೆ ನೆರವಾದರು. ಜೈಪುರದ ಸವಾಯ್ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ವಿರುದ್ಧ ಪಂಜಾಬ್ ಕಿಂಗ್ಸ್ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.

ಈ ಆವೃತ್ತಿಯಲ್ಲಿ ಸ್ಥಿರತೆಯನ್ನು ಕಾಯ್ದುಕೊಂಡಿರುವ ಸೂರ್ಯಕುಮಾರ್ ಯಾದವ್ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದರು. ಸಚಿನ್ ಐಪಿಎಲ್ 2010ನೇ ಆವೃತ್ತಿವರೆಗೆ 618 ರನ್ ಗಳಿಸಿದ್ದರೆ, ಸೂರ್ಯಕುಮಾರ್ ಅವರು ಈವರೆಗೆ (ಐಪಿಎಲ್ 2025) ಮುಂಬೈ ಪರ 628 ರನ್ ಗಳಿಸಿದ್ದಾರೆ. ಈ ಮೂಲಕ ಐಪಿಎಲ್‌ನಲ್ಲಿ ಮುಂಬೈ ತಂಡದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡರು.

ನಾಲ್ಕು ತಂಡಗಳು ಪ್ಲೇಆಫ್ ಸ್ಥಾನ ಪಡೆದಿದ್ದರೂ, ಮೊದಲೆರಡು ಸ್ಥಾನ ಯಾರಿಗೆ ಎನ್ನುವುದು ಕೊನೆಯ ಪಂದ್ಯದ ನಂತರ ತಿಳಿಯಲಿದೆ. ಲೀಗ್ ಹಂತದಲ್ಲಿ ಇನ್ನೊಂದು ಪಂದ್ಯ ಬಾಕಿ ಉಳಿದಿದ್ದು, ಮಂಗಳವಾರ ಫಲಿತಾಂಶ ಲಭ್ಯವಾಗಲಿದೆ. ಈಗ ಪಂಜಾಬ್ ಕಿಂಗ್ ಮೊದಲ ಸ್ಥಾನದಲ್ಲಿದ್ದು, ನಂತರ ಎರಡು ಮತ್ತು ಮೂರನೇ ಸ್ಥಾನ ಯಾರಿಗೆ ಎನ್ನುವುದು ತಿಳಿಯಲಿದೆ.

ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಬೌಲಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 184 ರನ್ ಗಳಿಸಿತು. ಸೂರ್ಯಕುಮಾರ್ ಯಾದವ್ 57 ರನ್ ಗಳಿಸುವ ಮೂಲಕ ಮುಂಬೈ ಇಂಡಿಯನ್ಸ್‌ಗೆ ಆಸರೆಯಾದರು. ರೋಹಿತ್ ಶರ್ಮಾ 24 ಮತ್ತು ರಿಯಾನ್ ರಿಕಲ್ಟನ್ 27 ರನ್ ಗಳಿಸಿದರು.

185 ರನ್‌ಗಳ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ತಂಡದ ಪ್ರಿಯಾಂಶ್ ಆರ್ಯ ಮತ್ತು ಜೋಶ್ ಇಂಗ್ಲಿಸ್ 109 ರನ್ ಕಲೆಹಾಕುವ ಮೂಲಕ ತಂಡಕ್ಕೆ ಆಸರೆಯಾದರು. ಪ್ರಿಯಾಂಶ್ ಆರ್ಯ 35 ಎಸೆತಗಳಲ್ಲಿ 62 ರನ್ ಗಳಿಸಿದರೆ, ಜೋಶ್ ಇಂಗ್ಲಿಸ್ 42 ಎಸೆತಗಳಲ್ಲಿ 9 ಬೌಂಡರಿ 3 ಸಿಕ್ಸರ್ ಸಹಿತ 73 ರನ್ ಗಳಿಸಿದರು. ನಾಯಕ ಶ್ರೇಯಸ್ ಅಯ್ಯರ್ 16 ಎಸೆತಗಳಲ್ಲಿ ಅಜೇಯ 26 ರನ್ ಗಳಿಸುವ ಮೂಲಕ ಪಂಜಾಬ್‌ ಕಿಂಗ್ಸ್‌ಗೆ ಗೆಲುವು ತಂದುಕೊಟ್ಟರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ, ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ: 27 ಕೋಟಿ ರೂ. ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!