ಮುಲ್ಲನಪುರ: ಚಂಡೀಗಢದ ಮುಲ್ಲನಪುರದಲ್ಲಿ ಇಂದು ನಡೆಯುತ್ತಿರುವ ಐಪಿಎಲ್ 2025 ಟೂರ್ನಿಯ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗಿವೆ.
ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್ ಮೊದಲಿಗೆ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಆರ್‌ಸಿಬಿ ತಂಡದಲ್ಲಿ ಒಂದು ಬದಲಾವಣೆಯಾಗಿದ್ದು, ವೇಗಿ ಜೋಶ್ ಹ್ಯಾಜಲ್‌ವುಡ್ ತಂಡಕ್ಕೆ ಮರಳಿದ್ದಾರೆ. ನುವಾನ್ ತುಷಾರ ಬದಲಿಗೆ ಪ್ಲೇಯಿಂಗ್ XIಗೆ ವಾಪಸ್ಸಾಗಿದ್ದಾರೆ. ಇಂದಿನ ಪಂದ್ಯದಲ್ಲಿ ರಜತ್ ಪಾಟಿದಾರ್ ಅವರೇ ನಾಯಕರಾಗಿದ್ದಾರೆ. ಕಳೆದ ಪಂದ್ಯದಲ್ಲಿ ಜಿತೇಶ್ ಶರ್ಮಾ ನಾಯಕರಾಗಿದ್ದರು.
ಪಂಜಾಬ್ ತಂಡದಲ್ಲಿಯೂ ಒಂದು ಬದಲಾವಣೆ ಮಾಡಲಾಗಿದೆ. ಮಾರ್ಕೊ ಜಾನ್ಸೆನ್ ಬದಲಿಗೆ ಅಜ್ಮತುಲ್ಲಾ ಒಮರ್ಜಾಯ್ ಅವರನ್ನು ತಂಡಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ.
ಪಂಜಾಬ್ ಕಿಂಗ್ಸ್: ಪ್ರಿಯಾಂಶ್ ಆರ್ಯ, ಪ್ರಭಾಸಿಮ್ರಾನ್ ಸಿಂಗ್, ಜೋಶ್ ಇಂಗ್ಲಿಸ್(ವಿಕೆಟ್ ಕೀಪರ್) ಶ್ರೇಯಸ್ ಅಯ್ಯರ್(ನಾಯಕ) ನೆಹಾಲ್ ವಧೇರಾ, ಶಶಾಂಕ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್, ಅಜ್ಮತುಲ್ಲಾ ಒಮರ್ಜಾಯ್, ಹರ್ಪ್ರೀತ್ ಬ್ರಾರ್, ಅರ್ಶ್ದೀಪ್ ಸಿಂಗ್, ಕೈಲ್ ಜೇಮಿಸನ್.
ಇಂಪ್ಯಾಕ್ಟ್ ಆಟಗಾರರು: ವಿಜಯ್‌ಕುಮಾರ್ ವೈಶಾಕ್, ಪ್ರವೀಣ್ ದುಬೆ, ಸೂರ್ಯಾಂಶ್ ಶೆಡ್ಜ್, ಮುಶೀರ್ ಖಾನ್, ಕ್ಸೇವಿಯರ್ ಬಾರ್ಟ್‌ಲೆಟ್