ಗುಜರಾತ್ ಬ್ಯಾಟಿಂಗ್ 
ಕ್ರಿಕೆಟ್

IPL 2025, Eliminator: GT ವಿರುದ್ಧ MI ಭರ್ಜರಿ ಜಯ; Qualifier 2 ಗೆ Hardik Pandya ಪಡೆ ಲಗ್ಗೆ

ಮುಂಬೈ ಇಂಡಿಯನ್ಸ್ ನೀಡಿದ್ದ 229 ರನ್ ಗಳ ಗುರಿಯನ್ನು ಬೆನ್ನು ಹತ್ತಿದ್ದ ಗುಜರಾತ್ ಟೈಟನ್ಸ್ ತಂಡ ಹೀನಾಯ ಸೋಲುಕಂಡಿತು. ಆ ಮೂಲಕ ಹಾಲಿ ಐಪಿಎಲ್ ಟೂರ್ನಿಯ ಪ್ರಶಸ್ತಿ ರೇಸ್ ನಿಂದ ಹೊರಬಿತ್ತು.

ಚಂಡೀಗಢ: ಹಾಲಿ ಐಪಿಎಲ್ ಟೂರ್ನಿಯ ಎಲಿಮಿನೇಟರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ ವಿರೋಚಿತ ಗೆಲುವು ಸಾಧಿಸಿದ್ದು, ಕ್ವಾಲಿಫೈಯರ್ 2ಗೆ ಪ್ರವೇಶ ಮಾಡಿದೆ.

ಚಂಡೀಗಢದ ಮುಲ್ಲನ್ ಪುರ ಕ್ರಿಕೆಟ್ ಮೈದಾನದಲ್ಲಿ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನೀಡಿದ್ದ 229 ರನ್ ಗಳ ಗುರಿಯನ್ನು ಬೆನ್ನು ಹತ್ತಿದ್ದ ಗುಜರಾತ್ ಟೈಟನ್ಸ್ ತಂಡ ನಿಗಧಿತ 20 ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 208 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು.

ಆ ಮೂಲಕ 20 ರನ್ ಗಳ ಅಂತದಲ್ಲಿ ಹೀನಾಯ ಸೋಲುಕಂಡಿತು. ಅಂತೆಯೇ ಹಾಲಿ ಐಪಿಎಲ್ ಟೂರ್ನಿಯ ಪ್ರಶಸ್ತಿ ರೇಸ್ ನಿಂದ ಗುಜರಾತ್ ಟೈಟನ್ಸ್ ತಂಡ ಹೊರಬಿತ್ತು.

ಗುಜರಾತ್ ಪರ ಸಾಯಿ ಸುದರ್ಶನ್ ಕೇವಲ 49 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 10 ಬೌಂಡರಿಗಳ ನೆರವಿನಿಂದ 80 ರನ್ ಗಳಿಸಿದರೆ, ಅವರಿಗೆ ಉತ್ತಮ ಸಾಥ್ ನೀಡಿದ ವಾಷಿಂಗ್ಟನ್ ಸುಂದರ್ 24 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 5 ಬೌಂಡರಿ 48 ರನ್ ಗಳಿಸಿದರು.

ಉಳಿದಂತೆ ಕುಶಾಲ್ ಮೆಂಡಿಸ್ 20, ಶೆರ್ಫೇನ್ ರೂಥರ್ಫೋರ್ಡ್ 24, ರಾಹುಲ್ ತೆವಾಟಿಯಾ ಅಜೇಯ 16, ಶಾರುಖ್ ಖಾನ್ 13 ರನ್ ಗಳಿಸಿದರು.

ಮುಂಬೈ ಪರ ಟ್ರೆಂಟ್ ಬೌಲ್ಟ್ 2 ವಿಕೆಟ್ ಪಡೆದರೆ, ಬುಮ್ರಾ, ರಿಚರ್ಡ್ ಗ್ಲೀಸನ್, ಸ್ಯಾಂಥನರ್ ಮತ್ತು ಅಶ್ವನಿ ಕುಮಾರ್ ತಲಾ 1 ವಿಕೆಟ್ ಪಡೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನನಗೆ ಇರೋದ್ 5 ಬೆರಳು: ಸಾವಿನ ವದಂತಿ ಮಧ್ಯೆ ಚಹಾ ಕುಡಿಯುತ್ತ ಕಾಣಿಸಿಕೊಂಡ ಇಸ್ರೇಲ್ ಪ್ರಧಾನಿ; ಇರಾನ್‌ಗೆ ಮುಖಭಂಗ; Video

'ಒಂದು ವೇಳೆ ಬದುಕಿದ್ದರೆ, ಹುಡುಕಿ ಕೊಲ್ಲುತ್ತೇವೆ': ಬೆಂಜಮಿನ್ ನೆತನ್ಯಾಹು ಸಾವಿನ ವದಂತಿಗಳ ನಡುವೆ ಇರಾನ್ ಎಚ್ಚರಿಕೆ!

ಯುದ್ಧ: ಮೊದಲ ಬಾರಿಗೆ Dancing Missile ಉಡಾಯಿಸಿದ Iran; 2 ಸಾವಿರ ಕಿ.ಮೀ ವ್ಯಾಪ್ತಿ.. ಅಮೆರಿಕಕ್ಕೆ ತಲೆನೋವು!

ಬಾಲಿವುಡ್ ನಟಿ ಮಧು ಮಲ್ಹೋತ್ರಾ ನಿಧನ

Reels ಗೀಳಿಗೆ ಮತ್ತೊಂದು ಬಲಿ: Delhi–Mumbai Expresswayನಲ್ಲಿ ಕ್ಯಾಂಟರ್ ಢಿಕ್ಕಿ, ಯುವಕ ಸಾವು! Video

SCROLL FOR NEXT