ಬಾಬಾರ್ ಆಜಂ 
ಕ್ರಿಕೆಟ್

Cricket: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ವಿಶ್ವದಾಖಲೆ ಮುರಿದ ಪಾಕಿಸ್ತಾನದ ಬಾಬರ್ ಆಜಂ!

ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬಾಬರ್ ಆಜಂ ಅರ್ಧಶತಕ ಗಳಿಸುವ ಮೂಲಕ ವಿಶಿಷ್ಠ ದಾಖಲೆ ನಿರ್ಮಿಸಿದ್ದಾರೆ.

ಲಾಹೋರ್: ಪಾಕಿಸ್ತಾನದ ಮಾಜಿ ನಾಯಕ ಹಾಗೂ ಸ್ಟಾರ್ ಬ್ಯಾಟರ್ ಬಾಬರ್ ಆಜಂ ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ಮತ್ತು ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರ ದಾಖಲೆಗಳನ್ನು ಮುರಿದಿದ್ದಾರೆ.

ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬಾಬರ್ ಆಜಂ ಅರ್ಧಶತಕ ಗಳಿಸುವ ಮೂಲಕ ವಿಶಿಷ್ಠ ದಾಖಲೆ ನಿರ್ಮಿಸಿದ್ದಾರೆ.

47 ಎಸೆತಗಳನ್ನು ಎದುರಿಸಿದ ಬಾಬರ್ ಆಜಂ 9 ಬೌಂಡರಿಗಳ ನೆರವಿನಿಂದ 68 ರನ್ ಕಲೆಹಾಕಿದ್ದಾರೆ. ಈ ಅರ್ಧಶತಕದೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ 50ಕ್ಕೂ ಅಧಿಕ ಸ್ಕೋರ್​ಗಳಿಸಿದ ವಿಶ್ವ ದಾಖಲೆಯನ್ನು ಬಾಬರ್ ಆಜಂ ತಮ್ಮದಾಗಿಸಿಕೊಂಡಿದ್ದಾರೆ.

ವಿರಾಟ್ ಕೊಹ್ಲಿ ದಾಖಲೆ ಪತನ

ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು. ಟೀಮ್ ಇಂಡಿಯಾ ಪರ 117 ಟಿ20 ಇನಿಂಗ್ಸ್ ಆಡಿರುವ ಕಿಂಗ್ ಕೊಹ್ಲಿ 39 ಬಾರಿ 50+ ಸ್ಕೋರ್​ಗಳಿಸಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾರಿ 50+ ಸ್ಕೋರ್​ಗಳಿಸಿದ ವಿಶ್ವ ದಾಖಲೆ ನಿರ್ಮಿಸಿದ್ದರು.

ಪಾಕಿಸ್ತಾನ ಪರ 124 ಟಿ20 ಇನಿಂಗ್ಸ್ ಆಡಿರುವ ಬಾಬರ್ 40 ಬಾರಿ 50+ ಸ್ಕೋರ್​ಗಳಿಸಿದ್ದಾರೆ. ಈ ಮೂಲಕ ಟಿ20 ಇಂಟರ್​ನ್ಯಾಷನಲ್​ ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ 50+ ಸ್ಕೋರ್​ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ರೋಹಿತ್ ಶರ್ಮಾ ದಾಖಲೆ ಕೂಡ ಪತನ

ಇದಕ್ಕೂ ಮುನ್ನ ಬಾಬರ್ ಆಝಂ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದರು. ರೋಹಿತ್ ಶರ್ಮಾ (4231 ರನ್ಸ್) ಹೆಸರಿನಲ್ಲಿದ್ದ ಈ ವಿಶ್ವ ದಾಖಲೆಯನ್ನು ಮುರಿದು ಇದೀಗ ಬಾಬರ್ ಆಝಂ 4302 ರನ್​ಗಳೊಂದಿಗೆ ಅಗ್ರಸ್ಥಾನ ಅಲಂಕರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!