ಮುಂಬೈ: ದಕ್ಷಿಣ ಆಫ್ರಿಕಾ ವಿರುದ್ಧ ಮಹಿಳೆಯರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತದ ಪರ ಸ್ಮೃತಿ ಮಂಧಾನ ದಾಖಲೆ ಬರೆದಿದ್ದಾರೆ. ಮಿಥಾಲಿ ರಾಜ್ ಅವರ ದಾಖಲೆಯನ್ನು ಮುರಿದು ಭಾರತದ ಪರ ವಿಶ್ವಕಪ್ ಟೂರ್ನಿಯೊಂದರಲ್ಲಿ ಅತಿ ಹೆಚ್ಚು ರನ್ ಸಿಡಿಸಿದ ಆಟಗಾರ್ತಿಯಾಗಿ ಹೊರಹೊಮ್ಮಿದ್ದಾರೆ.
ಮಾಜಿ ನಾಯಕಿ ಮಿಥಾಲಿ ರಾಜ್ 2017 ರ ವಿಶ್ವಕಪ್‌ನಲ್ಲಿ 409 ರನ್ ಸಿಡಿಸಿದ್ದರು. ಆದರೆ ಈ ಬಾರಿ ಟೂರ್ನಿಯಲ್ಲಿ ಸ್ಮೃತಿ ಮಂಧಾನ 434 ರನ್ ಸಿಡಿಸುವ ಮೂಲಕ ಈ ದಾಖಲೆ ಮುರಿದಿದ್ದಾರೆ.
ವಿಶ್ವಕಪ್ ಟೂರ್ನಿಯೊಂದರಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ಆಸ್ಟ್ರೇಲಿಯಾದ ನಾಯಕಿ ಅಲಿಸಾ ಹೀಲಿ ಅವರ ಹೆಸರಿನಲ್ಲಿದೆ. ಅವರು 2022 ರಲ್ಲಿ 509 ರನ್ ಗಳಿಸಿದ್ದರು.
ಸ್ಮೃತಿ ಮಂಧಾನ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ವಿರುದ್ಧದ ಲೀಗ್ ಹಂತದ ಸ್ಪರ್ಧೆಗಳಲ್ಲಿ ಸತತ ಅರ್ಧಶತಕಗಳನ್ನು ಗಳಿಸಿದ್ದರು. ನಂತರ ನವಿ ಮುಂಬೈನಲ್ಲಿ ನ್ಯೂಜಿಲೆಂಡ್ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಮೊದಲ ಶತಕವನ್ನು ದಾಖಲಿಸಿದರು.
ಇಂದಿನ ಪಂದ್ಯದಲ್ಲಿ ಸ್ಮೃತಿ 45 ರನ್(58 ಎಸೆತ, 8 ಬೌಂಡರಿ) ಸಿಡಿಸಿ ಔಟಾಗಿದ್ದರು. ಮೊದಲ ವಿಕೆಟಿಗೆ ಸ್ಮೃತಿ ಮತ್ತು ಶಫಾಲಿ ವರ್ಮಾ106 ಎಸೆತಗಳಲ್ಲಿ 104 ರನ್ ಜೊತೆಯಾಟವಾಡಿ ಭದ್ರವಾದ ಅಡಿಪಾಯ ಹಾಕಿಕೊಟ್ಟಿದ್ದರು.