ಭಾರತ ಆಸ್ಟ್ರೇಲಿಯಾ 3ನೇ ಟಿ20 ಪಂದ್ಯ 
ಕ್ರಿಕೆಟ್

India vs Australia, 3rd T20I: ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ;ಸಂಜು ಸ್ಯಾಮ್ಸನ್ ಸೇರಿ ಮೂವರಿಗೆ ಕೊಕ್

ಆಸ್ಟ್ರೇಲಿಯಾದ ಹೋಬಾರ್ಟ್ ನ ಬೆಲ್ಲೆರಿವ್ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 3ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಹೋಬಾರ್ಟ್: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಪ್ರಬಲ ಆಸಿಸ್ ಗೆ ಆರಂಭಿಕ ಆಘಾತ ನೀಡಿದೆ.

ಆಸ್ಟ್ರೇಲಿಯಾದ ಹೋಬಾರ್ಟ್ ನ ಬೆಲ್ಲೆರಿವ್ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 3ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಸರಣಿಯ ಮೊದಲೆರಡು ಮ್ಯಾಚ್​ಗಳು ಮುಗಿದಿವೆ. ಈ ಸರಣಿಯ ಮೊದಲ ಪಂದ್ಯವು ಮಳೆಯಿಂದಾಗಿ ರದ್ದಾದರೆ, ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 4 ವಿಕೆಟ್​ಗಳ ಜಯ ಸಾಧಿಸಿದೆ. ಇದೀಗ ಉಭಯ ತಂಡಗಳು ಮೂರನೇ ಪಂದ್ಯಕ್ಕಾಗಿ ಕಣಕ್ಕಿಳಿದಿವೆ.

ತಂಡದಲ್ಲಿ ಮೂರು ಬದಲಾವಣೆ, ಸಂಜು ಸ್ಯಾಮ್ಸನ್ ಮತ್ತೆ ಅವಕಾಶ ವಂಚಿತ

ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಆಡುವ ಬಳಗದಲ್ಲಿ 3 ಬದಲಾವಣೆ ಮಾಡಲಾಗಿದ್ದು, ಕಳೆದ ಎರಡು ಪಂದ್ಯಗಳಲ್ಲಿ ಹೊರಗುಳಿದಿದ್ದ ಎಡಗೈ ವೇಗಿ ಅರ್ಶ್ ದೀಪ್ ಸಿಂಗ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹಾಗೆಯೇ ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ ಹಾಗೂ ವಾಷಿಂಗ್ಟನ್ ಸುಂದರ್ ಕೂಡ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.

ಆಸಿಸ್ ಗೆ ಆರಂಭಿಕ ಆಘಾತ

ಇನ್ನು ಮೊದಲು ಬ್ಯಾಟಿಂಗ್ ಆರಂಭಿಸಿರುವ ಆಸ್ಟ್ರೇಲಿಯಾ ಆರಂಭಿಕ ಆಘಾತ ಎದುರಿಸಿದೆ. ಕೇವಲ 14 ರನ್ ಗಳಿಸುವಷ್ಟರಲ್ಲಿ ತನ್ನ ಪ್ರಮುಖ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಆರಂಭಿಕ ಆಟಗಾರರಾದ ಟ್ರಾವಿಸ್ ಹೆಡ್ 6 ರನ್ ಮತ್ತು ಜಾಶ್ ಇಂಗ್ಲಿಶ್ 1 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

ಇನ್ನು ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್ ಗೆ ಬಂದಿರುವ ಟಿಮ್ ಡೇವಿಡ್ ಮತ್ತು ನಾಯಕ ಮಿಚೆಲ್ ಮಾರ್ಶ್ ತಂಡಕ್ಕೆ ಆಸರೆಯಾಗಿದ್ದು, ಟಿಮ್ ಡೇವಿಡ್ ಅರ್ಧಶತಕ ಗಳಿಸಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದ್ದಾರೆ.

ಅಂದಹಾಗೆ ಈ ಪಂದ್ಯವು ಸರಣಿ ಗೆಲ್ಲಲು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಏಕೆಂದರೆ ಐದು ಪಂದ್ಯಗಳ ಸರಣಿಯ ಮೊದಲ ಮ್ಯಾಚ್ ಮಳೆಯಿಂದಾಗಿ ರದ್ದಾಗಿದೆ. ಇನ್ನು ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಜಯ ಸಾಧಿಸಿದೆ. ಇದೀಗ ಮೂರನೇ ಪಂದ್ಯದಲ್ಲಿ ಗೆಲ್ಲುವ ಮೂಲಕ ಭಾರತ ತಂಡವು ಸರಣಿಯಲ್ಲಿ ಸಮಬಲ ಸಾಧಿಸಬಹುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

VB-G RAM ಮಸೂದೆ: ಸಂಸತ್ತಿನ ಸಂಕೀರ್ಣದಲ್ಲಿ ವಿಪಕ್ಷಗಳ ಪ್ರತಿಭಟನಾ ಮೆರವಣಿಗೆ, ಬೀದಿಗಿಳಿದು ಹೋರಾಟ ನಡೆಸುವುದಾಗಿ ಪ್ರತಿಜ್ಞೆ

ರಾಹುಲ್ ಗಾಂಧಿ ಆಪ್ತನ ಪತ್ನಿ ಕಾಂಗ್ರೆಸ್ MLC ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ಸಾಧ್ಯತೆ

ಕೊಚ್ಚಿ: ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ತುರ್ತು ಭೂಸ್ಪರ್ಶ, ಟೈರ್ ಸ್ಫೋಟ; ತಪ್ಪಿದ ದೊಡ್ಡ ಅನಾಹುತ!

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು..!

Video- ಒಮಾನ್ ಗೆ ಬಂದಿಳಿದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ: ಇಂದು ಹಲವು ಒಪ್ಪಂದಗಳಿಗೆ ಸಹಿ ನಿರೀಕ್ಷೆ

SCROLL FOR NEXT