ಕ್ರಿಕೆಟ್

WWC Final 2025: ಶಫಾಲಿ, ದೀಪ್ತಿ ಸ್ಫೋಟಕ ಬ್ಯಾಟಿಂಗ್; ಆಫ್ರಿಕಾಗೆ 299 ರನ್ ಗುರಿ ನೀಡಿದ ಭಾರತ!

ನವಿ ಮುಂಬೈನಲ್ಲಿ ಶೆಫಾಲಿ ವರ್ಮಾ 87 ರನ್ ಗಳಿಸುವ ಮೂಲಕ ಭಾರತದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು.

2025ರ ಮಹಿಳಾ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 298 ರನ್ ಗಳಿಸಿದೆ. ನವಿ ಮುಂಬೈನಲ್ಲಿ ಶೆಫಾಲಿ ವರ್ಮಾ 87 ರನ್ ಗಳಿಸುವ ಮೂಲಕ ಭಾರತದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ದೀಪ್ತಿ ಶರ್ಮಾ ಕೂಡ 58 ರನ್ ಗಳಿಸಿದ್ದರೆ ದಕ್ಷಿಣ ಆಫ್ರಿಕಾ ಪರ ಖಾಖಾ ಮೂರು ವಿಕೆಟ್ ಪಡೆದರು.

ಶೆಫಾಲಿ ವರ್ಮಾ ಮತ್ತು ಸ್ಮೃತಿ ಮಂಧಾನ ಮೊದಲ ವಿಕೆಟ್‌ಗೆ 104 ರನ್‌ಗಳ ಆರಂಭಿಕ ಪಾಲುದಾರಿಕೆಯನ್ನು ನೀಡುವ ಮೂಲಕ ಭಾರತಕ್ಕೆ ಉತ್ತಮ ಆರಂಭ ನೀಡಿದರು. ಸ್ಮೃತಿ 58 ಎಸೆತಗಳಲ್ಲಿ 45 ರನ್ ಗಳಿಸಿದರು. ಶೆಫಾಲಿ ವರ್ಮಾ ಶತಕ ಗಳಿಸುವ ಅವಕಾಶವನ್ನು ಕಳೆದುಕೊಂಡರು.

ಶೆಫಾಲಿ 78 ಎಸೆತಗಳಲ್ಲಿ 87 ರನ್ ಗಳಿಸಿದ್ದು ಏಳು ಬೌಂಡರಿ ಮತ್ತು ಎರಡು ಸಿಕ್ಸರ್‌ ಗಳಿಸಿದ್ದಾರೆ. ಹಿಂದಿನ ಪಂದ್ಯದಲ್ಲಿ ಶತಕ ಗಳಿಸಿದ್ದ ಜೆಮಿಮಾ 37 ಎಸೆತಗಳಲ್ಲಿ ಕೇವಲ 24 ರನ್ ಗಳಿಸಿದರು. ನಾಯಕಿ ಹರ್ಮನ್ಪ್ರೀತ್ ಕೌರ್ 29 ಎಸೆತಗಳಲ್ಲಿ 20 ರನ್ ಗಳಿಸಿ ಕ್ಲೀನ್ ಬೌಲ್ಡ್ ಆದರು. ಅಮನ್‌ಜೋತ್ 14 ಎಸೆತಗಳಲ್ಲಿ 12 ರನ್ ಗಳಿಸಿದರು. ರಿಚಾ ಘೋಷ್ 34 ರನ್ ಗಳಿಸಿದರು. ದೀಪ್ತಿ ಶರ್ಮಾ 58 ರನ್ ಗಳಿಸಿ ರನೌಟ್ ಆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

T20 World Cup 2026: ಬ್ರೂಕ್ ಭರ್ಜರಿ ಶತಕ; ಪಾಕಿಸ್ತಾನ ವಿರುದ್ಧ ಗೆದ್ದು ಬೀಗಿದ ಇಂಗ್ಲೆಂಡ್​

ಪ್ರಧಾನಿ ಮೋದಿ ಇಸ್ರೇಲ್ ಭೇಟಿಗೂ: ಇಸ್ಲಾಮಿಕ್ ಉಗ್ರವಾದದ ವಿರುದ್ಧ ಷಡ್ಭುಜ ಕೂಟ ಘೋಷಿಸಿದ ನೆತನ್ಯಾಹು!

ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾರಿಂದ ಹೊಸ ಪಕ್ಷ ಸ್ಥಾಪನೆ; ರಾಮನಾಥಪುರಂನಲ್ಲಿ ಧ್ವಜ ಅನಾವರಣ

SCROLL FOR NEXT