ಚಾಂಪಿಯನ್ ಭಾರತ ತಂಡ 
ಕ್ರಿಕೆಟ್

Cricket: ವಿಶ್ವ ಚಾಂಪಿಯನ್ ಭಾರತ ವನಿತೆಯರ ತಂಡಕ್ಕೆ BCCI ಬಹುಮಾನ ಘೋಷಣೆ; ಮೊತ್ತ ಎಷ್ಟು ಗೊತ್ತಾ?

ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ರೋಮಾಂಚಕ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು 52 ರನ್‌ಗಳಿಂದ ಸೋಲಿಸುವ ಮೂಲಕ ತಮ್ಮ ಮೊದಲ ಐಸಿಸಿ ಮಹಿಳಾ ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದು ಇತಿಹಾಸ ಸೃಷ್ಟಿಸಿದೆ.

ಮುಂಬೈ: ಸಾಕಷ್ಟು ಕುತೂಹಲ ಕೆರಳಿಸಿದ್ದ ಐಸಿಸಿ ಮಹಿಳೆಯರ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ನಿರೀಕ್ಷೆಯಂತೆಯೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಬಹುಮಾನ ಘೋಷಿಸಿದೆ.

ಹೌದು.. ನಿನ್ನೆ ತಡರಾತ್ರಿ ಭಾರತೀಯ ಕ್ರಿಕೆಟ್‌ಗೆ ಒಂದು ಮಹತ್ವದ ಕ್ಷಣವಾಗಿದ್ದು, ರಾಷ್ಟ್ರೀಯ ಮಹಿಳಾ ತಂಡವು ಭಾನುವಾರ ರಾತ್ರಿ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ರೋಮಾಂಚಕ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು 52 ರನ್‌ಗಳಿಂದ ಸೋಲಿಸುವ ಮೂಲಕ ತಮ್ಮ ಮೊದಲ ಐಸಿಸಿ ಮಹಿಳಾ ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದು ಇತಿಹಾಸ ಸೃಷ್ಟಿಸಿದೆ.

ಮಹಿಳಾ ತಂಡದ ಸಾಧನೆಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಬಹುಮಾನ ಘೋಷಣೆ ಮಾಡಿದ್ದು, ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಅವರು ಈ ವಿಜಯವನ್ನು "ಭಾರತೀಯ ಮಹಿಳಾ ಕ್ರಿಕೆಟ್ ಅನ್ನು ಹೊಸ ಮಟ್ಟಕ್ಕೆ ಕೊಂಡೊಯ್ಯುವ ಸ್ಮರಣೀಯ ಸಾಧನೆ" ಎಂದು ಶ್ಲಾಘಿಸಿದ್ದಾರೆ.

ಅಲ್ಲದೆ ಭಾರತ ತಂಡದ ಆಟಗಾರ್ತಿಯರಿಗೆ ಮತ್ತು ಸಹಾಯಕ ಸಿಬ್ಬಂದಿಗೆ 51 ಕೋಟಿ ರೂ. ಬಹುಮಾನವನ್ನು ಘೋಷಿಸಿದ್ದಾರೆ ಎಂದು ವರದಿಯಾಗಿದೆ.

ಏತನ್ಮಧ್ಯೆ, ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ ತಂಡದ ಐತಿಹಾಸಿಕ ಸಾಧನೆಯನ್ನು ಶ್ಲಾಘಿಸಿದ್ದು, ಇದು ಭಾರತದ ಐಕಾನಿಕ್ 1983 ರ ಪುರುಷರ ವಿಶ್ವಕಪ್ ಗೆಲುವಿಗೆ ಸಮಾನಾಂತರವಾಗಿದೆ.

"ಭಾರತೀಯ ಮಹಿಳಾ ಕ್ರಿಕೆಟ್‌ಗೆ ಇದು ಸ್ಮರಣೀಯ ದಿನ. 1983 ರಲ್ಲಿ ಪುರುಷರ ತಂಡ ಸಾಧಿಸಿದ್ದನ್ನು, ಭಾರತೀಯ ಮಹಿಳೆಯರು ಇಂದು ಮುಂಬೈನಲ್ಲಿ ಮರುಸೃಷ್ಟಿಸಿದ್ದಾರೆ.

ಈ ಐತಿಹಾಸಿಕ ಗೆಲುವು ದೇಶದಲ್ಲಿ ಮಹಿಳಾ ಕ್ರಿಕೆಟ್‌ಗೆ ಅಗಾಧ ಉತ್ತೇಜನ ನೀಡುತ್ತದೆ ಮತ್ತು ನಮ್ಮ ಆಟವು ಈಗ ಹೊಸ ಎತ್ತರವನ್ನು ತಲುಪುತ್ತದೆ ಎಂದು ನನಗೆ ವಿಶ್ವಾಸವಿದೆ" ಎಂದು ಧುಮಾಲ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

Flydubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್, 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

ಬಿಹಾರ ಪ್ರವಾಹ: ವಾಯುಪಡೆಯ ಹೆಲಿಕಾಪ್ಟರ್‌ನಿಂದ ಪರಿಹಾರ ಸಾಮಗ್ರಿಯ ಪ್ಯಾಕೆಟ್ ಬಿದ್ದು ವೃದ್ಧ ಸಾವು!

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ: ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ, Video!