ಮಾಜಿ ನಾಯಕಿ ಡಯಾನಾ ಎಡುಲ್ಜಿ File Photo: PTI
ಕ್ರಿಕೆಟ್

2017 ರಿಂದ ಇದಕ್ಕಾಗಿ ಕಾಯುತ್ತಿದ್ದೆ: ವಿಶ್ವಕಪ್ ಗೆಲುವಿನ ಬಗ್ಗೆ ಡಯಾನಾ

ಮಹಿಳಾ ಕ್ರಿಕೆಟ್ ಅನ್ನು ಉತ್ತೇಜಿಸುವಲ್ಲಿ ಆಟಗಾರ್ತಿಯರ ಪ್ರಯತ್ನಗಳು, ಬಿಸಿಸಿಐ ಮತ್ತು ಐಸಿಸಿಯನ್ನು ಭಾರತದ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಅಭಿನಂದಿಸಿದ್ದಾರೆ.

ಮುಂಬೈ: ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಗೆದ್ದ ಭಾರತೀಯ ಮಹಿಳಾ ತಂಡವನ್ನು ಮಾಜಿ ನಾಯಕಿ ಡಯಾನಾ ಎಡುಲ್ಜಿ ಶ್ಲಾಘಿಸಿದ್ದು, ಇದು ದೇಶಕ್ಕೆ ಹೆಮ್ಮೆಯ ಕ್ಷಣ ಮತ್ತು ಇದು "ನಮ್ಮ 1983ರ ಗೆಲುವಿನ ಕ್ಷಣ"ವನ್ನು ನೆನಪಿಸುತ್ತಿದೆ ಎಂದು ಬಣ್ಣಿಸಿದ್ದಾರೆ.

ಮಹಿಳಾ ಕ್ರಿಕೆಟ್ ಅನ್ನು ಉತ್ತೇಜಿಸುವಲ್ಲಿ ಆಟಗಾರ್ತಿಯರ ಪ್ರಯತ್ನಗಳು, ಬಿಸಿಸಿಐ ಮತ್ತು ಐಸಿಸಿಯನ್ನು ಭಾರತದ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಅಭಿನಂದಿಸಿದ್ದಾರೆ.

ಪಂದ್ಯದ ನಂತರ ANI ಜೊತೆ ಮಾತನಾಡಿದ ಡಯಾನಾ ಎಡುಲ್ಜಿ, "ಇದು ಹೆಮ್ಮೆಯ ಕ್ಷಣ. ಅವರು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಮಹಿಳಾ ಕ್ರಿಕೆಟ್ ಅನ್ನು ಇಷ್ಟು ಚೆನ್ನಾಗಿ ಪ್ರಚಾರ ಮಾಡಿದ್ದಕ್ಕಾಗಿ ತಂಡ, ಬಿಸಿಸಿಐ ಮತ್ತು ಐಸಿಸಿಯನ್ನು ನಾನು ಅಭಿನಂದಿಸುತ್ತೇನೆ. ಇದು ಅದ್ಭುತ ಗೆಲುವು. ನಮ್ಮ ಹುಡುಗಿಯರು ಎಲ್ಲಾ ಪ್ರಶಂಸೆಗಳಿಗೆ ಅರ್ಹರು ಎಂದರು.

ಇದು ನನಗೂ ತುಂಬಾ ಹೆಮ್ಮೆಯ ಕ್ಷಣ. ನಾನು 2017 ರಿಂದ ಇದಕ್ಕಾಗಿ ಕಾಯುತ್ತಿದ್ದೆ.. ಇದು ನಮಗೆ 1983ರ ಕ್ಷಣ... ಅಂದು U-19 ವಿಶ್ವಕಪ್ ಮತ್ತು ಈಗ ಹಿರಿಯರ ವಿಶ್ವಕಪ್ ಗೆದ್ದಿದ್ದಕ್ಕೆ ನಾನು ರಿಚಾ ಮತ್ತು ಶಫಾಲಿ ಅವರನ್ನು ಅಭಿನಂದಿಸುತ್ತೇನೆ" ಎಂದಿದ್ದಾರೆ.

ಭಾರತೀಯ ಮಹಿಳಾ ಕ್ರಿಕೆಟ್ ಇದೀಗ ಹೊಸ ಯುಗವನ್ನು ಪ್ರವೇಶಿಸಿದೆ. ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತದ ಮಹಿಳೆಯರ ತಂಡ, ಚೊಚ್ಚಲ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಅನ್ನು ಗೆದ್ದಿದೆ. ದಕ್ಷಿಣ ಆಫ್ರಿಕಾ ತಂಡವನ್ನು 52 ರನ್‌ಗಳಿಂದ ಸೋಲಿಸಿದ ಈ ಗೆಲುವು ಇಡೀ ಭಾರತವನ್ನು ಸಂಭ್ರಮಿಸುವಂತೆ ಮಾಡಿತು. ಕಿಕ್ಕಿರಿದು ತುಂಬಿದ್ದ ಡಿವೈ ಪಾಟೀಲ್ ಕ್ರೀಡಾಂಗಣವು ಹಿಂದೆಂದೂ ಕಾಣದ ರೀತಿಯಲ್ಲಿ ಘರ್ಜಿಸಿತು ಮತ್ತು ಸಾವಿರಾರು ಜನ ಆ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

SCROLL FOR NEXT