ಕ್ಯಾರಾರಾ (ಗೋಲ್ಡ್ ಕೋಸ್ಟ್): ಗುರುವಾರ ಇಲ್ಲಿ ಆರಂಭವಾಗಿರುವ ಭಾರತ ವಿರುದ್ಧದ ನಾಲ್ಕನೇ ಟಿ20ಐ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕ ಮಿಚೆಲ್ ಮಾರ್ಷ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.
ಆತಿಥೇಯ ಆಸ್ಟ್ರೇಲಿಯಾ ತಂಡದಲ್ಲಿ ನಾಲ್ಕು ಬದಲಾವಣೆಗಳನ್ನು ಮಾಡಿದ್ದು, ಆಡಮ್ ಜಂಪಾ, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಫಿಲಿಪ್ ಮತ್ತು ಬೆನ್ ದ್ವಾರ್ಶುಯಿಸ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ.
ಮತ್ತೊಂದೆಡೆ, ಭಾರತ ತಂಡವು ಯಾವುದೇ ಬದಲಾವಣೆಗಳಿಲ್ಲದೆ ಮುಂದುವರೆದಿದೆ.
ಐದು ಪಂದ್ಯಗಳ ಸರಣಿಯಲ್ಲಿ ಮೊದಲನೇ ಟಿ20 ಪಂದ್ಯವು ಮಳೆಗೆ ಆಹುತಿಯಾಗಿದ್ದು, ಸದ್ಯ ಸರಣಿ 1-1 ಸಮಬಲ ಸಾಧಿಸಿದೆ.
ಭಾರತ ತಂಡ
ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಿವಂ ದುಬೆ, ಅರ್ಶದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ.
ಆಸ್ಟ್ರೇಲಿಯಾ ತಂಡ
ಮಿಚೆಲ್ ಮಾರ್ಷ್ (ನಾಯಕ), ಮ್ಯಾಥ್ಯೂ ಶಾರ್ಟ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಟಿಮ್ ಡೇವಿಡ್, ಜೋಶ್ ಫಿಲಿಪ್, ಮಾರ್ಕಸ್ ಸ್ಟೊಯಿನಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಬೆನ್ ದ್ವಾರ್ಶುಯಿಸ್, ಕ್ಸೇವಿಯರ್ ಬಾರ್ಟ್ಲೆಟ್, ನಾಥನ್ ಎಲ್ಲಿಸ್, ಆಡಮ್ ಜಂಪಾ.