ಕೋಲ್ಕತ್ತಾ: ಇಲ್ಲಿನ ಈಡನ್ಸ್ ಗಾರ್ಡನ್‌ನಲ್ಲಿ ಶುಕ್ರವಾರ ನಡೆಯುತ್ತಿರುವ ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ನಾಯಕ ತೆಂಬಾ ಬವುಮಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.
ಜುಲೈನಲ್ಲಿ ಮ್ಯಾಂಚೆಸ್ಟರ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್‌ನಲ್ಲಿ ಬ್ಯಾಟಿಂಗ್ ವೇಳೆ ಪಂತ್ ಅವರ ಕಾಲಿಗೆ ಗಾಯವಾಗಿತ್ತು. ಪಂತ್ ಇದೀಗ ಫಿಟ್ ಆಗಿದ್ದು, ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಬದಲಿಗೆ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ.
ಭಾರತ ನಾಲ್ವರು ಸ್ಪಿನ್ನರ್‌ಗಳೊಂದಿಗೆ ಆಡಲು ನಿರ್ಧರಿಸಿದ್ದು, ಸಾಯಿ ಸುದರ್ಶನ್ ಬದಲಿಗೆ ಧ್ರುವ್ ಜುರೇಲ್ ಅವರನ್ನು ಮತ್ತು ಅಕ್ಷರ್ ಪಟೇಲ್ ಅವರನ್ನು ಪ್ಲೇಯಿಂಗ್ XIನಲ್ಲಿ ಸೇರಿಸಿಕೊಳ್ಳಲಾಗಿದೆ.
ದಕ್ಷಿಣ ಆಫ್ರಿಕಾ ಪರ, ಗಾಯದಿಂದಾಗಿ ಪ್ರೀಮಿಯರ್ ವೇಗಿ ಕಗಿಸೊ ರಬಾಡ ತಂಡದಿಂದ ಹೊರಗುಳಿದಿದ್ದು, ಕಾರ್ಬಿನ್ ಬಾಷ್ ಅವರ ಬದಲಿಗೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಮೊದಲಿಗೆ ಬ್ಯಾಟಿಂಗ್ ಆರಂಭಿಸಿದ ದಕ್ಷಿಣ ಆಫ್ರಿಕಾ ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿದೆ. ಐಡೆನ್ ಮಾರ್ಕ್ರಮ್, ರಿಯಾನ್ ರಿಕಲ್ಟನ್ ಮತ್ತು ನಾಯಕ ತೆಂಬಾ ಬವುಮಾ ವಿಕೆಟ್ ಒಪ್ಪಿಸಿದ್ದಾರೆ. ಭಾರತದ ಪರ ಬುಮ್ರಾ ಎರಡು ವಿಕೆಟ್ ಪಡೆದರೆ, ಕುಲದೀಪ್ ಯಾದವ್ ಒಂದು ವಿಕೆಟ್ ಕಬಳಿಸಿದ್ದಾರೆ. 20 ಓವರ್‌ಗಳ ಬಳಿಕ ದಕ್ಷಿಣ ಆಫ್ರಿಕಾ ತಂಡ 3 ವಿಕೆಟ್ ನಷ್ಟಕ್ಕೆ 86 ರನ್ ಗಳಿಸಿತ್ತು.
ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್
ಭಾರತ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ವಾಷಿಂಗ್ಟನ್ ಸುಂದರ್, ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಧ್ರುವ್ ಜುರೆಲ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ದಕ್ಷಿಣ ಆಫ್ರಿಕಾ: ಐಡೆನ್ ಮಾರ್ಕ್ರಮ್, ರಿಯಾನ್ ರಿಕಲ್ಟನ್, ವಿಯಾನ್ ಮುಲ್ಡರ್, ತೆಂಬಾ ಬವುಮಾ (ನಾಯಕ), ಟೋನಿ ಡಿ ಜೋರ್ಜಿ, ಟ್ರಿಸ್ಟಾನ್ ಸ್ಟಬ್ಸ್, ಕೈಲ್ ವೆರೆನ್(ವಿಕೆಟ್ ಕೀಪರ್), ಸೈಮನ್ ಹಾರ್ಮರ್, ಮಾರ್ಕೊ ಜಾನ್ಸೆನ್, ಕಾರ್ಬಿನ್ ಬಾಷ್, ಕೇಶವ್ ಮಹಾರಾಜ್.