ಭಾರತಕ್ಕೆ ಸೋಲು 
ಕ್ರಿಕೆಟ್

India vs South Africa: 93 ವರ್ಷಗಳ ಇತಿಹಾಸದಲ್ಲೇ ಹೀನಾಯ ದಾಖಲೆ ಬರೆದ ಭಾರತ!

ಟೀಮ್ ಇಂಡಿಯಾಗೆ ತವರಿನಲ್ಲಿ ಹೀನಾಯ ಸೋಲುಣಿಸಿದ ಹೆಗ್ಗಳಿಕೆಯನ್ನು ಸೌತ್ ಆಫ್ರಿಕಾ ತಂಡ ತನ್ನದಾಗಿಸಿಕೊಂಡಿದೆ.

ಕೋಲ್ಕತಾ: ದಕ್ಷಿಣ ಆಫ್ರಿಕಾ ವಿರುದ್ಧ ಗೆಲ್ಲಬಹುದಾಗಿದ್ದ ಮೊದಲ ಟೆಸ್ಟ್ ಪಂದ್ಯವನ್ನು ಕೈ ಚೆಲ್ಲುವ ಮೂಲಕ ಭಾರತ ಕ್ರಿಕೆಟ್ ತಂಡ 93 ವರ್ಷಗಳ ಕ್ರಿಕೆಟ್ ಇತಿಹಾಸದಲ್ಲೇ ಕೆಟ್ಟ ದಾಖಲೆಯೊಂದನ್ನು ಬರೆದಿದೆ.

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 159 ರನ್​ಗಳಿಗೆ ಆಲೌಟಾದರೆ, ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 189 ರನ್​ ಕಲೆಹಾಕಿತು.

ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಸೌತ್ ಆಫ್ರಿಕಾ 153 ರನ್​ಗಳಿಗೆ ಆಲೌಟ್ ಆಗಿದೆ. ಮೊದಲ ಇನಿಂಗ್ಸ್​ನಲ್ಲಿನ 30 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ನಲ್ಲಿ 124 ರನ್​ಗಳ ಗುರಿ ಪಡೆದ ಟೀಮ್ ಇಂಡಿಯಾ ಕೇವಲ 93 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡ 30 ರನ್​ಗಳಿಂದ ಸೋಲನುಭವಿಸಿದೆ.

ಈ ಮೂಲಕ ಟೀಮ್ ಇಂಡಿಯಾಗೆ ತವರಿನಲ್ಲಿ ಹೀನಾಯ ಸೋಲುಣಿಸಿದ ಹೆಗ್ಗಳಿಕೆಯನ್ನು ಸೌತ್ ಆಫ್ರಿಕಾ ತಂಡ ತನ್ನದಾಗಿಸಿಕೊಂಡಿದೆ.

93 ವರ್ಷಗಳ ಹೀನಾಯ ದಾಖಲೆ

ಭಾರತ ತಂಡವು ಟೆಸ್ಟ್ ಕ್ರಿಕೆಟ್ ಆಡಲು ಶುರುವಾಗಿ ಬರೋಬ್ಬರಿ 93 ವರ್ಷಗಳಾಗಿದ್ದು, ಭಾರತ ತಂಡವು ಈ ಅತ್ಯಲ್ಪ ಮೊತ್ತವನ್ನು ಬೆನ್ನತ್ತಲಾಗದೇ ಸೋತು ಭಾರೀ ಮುಖಭಂಗ ಅನುಭವಿಸಿದೆ. ಭಾರತ ತಂಡವು ತವರು ಮೈದಾನದಲ್ಲಿ ಒಮ್ಮೆಯೂ 130 ಕ್ಕಿಂತ ಕಡಿಮೆ ಗುರಿಯನ್ನು ಬೆನ್ನತ್ತಲಾಗದೇ ಸೋತ ಚರಿತ್ರೆಯೇ ಇರಲಿಲ್ಲ.

2024 ರಲ್ಲಿ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದ ಕೊನೆಯ ಇನಿಂಗ್ಸ್​ನಲ್ಲಿ 147 ರನ್​​ಗಳ ಗುರಿ ಬೆನ್ನತ್ತಲಾಗದೇ ಟೀಮ್ ಇಂಡಿಯಾ 25 ರನ್​ಗಳಿಂದ ಸೋತಿದ್ದು ತವರಿನಲ್ಲಿನ ಹೀನಾಯ ಸೋಲಾಗಿತ್ತು. ಇದೀಗ ಅದಕ್ಕಿಂತ ಕೆಟ್ಟ ದಾಖಲೆಯೊಂದನ್ನು ಟೀಮ್ ಇಂಡಿಯಾ ನಿರ್ಮಿಸಿದೆ.

ಭಾರತದಲ್ಲಿನ ಟೆಸ್ಟ್ ಪಂದ್ಯದಲ್ಲಿ ಅತೀ ಕಡಿಮೆ ಗುರಿ ಪಡೆದು 100 ರನ್​ಗಳಿಸಲಾಗದೇ ಟೀಮ್ ಇಂಡಿಯಾ ಸೋತಿರುವುದು ಇದೇ ಮೊದಲು. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಭಾರತದ ಈ ಹೀನಾಯ ಸೋಲು ಕೂಡ ಇತಿಹಾಸ ಪುಟ ಸೇರಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸ್ಫೋಟ ಪ್ರಕರಣದಲ್ಲಿ ಮೊದಲ ಬಂಧನ: i20 ಕಾರಿನ ಮಾಲೀಕ ಆಮಿರ್ Arrest; ಡಾ. ಉಮರ್ ಜೊತೆ ಸೇರಿ ದಾಳಿಗೆ ಸಂಚು!

KPCC ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ?: ದೆಹಲಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ!

ಬಾಗಲಕೋಟೆ: ರೈತರ ಟ್ರ್ಯಾಕ್ಟರ್​ಗಳಿಗೆ ಬೆಂಕಿ ಹಚ್ಚುತ್ತಿರುವ Video ವೈರಲ್; ಮೂರು FIR ದಾಖಲು

ಪಶ್ಚಿಮ ಬಂಗಾಳದ ರಾಜಭವನದಲ್ಲಿ ಶಸ್ತ್ರಾಸ್ತ್ರ ದಾಸ್ತಾನಿದೆ: ಟಿಎಂಸಿ ಸಂಸದನ ಆರೋಪಕ್ಕೆ ರಾಜ್ಯಪಾಲರ ಎಚ್ಚರಿಕೆ

1st test: ಭಾರತದ ಸೋಲಿಗೆ ಆ 'ಇಬ್ಬರೇ ಕಾರಣ': ಉಪ ನಾಯಕ ರಿಷಬ್ ಪಂತ್ ಹೇಳಿಕೆ

SCROLL FOR NEXT