ಭಾರತೀಯ ಕ್ರಿಕೆಟ್ ತಂಡದ ತಾರೆ ಸ್ಮೃತಿ ಮಂಧಾನ ಅವರ ತಂದೆ ಶ್ರೀನಿವಾಸ್ ಭಾನುವಾರ ಅನಾರೋಗ್ಯಕ್ಕೆ ಒಳಗಾದ ಕಾರಣ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಅವರೊಂದಿಗಿನ ವಿವಾಹವನ್ನು ಮುಂದೂಡಲಾಗಿದ್ದು, ಆ ಸುತ್ತ ಎದ್ದಿರುವ ವದಂತಿಗಳಿಗೆ ವರನ ಸಹೋದರಿ ಪಲಾಕ್ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
'ಸ್ಮೃತಿ ಅವರ ತಂದೆಯ ಅನಾರೋಗ್ಯದ ಕಾರಣ, ಸ್ಮೃತಿ ಮತ್ತು ಪಲಾಶ್ ಅವರ ವಿವಾಹವನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ. ಈ ಸೂಕ್ಷ್ಮ ಸಮಯದಲ್ಲಿ ನೀವೆಲ್ಲರೂ ನಮ್ಮ ಕುಟುಂಬಗಳ ಗೌಪ್ಯತೆಯನ್ನು ಗೌರವಿಸಬೇಕೆಂದು ನಾವು ವಿನಂತಿಸುತ್ತೇವೆ' ಎಂದು ಅವರು ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಪೋಸ್ಟ್ ಮಾಡಿದ್ದಾರೆ.
ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಸೂಪರ್‌ಸ್ಟಾರ್ ಸ್ಮೃತಿ ಮಂಧಾನ ಅವರ ತಂದೆಗೆ ಹೃದಯಾಘಾತದಂತಹ ಲಕ್ಷಣಗಳು ಕಾಣಿಸಿಕೊಂಡ ಕಾರಣ ಭಾನುವಾರ ಅವರ ವಿವಾಹ ಸಮಾರಂಭವನ್ನು ಮುಂದೂಡಬೇಕಾಯಿತು. ಈ ಲಕ್ಷಣಗಳು ಕಾಣಿಸಿಕೊಂಡ ಕೂಡಲೇ ಆಂಬ್ಯುಲೆನ್ಸ್ ಮೂಲಕ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಸ್ಮೃತಿ ತನ್ನ ತಂದೆಯ ಅನುಪಸ್ಥಿತಿಯಲ್ಲಿ ಸಮಾರಂಭವನ್ನು ಮುಂದುವರಿಯಲು ನಿರಾಕರಿಸಿದರು. ಸ್ಮೃತಿ ಅವರ ಭಾವಿ ಪತಿ ಪಲಾಶ್ ಮುಚ್ಚಲ್ ಅವರ ಆರೋಗ್ಯ ಹದಗೆಟ್ಟ ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಬೇಕಾಯಿತು.
ವೈರಲ್ ಸೋಂಕು ಮತ್ತು ಹೆಚ್ಚಿದ ಅಸಿಡಿಟಿಯಿಂದಾಗಿ ಪಲಾಶ್ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಹೋಗಬೇಕಾಯಿತು. ಆದಾಗ್ಯೂ, ಸಮಸ್ಯೆ ಗಂಭೀರವಾಗಿರಲಿಲ್ಲ. ಚಿಕಿತ್ಸೆ ಪಡೆದ ನಂತರ, ಪಲಾಶ್ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು NDTVಗೆ ದೃಢಪಡಿಸಿವೆ.