ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಟೆಸ್ಟ್ ಪಂದ್ಯದ ವೇಳೆ ರವೀಂದ್ರ ಜಡೇಜಾ.  
ಕ್ರಿಕೆಟ್

India vs South Africa: ತವರಿನಲ್ಲಿ ಮತ್ತೊಮ್ಮೆ ಭಾರತಕ್ಕೆ ವೈಟ್‌ವಾಶ್ ಮುಖಭಂಗ; ಟೆಸ್ಟ್ ಸರಣಿ ಕ್ಲೀನ್ ಸ್ವೀಪ್ ಮಾಡಿದ ಬವುಮಾ ಪಡೆ!

ಕಳೆದ 25 ವರ್ಷಗಳಲ್ಲಿಯೇ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾ ಭಾರತದಲ್ಲಿ ಸರಣಿ ಗೆಲುವು ಸಾಧಿಸಿದೆ.

ಗುವಾಹಟಿ: ಮೊದಲನೇ ಟೆಸ್ಟ್ ಪಂದ್ಯದಲ್ಲಿ 30 ರನ್ ಅಂತರದ ಸೋಲು ಕಂಡು ಟೀಕೆಗೆ ಗುರಿಯಾಗಿದ್ದ ಟೀಂ ಇಂಡಿಯಾ ಗುವಾಹಟಿಯಲ್ಲಿ ಬುಧವಾರ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲೂ 408 ರನ್‌ಗಳಿಂದ ಸೋಲು ಕಾಣುವ ಮೂಲಕ ತವರಿನಲ್ಲೇ ಮುಖಭಂಗ ಅನುಭವಿಸಿದೆ. ಆಫ್-ಸ್ಪಿನ್ನರ್ ಸೈಮನ್ ಹಾರ್ಮರ್ ಆರು ವಿಕೆಟ್ ಗೊಂಚಲು ಪಡೆಯುವ ಮೂಲಕ ತಂಡಕ್ಕೆ ನೆರವಾದರು. ಈ ಮೂಲಕ ದಕ್ಷಿಣ ಆಫ್ರಿಕಾ ಆತಿಥೇಯರನ್ನು ಬೃಹತ್ ರನ್‌ಗಳಿಂದ ಸೋಲಿಸಿ 2-0 ಅಂತರದ ಸರಣಿಯನ್ನು ವೈಟ್‌ವಾಶ್ ಮಾಡಿತು.

ಭಾರತದ ಟೆಸ್ಟ್ ಇತಿಹಾಸದಲ್ಲಿಯೇ ಇದು ಮತ್ತೊಂದು ಮುಜುಗರ ಸೋಲಾಗಿದ್ದು, ಭಾರಿ ರನ್‌ಗಳ ಅಂತರದ ಅತಿದೊಡ್ಡ ಸೋಲಾಗಿದೆ.

ಕಳೆದ 25 ವರ್ಷಗಳಲ್ಲಿಯೇ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾ ಭಾರತದಲ್ಲಿ ಸರಣಿ ಗೆಲುವು ಸಾಧಿಸಿದೆ. 2000 ರಲ್ಲಿ ಹ್ಯಾನ್ಸಿ ಕ್ರೋನಿಯೆ ದಕ್ಷಿಣ ಆಫ್ರಿಕಾ ತಂಡದ ನಾಯಕರಾಗಿದ್ದರು ಮತ್ತು ಸಚಿನ್ ತೆಂಡೂಲ್ಕರ್ ನಾಯಕತ್ವದಲ್ಲಿ ಭಾರತ ತಂಡ ಆಡಿತ್ತು. ದಕ್ಷಿಣ ಆಫ್ರಿಕಾ ತಂಡ ಆ ಟೆಸ್ಟ್ ಸರಣಿಯನ್ನು ಭಾರತದಲ್ಲಿ ಗೆದ್ದಿತ್ತು.

ಮೊದಲ ಇನಿಂಗ್ಸ್‌ನಲ್ಲಿ 489 ರನ್ ಗಳಿಸಿ ದಕ್ಷಿಣ ಆಫ್ರಿಕಾ ಆಲೌಟ್ ಆಯಿತು. ಈ ಗುರಿ ಬೆನ್ನತ್ತಿದ ಭಾರತ 201ರನ್‌ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ದಕ್ಷಿಣ ಆಫ್ರಿಕಾ 288 ರನ್‌ಗಳ ಮುನ್ನಡೆ ಕಾಯ್ದುಕೊಂಡಿತ್ತು.

ಎರಡನೇ ಇನಿಂಗ್ಸ್‌ನಲ್ಲಿಯೂ ಉತ್ತಮ ಪ್ರದರ್ಶನ ನೀಡಿದ ದಕ್ಷಿಣ ಆಫ್ರಿಕಾ ಬ್ಯಾಟರ್‌ಗಳು ಭಾರತೀಯ ಬೌಲರ್‌ಗಳನ್ನು ತರಾಟೆಗೆ ತೆಗೆದುಕೊಂಡರು. 78.3 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 260 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತು. ಈ ಮೂಲಕ ಎದುರಾಳಿ ತಂಡಕ್ಕೆ 548 ರನ್ ಮುನ್ನಡೆ ಕಾಯ್ದುಕೊಂಡಿತ್ತು.

ದಕ್ಷಿಣ ಆಫ್ರಿಕಾ ನೀಡಿದ 549 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಟೀಂ ಇಂಡಿಯಾ ಬ್ಯಾಟರ್‌ಗಳು ಆರಂಭದಲ್ಲಿಯೇ ಎಡವಿದರು. ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಮತ್ತು ಕೆಎಲ್ ರಾಹುಲ್ ಕ್ರಮವಾಗಿ 13 ಮತ್ತು 6 ರನ್ ಗಳಿಸಿ ವಿಕೆಟ್ ಕೈಚೆಲ್ಲಿದರು. 139 ಎಸೆತಗಳಲ್ಲಿ ಸಾಯಿ ಸುದರ್ಶನ್ 14, ಕುಲದೀಪ್ ಯಾದವ್ 5, ಧ್ರುವ್ ಜುರೇಲ್ 2, ನಾಯಕ ರಿಷಭ್ ಪಂತ್ 13 ರನ್ ಗಳಿಸಲಷ್ಟೇ ಶಕ್ತರಾದರು. ನಂತರ ಬಂದ ರವೀಂದ್ರ ಜಡೇಜಾ 87 ಎಸೆತಗಳಲ್ಲಿ 54 ರನ್ ಗಳಿಸುವ ಮೂಲಕ ಏಕಾಂಗಿ ಹೋರಾಟ ನಡೆಸಿದರು. ಉಳಿದಂತೆ ಯಾರೊಬ್ಬರ ಬ್ಯಾಟ್‌ನಿಂದಲೂ ರನ್‌ಗಳು ಮೂಡಿಬರಲಿಲ್ಲ.

ಇತ್ತ ದಕ್ಷಿಣ ಆಫ್ರಿಕಾ ಪರ ಸೈಮನ್ ಹಾರ್ಮರ್ 23 ಓವರ್‌ಗಳಲ್ಲಿ ಕೇವಲ 37 ರನ್ ನೀಡಿ ಆರು ವಿಕೆಟ್ ಕಬಳಿಸುವ ಮೂಲಕ ತಮ್ಮ ವೃತ್ತಿಜೀವನದ ಅತ್ಯುತ್ತಮ ಪ್ರದರ್ಶನ ನೀಡಿದರು. ಒಟ್ಟಾರೆ ಪಂದ್ಯಾವಳಿಯಲ್ಲಿ ಒಂಬತ್ತು ವಿಕೆಟ್‌ಗಳನ್ನು ಕಬಳಿಸುವ ಮೂಲಕ ಭಾರತಕ್ಕೆ ದುಸ್ವಪ್ನವಾದರು.

ಪ್ರವಾಸಿ ತಂಡವು ಮೂರು ವಿಭಾಗಗಳಲ್ಲಿ ಭಾರತವನ್ನು ಮೀರಿಸಿತು. ಐಡೆನ್ ಮಾರ್ಕ್ರಮ್ (9) ಟೆಸ್ಟ್ ಪಂದ್ಯವೊಂದರಲ್ಲಿ ಅತಿ ಹೆಚ್ಚು ಕ್ಯಾಚ್‌ ಪಡೆದ ದಾಖಲೆಯನ್ನು ನಿರ್ಮಿಸಿದರು. 2015 ರಲ್ಲಿ ಅಜಿಂಕ್ಯ ರಹಾನೆ ಅವರ ಎಂಟು ಕ್ಯಾಚ್‌ಗಳನ್ನು ಹಿಂದಿಕ್ಕಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2nd PUC exam 2026-ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ-1: 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ, ಸಾವಿರಕ್ಕೂ ಅಧಿಕ ಮಕ್ಕಳಿಗೆ ನಿರಾಕರಣೆ

Bolivia ರಾಜಧಾನಿ ಸಮೀಪ ಕಾರ್ಗೊ ವಿಮಾನ ಪತನ: ಕನಿಷ್ಠ 15 ಮಂದಿ ಸಾವು-Video

ಅಹಿಂದ ಉತ್ತರಾಧಿಕಾರಕ್ಕೆ ಜಾರಕಿಹೊಳಿ ಸಿದ್ದತೆ: ಹಿಂದುಳಿದ ವರ್ಗಗಳ ಚ್ಯಾಂಪಿಯನ್ ಪಟ್ಟಕ್ಕೆ 'ಸಾಹುಕಾರ್' ಸಮರ್ಥರೇ?

ನನ್ನ ಪರವಾಗಿ ಯಾರೂ ದೆಹಲಿಗೆ ಹೋಗುವುದು ಬೇಡ: ಯಾವ ಶಕ್ತಿ ಪ್ರದರ್ಶನವೂ ಇಲ್ಲ; ಡಿ.ಕೆ. ಶಿವಕುಮಾರ್

ಇಂದು ದೆಹಲಿಯಲ್ಲಿ ಚುನಾವಣೆ ನಡೆಸಿ... BJP 10 ಸ್ಥಾನ ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ: ಕೇಜ್ರಿವಾಲ್ ಸವಾಲು

SCROLL FOR NEXT