ನವದೆಹಲಿ: ಭಾರತೀಯ ಹಿರಿಯ ಬ್ಯಾಟ್ಸ್‌ಮನ್ ಚೇತೇಶ್ವರ ಪೂಜಾರ ಅವರ ಬಾಮೈದ ರಸಿಕ್‌ಭಾಯ್ ಪಬಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬುಧವಾರ ರಾಜ್‌ಕೋಟ್‌ನಲ್ಲಿರುವ ತಮ್ಮ ಮನೆಯಲ್ಲಿ ಅವರು ಮೃತಪಟ್ಟಿರುವುದು ಪತ್ತೆಯಾಗಿದೆ. ಮಾಳವೀಯ ನಗರ ಪೊಲೀಸರ ತಂಡ ಪಬಾರಿ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು ಅವರನ್ನು ಮೃತಪಟ್ಟಿರುವುದಾಗಿ ಘೋಷಿಸಿದರು. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ.
ಜೀತ್ ಪಬಾರಿ ಕೆಲವು ಸಮಯದಿಂದ ಮಾನಸಿಕ ಒತ್ತಡ ಮತ್ತು ಖಿನ್ನತೆಯಿಂದ ಬಳಲುತ್ತಿದ್ದರು. ಏಕೆಂದರೆ ತಾನು ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯು ಜೀತ್ ವಿರುದ್ಧ ಅತ್ಯಾಚಾರ ದೂರು ದಾಖಲಿಸಿದ್ದರು. 2024ರ ನವೆಂಬರ್ 26 ರಂದು ಯುವತಿಯೊಬ್ಬರು ಮಾಳವೀಯ ನಗರ ಪೊಲೀಸ್ ಠಾಣೆಯಲ್ಲಿ ಜೀತ್ ಪಬಾರಿ ವಿರುದ್ಧ ಅತ್ಯಾಚಾರ ದೂರು ದಾಖಲಿಸಿದ್ದರು. ಇದಾದ ಒಂದು ವರ್ಷದ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪಬಾರಿ ಮದುವೆಯ ನೆಪದಲ್ಲಿ ತನ್ನೊಂದಿಗೆ ದೈಹಿಕ ಸಂಬಂಧವನ್ನು ಬಲವಂತಪಡಿಸಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ. ಅತ್ಯಾಚಾರದ ನಂತರ ನಿಶ್ಚಿತಾರ್ಥ ಕೂಡ ಮುರಿದುಬಿದ್ದಿದೆ ಎಂದು ದೂರಿನಲ್ಲಿ ಯುವತಿ ತಿಳಿಸಿದ್ದಾರೆಂದು ಹೇಳಲಾಗಿದೆ. ಕಾನೂನು ಒತ್ತಡದಿಂದಾಗಿ ಪಬಾರಿಯ ಮಾನಸಿಕ ಸ್ಥಿತಿ ಹದಗೆಟ್ಟಿತ್ತು ಎಂದು ಹೇಳಲಾಗುತ್ತಿದೆ.