ಗೌತಮ್ ಗಂಭೀರ್ ಸಾಂದರ್ಭಿಕ ಚಿತ್ರ 
ಕ್ರಿಕೆಟ್

ದಕ್ಷಿಣ ಆಫ್ರಿಕಾ ವಿರುದ್ಧ ಸೋಲು: ಮುಖ್ಯ ಕೋಚ್ ಹುದ್ದೆಯಿಂದ ಗಂಭೀರ್ ವಜಾ ಸಾಧ್ಯತೆ? BCCI ಹೇಳಿದ್ದೇನು?

ಗಂಭೀರ್ ಬದಲಿಗೆ ವಿವಿಎಸ್ ಲಕ್ಷ್ಮಣ್ ಅವರನ್ನು ಭಾರತದ ರೆಡ್-ಬಾಲ್ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕ ಮಾಡಬಹುದು ಎಂದು ಕೆಲವು ವರದಿಗಳು ಹೇಳಿವೆ.

ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ 0-2 ಅಂತರದ ಹೀನಾಯ ಸೋಲಿನ ನಂತರ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಭವಿಷ್ಯದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.

ಒಂದು ವರ್ಷಕ್ಕೂ ಕಡಿಮೆ ಅವಧಿಯಲ್ಲಿ ಭಾರತ ಎರಡನೇ ಬಾರಿ ತವರಿನಲ್ಲಿ ಟೆಸ್ಟ್ ಸರಣಿ ಕಳೆದುಕೊಂಡ ನಂತರ ಗಂಭೀರ್ ವಿರುದ್ಧ ವ್ಯಾಪಕ ಟೀಕೆಗಳು ಕೇಳಿಬರುತ್ತಿವೆ. ಗಂಭೀರ್ ಬದಲಿಗೆ ವಿವಿಎಸ್ ಲಕ್ಷ್ಮಣ್ ಅವರನ್ನು ಭಾರತದ ರೆಡ್-ಬಾಲ್ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕ ಮಾಡಬಹುದು ಎಂದು ಕೆಲವು ವರದಿಗಳು ಹೇಳಿವೆ.

ಆದಾಗ್ಯೂ, BCCI ಗಂಭೀರ್ ಅವರ ಮೇಲೆ ನಂಬಿಕೆ ಇಟ್ಟಿದ್ದು, ಅವರು ತಂಡವನ್ನು ಪುನರ್ ರಚಿಸುವವರೆಗೂ ಅವರಿಗೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಮೂಲಗಳು ಹೇಳಿವೆ.

ದಕ್ಷಿಣ ಆಫ್ರಿಕಾ ವಿರುದ್ಧದ ವೈಟ್-ಬಾಲ್ ಸರಣಿಯ ಕೊನೆಯಲ್ಲಿ ತಂಡದ ಆಡಳಿತ ಮಂಡಳಿ ಮತ್ತು ಆಯ್ಕೆದಾರರ ನಡುವೆ ಸಭೆ ನಡೆಯಲಿದೆ ಎಂದು ಮೂಲಗಳು ಹೇಳಿವೆ.

ಈಗ ಗೌತಮ್ ಗಂಭೀರ್ ಅವರನ್ನು ಬದಲಾಯಿಸಲು ನೋಡುತ್ತಿಲ್ಲ. ಅವರು ತಂಡವನ್ನು ಪುನರ್ ರಚಿಸುತ್ತಿದ್ದಾರೆ. ಅವರ ಒಪ್ಪಂದವು 2027 ರ ವಿಶ್ವಕಪ್ ವರೆಗೆ ಇರುತ್ತದೆ ಎಂದು ಬಿಸಿಸಿಐ ಹೇಳಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದ ಕೊನೆಯಲ್ಲಿ ತಂಡದ ಆಡಳಿತ ಮಂಡಳಿ ಮತ್ತು ಆಯ್ಕೆದಾರರ ನಡುವೆ ಸಭೆ ನಡೆಯಲಿದೆ. ಟೆಸ್ಟ್ ತಂಡದ ಪ್ರದರ್ಶನವನ್ನು ಹೇಗೆ ಹೆಚ್ಚಿಸಿಕೊಳ್ಳುವುದು ಎಂದು ಗಂಭೀರ್ ಅವರನ್ನು ಕೇಳಲಾಗುತ್ತದೆ" ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್