ಪಂದ್ಯದ ನಡುವೆ ವಿರಾಟ್ ಕೊಹ್ಲಿ ಕಾಲಿಗೆ ಬಿದ್ದ ಅಭಿಮಾನಿ 
ಕ್ರಿಕೆಟ್

Cricket: ಸಿಬ್ಬಂದಿಗೆ ಚಳ್ಳೆ ಹಣ್ಣು ತಿನ್ನಿಸಿ ಮೈದಾನಕ್ಕೆ ನುಗ್ಗಿದ Virat Kohli ಅಭಿಮಾನಿ! KL Rahul ಕಕ್ಕಾಬಿಕ್ಕಿ! Video

ರಾಂಚಿಯ ಜೆಎಸ್‌ಸಿಎ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಪಂದ್ಯದಲ್ಲಿ ಭಾರತ 17 ರನ್ ಗಳ ಅಂತರದಲ್ಲಿ ವಿರೋಚಿತ ಜಯ ದಾಖಲಿಸಿತು.

ರಾಂಚಿ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಗಂಭೀರ ಭದ್ರತಾ ಲೋಪವಾಗಿದ್ದು, ಅಭಿಮಾನಿಯೋರ್ವ ಭದ್ರತಾ ಸಿಬ್ಬಂದಿಗಳ ಕಣ್ಣುತಪ್ಪಿಸಿ ಮೈದಾನದೊಳಗೆ ನುಗ್ಗಿದ ಘಟನೆ ನಡೆದಿದೆ.

ರಾಂಚಿಯ ಜೆಎಸ್‌ಸಿಎ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಪಂದ್ಯದಲ್ಲಿ ಭಾರತ 17 ರನ್ ಗಳ ಅಂತರದಲ್ಲಿ ವಿರೋಚಿತ ಜಯ ದಾಖಲಿಸಿತು. ಈ ಪಂದ್ಯದಲ್ಲಿ ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ಅಬ್ಬರ ಶತಕ ಸಿಡಿಸಿ ಭಾರತದ ಬೃಹತ್ ಮೊತ್ತಕ್ಕೆ ಕಾರಣರಾದರು.

ಇದು ಅವರ ಏಕದಿನ ಕ್ರಿಕೆಟ್ ನ 52ನೇ ಶತಕವಾಗಿದ್ದು, ಈ ಶತಕ ಸಿಡಿಸುತ್ತಲೇ ಕೊಹ್ಲಿ ಸಂಭ್ರಮಿಸುತ್ತಿದ್ದರು. ಇದೇ ಸಂದರ್ಭದಲ್ಲೇ ಮೈದಾನದಲ್ಲಿ ಭದ್ರತಾ ಲೋಪವಾಗಿದ್ದು, ಅಭಿಮಾನಿಯೋರ್ವ ಸಿಬ್ಬಂದಿಗಳ ಕಣ್ಮುತಪ್ಪಿಸಿ ಮೈದಾನಕ್ಕೆ ನುಗ್ಗಿದ್ದಾನೆ.

ಈ ವೇಳೆ ಸಿಬ್ಬಂದಿಗಳು ಆತನನ್ನು ಹಿಡಿಯಲು ಯತ್ನಿಸಿದ್ದಾರೆ. ಆದರೆ ಆತ ವೇಗವಾಗಿ ಓಡುತ್ತಾ ವಿರಾಟ್ ಕೊಹ್ಲಿ ಬಳಿ ಬಂದು ಅವರ ಕಾಲಿಗೆರಗಿದ್ದಾರೆ. ಈ ವೇಳೆ ಸಿಬ್ಬಂದಿ ಅಭಿಮಾನಿಯನ್ನು ಹಿಡಿದು ಹೊರಕ್ಕೆ ಎಳೆದೊಯ್ದಿದ್ದಾರೆ.

KL Rahul ಕಕ್ಕಾಬಿಕ್ಕಿ!

ಇನ್ನು ಅಭಿಮಾನಿ ಕೊಹ್ಲಿಯತ್ತ ಓಡಿ ಬರುತ್ತಲೇ ಮತ್ತೊಂದು ಬದಿಯಲ್ಲಿದ್ದ ಕೆಎಲ್ ರಾಹುಲ್ ಅಭಿಮಾನಿಯ ನೋಡಿ ಕಕ್ಕಾಬಿಕ್ಕಿಯಾದರು. ಈ ವೇಳೆ ಕೊಹ್ಲಿಗೆ ಕೂಡ ಆತನ ಬರುವಿಕೆಯನ್ನು ತಿಳಿಸಿದರು. ಕೂಡಲೇ ಎಚ್ಚೆತ್ತ ಕೊಹ್ಲಿ ಆತನನ್ನು ಸಂಭಾಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

ವೃತ್ತಿ ಜೀವನದ ಬಹು ದೊಡ್ಡ ಕನಸನ್ನು ರಿವೀಲ್ ಮಾಡಿದ ವೈಭವ್ ಸೂರ್ಯವಂಶಿ! Video

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!