ಹಾರ್ದಿಕ್ ಪಾಂಡ್ಯಾ-ಮಹಿಕಾ ಶರ್ಮಾ 
ಕ್ರಿಕೆಟ್

Hardik Pandya ಮತ್ತೆ ಮದುವೆಗೆ ಸಿದ್ಧ?ಮಹಿಕಾ ಶರ್ಮಾ ಜೊತೆ ಎಂಗೇಜ್ ಮೆಂಟ್? Video Viral!

ಹಾರ್ದಿಕ್ ಪಾಂಡ್ಯಾ ತಮ್ಮ ಪತ್ನಿ ನತಾಶಾ ಸ್ಟಾಂಕೋವಿಕ್ ಗೆ ವಿಚ್ಛೇದನ ನೀಡಿದ ಬಳಿಕ ಅವರ ಹೆಸರು ಮಹಿಕಾ ಶರ್ಮಾ ಅವರೊಂದಿಗೆ ಕೇಳಿಬರುತ್ತಿತ್ತು.

ನವದೆಹಲಿ: ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯಾ ಮತ್ತೊಂದು ಮದುವೆಗೆ ಸಿದ್ಧವಾಗುತ್ತಿದ್ದಾರೆ ಎಂಬ ಸುದ್ದಿ ವ್ಯಾಪಕ ಚರ್ಚೆಯಾಗುತ್ತಿದ್ದು, ಇದಕ್ಕೆ ಈ ವಿಡಿಯೋ ಕಾರಣ ಎಂದು ಹೇಳಲಾಗುತ್ತಿದೆ.

ಹೌದು.. ಹಾರ್ದಿಕ್ ಪಾಂಡ್ಯಾ ತಮ್ಮ ಪತ್ನಿ ನತಾಶಾ ಸ್ಟಾಂಕೋವಿಕ್ ಗೆ ವಿಚ್ಛೇದನ ನೀಡಿದ ಬಳಿಕ ಅವರ ಹೆಸರು ಮಹಿಕಾ ಶರ್ಮಾ ಅವರೊಂದಿಗೆ ಕೇಳಿಬರುತ್ತಿತ್ತು. ಸಾಕಷ್ಟು ವೇದಿಕೆಗಳಲ್ಲಿ ಹಾರ್ದಿಕ್ ಮತ್ತು ಮಹಿಕಾ ಶರ್ಮಾ ಒಟ್ಟಿಗೆ ಕಾಣಿಸಿಕೊಂಡಿದ್ದರು. ಹೀಗಾಗಿ ಈ ಜೋಡಿ ಶೀಘ್ರದಲ್ಲೇ ವಿವಾಹವಾಗಲಿದ್ದಾರೆ ಎಂದು ಹೇಳಲಾಗುತ್ತಿತ್ತು.

ಈ ಊಹಾಪೋಹಗಳ ನಡುವೆಯೇ ಇದೀಗ ಈ ಜೋಡಿ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದೆ ಎಂದು ಹೇಳಲಾಗುತ್ತಿದ್ದು, ಈ ಕುರಿತ ವಿಡಿಯೋಗಳು ವ್ಯಾಪಕ ವೈರಲ್ ಆಗುತ್ತಿವೆ.

ವೈರಲ್ ಆಗಿರುವ ವಿಡಿಯೋದಲ್ಲಿ ಹಾರ್ದಿಕ್ ಪಾಂಡ್ಯ ಮತ್ತು ಮಾಡೆಲ್ ಮಹಿಕಾ ಶರ್ಮಾ ಒಟ್ಟಿಗೆ ಕುಳಿತಿದ್ದು ಈ ವೇಳೆ ಅವರ ಸುತ್ತಲೂ ನಿಂತಿದ್ದ ಪುರೋಹಿತರು ಕೆಲ ಪೂಜಾ ಕೈಂಕರ್ಯಗಳನ್ನು ನೆರವೇರಿಸುತ್ತಿರುವುದು ಕಂಡುಬಂದಿದೆ.

ಇದನ್ನೇ ಸಾಮಾಜಿಕ ಜಾಲತಾಣಗಳಲ್ಲಿ ವಿವಾಹ ನಿಶ್ಚಿತಾರ್ಥ ಎಂದು ಬಿಂಬಿಸಲಾಗುತ್ತಿದೆ. ಈ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿದ್ದರೂ ಹಾರ್ದಿಕ್ ಪಾಂಡ್ಯಾ ಕುಟುಂಬ ಅಥವಾ ಮಹಿಕಾ ಅವರ ಕುಟುಂಬಸ್ಥರು ಯಾವುದೇ ರೀತಿಯ ಸ್ಫಷ್ಟನೆ ನೀಡಿಲ್ಲ.

ಮಹಿಕಾ ಕೈ ಬೆರಳಿನಲ್ಲಿ ವಜ್ರದ ಉಂಗುರ

ಈ ಹಿಂದೆಯೂ ಕೂಡ ಹಾರ್ದಿಕ್ ಪಾಂಡ್ಯಾ ಮತ್ತು ಮಹಿಕಾ ಶರ್ಮಾ ವಿವಾಹ ನಿಶ್ಚಿತಾರ್ಥ ಸಮಾಚಾರ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಮಹಿಕಾ ಶರ್ಮಾ ಅವರ ಬೆರಳಿನಲ್ಲಿ ವಜ್ರದ ಉಂಗುರ ಕಾಣಿಸಿಕೊಂಡಿತು. ಅಗ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಸುದ್ದಿ ಹಬ್ಬಿತ್ತು. ಆದರೆ ಬಳಿಕ ಮಹಿಕಾ ಅವರು ಅದನ್ನು ನಿರಾಕರಿಸಿದ್ದರು.

ಅಂದಹಾಗೆ ಮಹಿಕಾ ಮತ್ತು ಮಹಿಕಾ ಕೆಲವು ಸಮಯದಿಂದ ಒಟ್ಟಿಗೆ ಇದ್ದಾರೆ. ಹಾರ್ದಿಕ್ ಪಾಂಡ್ಯ ಕೆಲವು ಸಮಯದಿಂದ ಮಹಿಕಾ ಶರ್ಮಾ ಅವರೊಂದಿಗೆ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದಾರೆ. ಅವರು ಮೊದಲು ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು.

ಅಲ್ಲಿಂದ ಅವರು ದೀರ್ಘ ರಜೆಗೆ ಹೋಗಿದ್ದರು. ಪಾಂಡ್ಯ ಮತ್ತು ಮಹಿಕಾ ಸಾಮಾಜಿಕ ಮಾಧ್ಯಮದಲ್ಲಿ ಒಟ್ಟಿಗೆ ಇರುವ ಫೋಟೋಗಳು ಮತ್ತು ವೀಡಿಯೊಗಳನ್ನು ಪೋಸ್ಟ್ ಮಾಡುವ ಮೂಲಕ ತಮ್ಮ ಸಂಬಂಧವನ್ನು ಜಗತ್ತಿಗೆ ಘೋಷಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಕ್ಷಮೆ ಬೇಕಿಲ್ಲ: ರಾಹುಲ್ ಗಾಂಧಿ

ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ!

ಅಯೋಧ್ಯೆಯ ರಾಜರ್ಷಿ ದಶರಥ್ ವೈದ್ಯಕೀಯ ಕಾಲೇಜ್ ನಲ್ಲಿ ಬಾಂಬ್ ತಯಾರಿಕೆ ಕಾಗದ ಪತ್ತೆ; ವಿದ್ಯಾರ್ಥಿ ಬಂಧನ

Commonwealth Games 2026: ಬಾಕ್ಸಿಂಗ್ ನಲ್ಲಿ ಚಿನ್ನ ಗೆದ್ದ ಸಾಕ್ಷಿ, ಪ್ರಿಯಾ

ಪ್ರಧಾನಿ ಮೋದಿಯನ್ನು ನಿಂದಿಸಿದ 15 ವರ್ಷದ ಹುಡುಗಿ ಹಿಂದೆ 'ಆ ಎರಡು ಗುಂಪುಗಳಿವೆ': ಕಂಗನಾ ಹೊಸ ಬಾಂಬ್!