ಎಂ ಚಿನ್ನಸ್ವಾಮಿ ಸ್ಟೇಡಿಯಂ 
ಕ್ರಿಕೆಟ್

WPL 2026: ತವರಿನಲ್ಲಿ ಪಂದ್ಯಗಳಿಲ್ಲದೆ ಆರ್‌ಸಿಬಿಗೆ ಸಂಕಷ್ಟ; ನವಿ ಮುಂಬೈ, ವಡೋದರಾದತ್ತ ಅಭಿಮಾನಿಗಳ ಚಿತ್ತ!

ಮಹಿಳಾ ಪ್ರೀಮಿಯರ್ ಲೀಗ್ (WPL) 2026ರ ಮೆಗಾ ಹರಾಜಿಗೆ ಮುಂಚಿತವಾಗಿ RCB ನಾಯಕಿ ಸ್ಮೃತಿ ಮಂಧಾನ, ರಿಚಾ ಘೋಷ್, ಎಲಿಸ್ ಪೆರ್ರಿ ಮತ್ತು ಶ್ರೇಯಾಂಕ ಪಾಟೀಲ್ ಅವರನ್ನು ಉಳಿಸಿಕೊಂಡಿತು.

2024ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು WPL 2026 ರಲ್ಲಿ ತವರಿನಲ್ಲಿ ಯಾವುದೇ ಪಂದ್ಯಗಳನ್ನು ಹೊಂದಿಲ್ಲ. ಪುರುಷರ ತಂಡ IPL 2025ನೇ ಆವೃತ್ತಿಯಲ್ಲಿ ಪ್ರಶಸ್ತಿಯನ್ನು ಗೆದ್ದ ನಂತರ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತದ ನಂತರ, ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣವು ದೊಡ್ಡ ಪಂದ್ಯಗಳನ್ನು ನಡೆಯಲು ಯೋಗ್ಯವಲ್ಲ ಎಂದು ತೀರ್ಮಾನಿಸಲಾಗಿದ್ದು, WPL 2026ರಲ್ಲಿ ಯಾವುದೇ ಪಂದ್ಯಗಳನ್ನು ಆಯೋಜಿಸುತ್ತಿಲ್ಲ.

ಬದಲಾಗಿ, ಸ್ಮೃತಿ ಮಂಧಾನ ಮತ್ತು ತಂಡವು ತಮ್ಮ ಮೊದಲ ನಾಲ್ಕು ಪಂದ್ಯಗಳನ್ನು ನವಿ ಮುಂಬೈನಲ್ಲಿ ಆಡಲಿದ್ದು, ಉಳಿದ ನಾಲ್ಕು ಪಂದ್ಯಗಳನ್ನು ಗುಜರಾತ್‌ನ ವಡೋದರಾದಲ್ಲಿ ಆಡಲಿದೆ. ಲೀಗ್ ಜನವರಿ 9 ರಿಂದ ಫೆಬ್ರುವರಿ 5 ರವರೆಗೆ ನವಿ ಮುಂಬೈ ಮತ್ತು ವಡೋದರಾದಲ್ಲಿ ನಡೆಯಲಿದೆ. ಸಾಮಾನ್ಯವಾಗಿ ಫೆಬ್ರುವರಿ-ಮಾರ್ಚ್‌ನಲ್ಲಿ ಡಬ್ಲ್ಯುಪಿಎಲ್ ನಡೆಯುತ್ತಿತ್ತು.

ಜನವರಿ 9 ರಂದು ನವಿ ಮುಂಬೈನಲ್ಲಿ ನಡೆಯಲಿರುವ WPL 2026ರ ಆರಂಭಿಕ ಪಂದ್ಯದಲ್ಲಿ RCB ತಂಡವು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ನಂತರ ಅದೇ ಸ್ಥಳದಲ್ಲಿ ತಮ್ಮ ಮೊದಲ ಸುತ್ತಿನ ಪಂದ್ಯಗಳಲ್ಲಿ ಯುಪಿ ವಾರಿಯರ್ಸ್, ಗುಜರಾತ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳನ್ನು ಎದುರಿಸಲಿದೆ. ಸ್ಮೃತಿ ಮಂಧಾನ ಮತ್ತು ಪಡೆ WPL 2026ರ 4 ಲೀಗ್ ಹಂತದ ಪಂದ್ಯಗಳ ಉಳಿದ ಪಂದ್ಯಗಳನ್ನು ವಡೋದರಾದಲ್ಲಿ ಆಡಲಿದೆ.

ಮಹಿಳಾ ಪ್ರೀಮಿಯರ್ ಲೀಗ್ (WPL) 2026ರ ಮೆಗಾ ಹರಾಜಿಗೆ ಮುಂಚಿತವಾಗಿ RCB ನಾಲ್ವರು ಆಟಗಾರ್ತಿಯರನ್ನು ಉಳಿಸಿಕೊಂಡಿತು. ನಾಯಕಿ ಸ್ಮೃತಿ ಮಂಧಾನ, ರಿಚಾ ಘೋಷ್, ಎಲಿಸ್ ಪೆರ್ರಿ ಮತ್ತು ಶ್ರೇಯಾಂಕ ಪಾಟೀಲ್ ಅವರನ್ನು ಉಳಿಸಿಕೊಂಡಿತು.

WPL 2026 ಕ್ಕಾಗಿ RCB ತಂಡ

ಸ್ಮೃತಿ ಮಂಧಾನ (ನಾಯಕಿ), ರಿಚಾ ಘೋಷ್ (ವಿಕೆಟ್ ಕೀಪರ್), ಎಲ್ಲಿಸ್ ಪೆರ್ರಿ, ಶ್ರೇಯಾಂಕಾ ಪಾಟೀಲ್, ಜಾರ್ಜಿಯಾ ವೋಲ್, ನಾಡಿನ್ ಡಿ ಕ್ಲರ್ಕ್, ರಾಧಾ ಯಾದವ್, ಲಾರೆನ್ ಬೆಲ್, ಲಿನ್ಸೆ ಸ್ಮಿತ್, ಪ್ರೇಮಾ ರಾವತ್, ಅರುಂಧತಿ ರೆಡ್ಡಿ, ಪೂಜಾ ವಸ್ತ್ರಾಕರ್, ಗ್ರೇಸ್ ಹ್ಯಾರಿಸ್, ಗೌತಮಿ ನಾಯಕ್, ಪ್ರತ್ಯೂಷ ಕುಮಾರ್ (ವಿಕೆಟ್ ಕೀಪರ್).

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia war effect: ಷೇರು ಮಾರುಕಟ್ಟೆಯಲ್ಲಿ 'ರಕ್ತಪಾತ': ಸೆನ್ಸೆಕ್ಸ್ 1,555 ಅಂಕ ಕುಸಿತ, ನಿಮಿಷಗಳಲ್ಲಿ ಹೂಡಿಕೆದಾರರಿಗೆ 8 ಲಕ್ಷ ಕೋಟಿ ರೂ ನಷ್ಟ..!

ನ್ಯೂಯಾರ್ಕ್‌: ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ Air Canada Express ವಿಮಾನ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ

West Asia war: ವಿದ್ಯುತ್ ಸ್ಥಾವರಗಳ ಮೇಲೆ ದಾಳಿಯಾದರೆ, ಹಾರ್ಮುಜ್ ಜಲಸಂಧಿ ಸಂಪೂರ್ಣ ಬಂದ್; ಇರಾನ್ ಕಠಿಣ ಎಚ್ಚರಿಕೆ

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ಸಾವು-Video

ಉರಿದ ಹೊರ್ಮುಸ್; ಮುಂಚೂಣಿಗೆ ಬಂದ ಯುಎಸ್ ಮರೀನ್ಸ್ (ಜಾಗತಿಕ ಜಗಲಿ)

SCROLL FOR NEXT