2026 ರ ಮಹಿಳಾ ಏಕದಿನ ವಿಶ್ವಕಪ್ ಕೊಲಂಬೊದಲ್ಲಿ ಸಾಂಪ್ರದಾಯಿಕ ಎದುರಾಳಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯದ ಮೇಲೆ ಹವಾಮಾನ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ನೋಡಬೇಕಿದೆ.
ವುಮೆನ್ಸ್ ವರ್ಲ್ಡ್ಕಪ್ನ 6ನೇ ಪಂದ್ಯ ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭಾರತೀಯ ಕಾಲಮಾನ ಮಧ್ಯಾಹ್ನ 3 ಗಂಟೆಯಿಂದ ಶುರುವಾಗಲಿದೆ.
ಕ್ರಿಕೆಟ್‌ನಲ್ಲಿ ಮತ್ತೊಂದು ಭಾರತ-ಪಾಕಿಸ್ತಾನ ಘರ್ಷಣೆಗೆ ಇದು ಸಮಯ. ಕಳೆದ ಮೂರು ವಾರಗಳಲ್ಲಿ ಈ ಇಬ್ಬರು ಸಾಂಪ್ರದಾಯಿಕ ಎದುರಾಳಿಗಳು ಪರಸ್ಪರ ಎದುರಿಸುತ್ತಿರುವುದು ಇದು ನಾಲ್ಕನೇ ಬಾರಿ. ಆದರೆ, ಈ ಬಾರಿ ಅದು ಮಹಿಳಾ ವಿಶ್ವಕಪ್‌ನಲ್ಲಿ.
ಏಕದಿನ ಕ್ರಿಕೆಟ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ್ ಮಹಿಳಾ ತಂಡಗಳು ಈವರೆಗೆ 11 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 11 ಪಂದ್ಯಗಳನ್ನು ಸಹ ಗೆದ್ದುಕೊಂಡಿದೆ. ಹೀಗಾಗಿ ಇಂದಿನ ಮ್ಯಾಚ್ನಲ್ಲೂ ಭಾರತ ತಂಡವೇ ಗೆಲ್ಲುವ ಫೇವರೇಟ್ ತಂಡವಾಗಿ ಗುರುತಿಸಿಕೊಂಡಿದೆ.
ಪಂದ್ಯವನ್ನು ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್ನಲ್ಲಿ ವೀಕ್ಷಿಸಬಹುದು. ಹಾಗೆಯೇ ಜಿಯೋ ಹಾಟ್ಸ್ಟಾರ್ ಆ್ಯಪ್ ಹಾಗೂ ವೆಬ್ಸೈಟ್ಗಳಲ್ಲೂ ಈ ಮ್ಯಾಚ್ನ ಲೈವ್ ಸ್ಟೀಮಿಂಗ್ ಇರಲಿದೆ.
ಭಾರತವು ಶ್ರೀಲಂಕಾ ವಿರುದ್ಧದ ತನ್ನ ಮೊದಲ ಪಂದ್ಯವನ್ನು ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಮತ್ತೊಂದೆಡೆ, ಪಾಕಿಸ್ತಾನವು ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಅವಮಾನಕರ ಸೋಲನ್ನು ಅನುಭವಿಸಿ ಪ್ರಸ್ತುತ ಎಂಟು ತಂಡಗಳ ಪಾಯಿಂಟ್ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.
ಎರಡೂ ತಂಡಗಳು ಪರಸ್ಪರ ಸೆಣಸಾಡಲು ಸಿದ್ಧವಾಗುತ್ತಿದ್ದಂತೆ, ಮಳೆಯ ಕಾರ್ಮೋಡ ಕವಿದಿದೆ.
IND-W vs PAK-W ಪಂದ್ಯ ವೇಳೆ ಮಳೆಯಾಗುವ ಸಾಧ್ಯತೆಗಳು, ತಾಪಮಾನ ಸುಮಾರು 29-26°C ಇದ್ದು, ನಿನ್ನೆ ಶ್ರೀಲಂಕಾ vs ಆಸ್ಟ್ರೇಲಿಯಾ ಪಂದ್ಯಕ್ಕೆ ಮಳೆ ಕೈಕೊಟ್ಟಿತು.
ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಪ್ರತೀಕಾ ರಾವಲ್, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ಜೆಮಿಮಾ ರೊಡ್ರಿಗಸ್, ರೇಣುಕಾ ಸಿಂಗ್ ಠಾಕೂರ್, ಅರುಂಧತಿ ರೆಡ್ಡಿ, ರಿಚಾ ಘೋಷ್ (ವಿಕೆಟ್ ಕೀಪರ್), ಕ್ರಾಂತಿ ಗೌಡ್, ಅಮನ್ಜೋತ್ ಕೌರ್, ರಾಧಾ ಯಾದವ್, ಶ್ರೀ ಚಾರಣಿ, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಸ್ನೇಹ್ ರಾಣಾ.
ಪಾಕಿಸ್ತಾನ್ ತಂಡ: ಫಾತಿಮಾ ಸನಾ (ನಾಯಕಿ), ಮುನೀಬಾ ಅಲಿ ಸಿದ್ದಿಕಿ (ಉಪನಾಯಕಿ), ಅಲಿಯಾ ರಿಯಾಜ್, ಡಯಾನಾ ಬೇಗ್, ಐಮನ್ ಫಾತಿಮಾ, ನಶ್ರಾ ಸುಂಧು, ನತಾಲಿಯಾ ಪರ್ವೇಝ್, ಒಮೈಮಾ ಸೊಹೈಲ್, ರಮೀನ್ ಶಮೀಮ್, ಸದಾಫ್ ಶಮಾಸ್, ಸಾದಿಯಾ ಇಕ್ಬಾಲ್, ಶಾವಾಲ್ ಝುಲ್ಫಿಕರ್, ಸಿದ್ರಾ ಅಮಿನ್, ಸಿದ್ರಾ ಅಮಿನ್, ಸಿದ್ರಾ ನವಾಝ್, ಸೈದಾ ಅರೂಬ್ ಶಾ.