ಶುಭ್ ಮನ್ ಗಿಲ್ 
ಕ್ರಿಕೆಟ್

2nd Test, Day 2: ವಿಂಡೀಸ್ ವಿರುದ್ಧ ಶತಕ; ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

20 ರನ್ ಗಳಿಸಿ ಎರಡನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದ ನಾಯಕ ಶುಭಮನ್ ಗಿಲ್ ಎರಡನೇ ದಿನದಾಟದಲ್ಲಿ ಶತಕ ಸಿಡಿಸಿದ್ದಾರೆ. ಆ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದಿದ್ದಾರೆ.

ನವದೆಹಲಿ: ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ವಿಂಡೀಸ್ ವಿರುದ್ಧ ಭರ್ಜರಿ ಶತಕ ಸಿಡಿಸಿದ ಭಾರತ ತಂಡದ ನಾಯಕ ಅಪರೂಪದ ದಾಖಲೆಗೆ ಪಾತ್ರರಾಗಿದ್ದಾರೆ.

ದೆಹಲಿಯ ಅರುಣ್ ಜೇಟ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ಬೃಹತ್ ಮೊತ್ತ ದಾಖಲಿಸಿ ಇನಿಂಗ್ಸ್ ಮುಂದುವರೆಸಿದೆ.

20 ರನ್ ಗಳಿಸಿ ಎರಡನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದ ನಾಯಕ ಶುಭಮನ್ ಗಿಲ್ ಎರಡನೇ ದಿನದಾಟದಲ್ಲಿ ಶತಕ ಸಿಡಿಸಿದ್ದಾರೆ. ಆ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದಿದ್ದಾರೆ.

ಈ ಹಿಂದೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಅತ್ಯದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದ ಗಿಲ್ ಇದೀಗ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್​ನಲ್ಲಿ ಆಕರ್ಷಕ ಶತಕ ಬಾರಿಸಿದ್ದಾರೆ.

ಈ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶುಭ್​​ಮನ್ ಗಿಲ್ 176 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 13 ಫೋರ್​ಗಳೊಂದಿಗೆ ಶತಕ ಪೂರೈಸಿದರು.

ಈ ಶತಕದೊಂದಿಗೆ ವಿಶೇಷ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಈ ಶತಕದೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅತ್ಯಧಿಕ ರನ್​ ಕಲೆಹಾಕಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

ರಿಷಬ್ ಪಂತ್ ದಾಖಲೆ ಪತನ

ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಹೆಸರಿನಲ್ಲಿತ್ತು. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ 38 ಪಂದ್ಯಗಳನ್ನಾಡಿರುವ ಪಂತ್ 67 ಇನಿಂಗ್ಸ್​ಗಳ ಮೂಲಕ ಒಟ್ಟು 2731 ರನ್​ ಕಲೆಹಾಕಿದ್ದಾರೆ.

ಈ ಮೂಲಕ WTC ನಲ್ಲಿ ಅತ್ಯಧಿಕ ರನ್​ಗಳಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದರು. ಇದೀಗ ಈ ದಾಖಲೆಯನ್ನು ಶುಭ್​ಮನ್ ಗಿಲ್ ಮುರಿದಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯ್​ಶಿಪ್ ಸರಣಿಯಲ್ಲಿ ಈವರೆಗೆ 39 ಪಂದ್ಯಗಳನ್ನಾಡಿರುವ ಗಿಲ್ 71 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 10 ಶತಕಗಳೊಂದಿಗೆ ಒಟ್ಟು 2796 ರನ್ ಕಲೆಹಾಕಿದ್ದಾರೆ.

ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ ಅತೀ ಹೆಚ್ಚು ರನ್​ ಗಳಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಇಂಗ್ಲೆಂಡ್​ನ ಜೋ ರೂಟ್. WTC ನಲ್ಲಿ 69 ಪಂದ್ಯಗಳನ್ನಾಡಿರುವ ರೂಟ್ ಒಟ್ಟು 6080 ರನ್​ ಗಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಸಚಿನ್​, ರೋಹಿತ್​ ದಾಖಲೆ ಪತನ

ಟೆಸ್ಟ್​ ಮಾದರಿಯ ಟೆಸ್ಟ್‌ನಲ್ಲಿ ನಾಯಕತ್ವ ವಹಿಸಿಕೊಂಡಿದ್ದರಿಂದ ಗಿಲ್​ ಇತ್ತೀಚಿನ ಶತಕವು ದಾಖಲೆ ಮುರಿದಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯೂಟಿಸಿ) ಇತಿಹಾಸದಲ್ಲಿ ಭಾರತದ ಪರವಾಗಿ ಅತಿಹೆಚ್ಚು ಶತಕ ಗಳಿಸಿದ ದಾಖಲೆಯನ್ನು ಸೃಷ್ಟಿಸಿದ್ದಾರೆ. 26 ವರ್ಷದ ಗಿಲ್​ ಡಬ್ಲ್ಯೂಟಿಸಿ ಇತಿಹಾಸದಲ್ಲಿ ಭಾರತ ಪರ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ಆಟಗಾರರಾಗಿದ್ದಾರೆ.

ಭಾರತದ ಪರ WTC ಶುಭಮನ್ ಗಿಲ್ 10, ರೋಹಿತ್ ಶರ್ಮಾ , 9 ಮತ್ತು ಯಶಸ್ವಿ ಜೈಸ್ವಾಲ್,7 ಶತಕದೊಂದಿಗೆ ನಂತರದ ಸ್ಥಾನಗಳಿದ್ದಾರೆ. ಶುಭಮನ್ ಗಿಲ್ ಭಾರತ ಪರ ವಿರಾಟ್ ಕೊಹ್ಲಿಯ ದಾಖಲೆಯನ್ನು ಸರಿಗಟ್ಟಿದ್ದಾರೆ. ಒಂದೇ ವರ್ಷದಲ್ಲಿ ನಾಯಕನಾಗಿ ವಿರಾಟ್​ 5 ಶತಕಗಳನ್ನು ಬಾರಿಸಿದ್ದಾರೆ.

ಅದರೆ, ಈಗ 2025 ರಲ್ಲಿ ಗಿಲ್​ ಐದು ಶತಕಗಳನ್ನು ಸಿಡಿಸಿದ್ದಾರೆ. ಆದರೆ, ಕೊಹ್ಲಿ ತಮ್ಮ ವೃತ್ತಿಜೀವನದಲ್ಲಿ ಎರಡು ಬಾರಿ ಈ ಅದ್ಭುತ ಮೈಲಿಗಲ್ಲು ಸಾಧಿಸಿದ್ದು, 2017 ಮತ್ತು 2018 ರಲ್ಲಿ ಟೆಸ್ಟ್ ನಾಯಕನಾಗಿ ತಲಾ 5 ಶತಕಗಳನ್ನು ದಾಖಲಿಸಿದ್ದರು. 2016 ರಲ್ಲಿ ನಾಲ್ಕು ಶತಕಗಳನ್ನು ದಾಖಲಿಸಿದರು. ಸಚಿನ್ ತೆಂಡೂಲ್ಕರ್ 1997 ರಲ್ಲಿ ಭಾರತದ ಟೆಸ್ಟ್ ನಾಯಕರಾಗಿದ್ದಾಗ ಸಚಿನ್ ನಾಲ್ಕು ಶತಕಗಳನ್ನು ಗಳಿಸಿದ್ದರು. ಅದರೆ, ಈಗ ಗಿಲ್​ 5 ಶತಕ ಬಾರಿಸಿದ್ದಾರೆ. ಅಲ್ಲದೆ, 2006 ರಲ್ಲಿ ಏಳು ಶತಕಗಳನ್ನು ಗಳಿಸಿರುವ ರಿಕಿ ಪಾಂಟಿಂಗ್ ಅಗ್ರಸ್ಥಾನದಲ್ಲಿದ್ದಾರೆ.

Five Test hundreds in a calendar year by an Indian captain

  • Virat Kohli in 2017

  • Virat Kohli in 2018

  • Shubman Gill in 2025

ಬಾಬರ್ ಅಜಮ್ ಹಿಂದಿಕ್ಕಿದ ಗಿಲ್

ಶುಭಮನ್ ಗಿಲ್ ತಮ್ಮ 10 ನೇ ಶತಕದೊಂದಿಗೆ ಹಲವಾರು ದಾಖಲೆಗಳನ್ನು ಮುರಿದಿದ್ದಾರೆ. ಡಬ್ಲ್ಯೂಟಿಸಿಯಲ್ಲಿ ನಾಯಕನಾಗಿ, ಗಿಲ್​ ತಮ್ಮ ಐದನೇ ಶತಕವನ್ನು ಗಳಿಸಿದ್ದಾರೆ. ಪಾಕಿಸ್ತಾನದ ಬಾಬರ್ ಅಜಮ್ ಟೆಸ್ಟ್​ನಲ್ಲಿ ನಾಯಕನಾಗಿದ್ದಾಗ ನಾಲ್ಕು ಶತಕಗಳನ್ನು ಗಳಿಸಿದ್ದರು. ಒಟ್ಟಾರೆಯಾಗಿ, ಜೋ ರೂಟ್ ಇಂಗ್ಲೆಂಡ್ ನಾಯಕನಾಗಿ 100 ಕ್ಕೂ ಹೆಚ್ಚು 8 ಶತಕಗಳೊಂದಿಗೆ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT