ನಟಿ ನತಾಶಾ ಅವರಿಂದ ವಿಚ್ಛೇದನ ಪಡೆದು ದೀರ್ಘಕಾಲದ ಬಳಿಕ ಭಾರತದ ಸ್ಟಾರ್ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಮತ್ತೆ ಲವ್ ನಲ್ಲಿ ಬಿದ್ದಿದ್ದಾರೆ ಅಂತಾ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ನಡೆಯುತಿತ್ತು. ಅದು ಇದೀಗ ನಿಜವಾಗಿದ್ದು, ಇನ್‌ಸ್ಟಾಗ್ರಾಮ್ ನಲ್ಲಿ ಹೊಸ ಗರ್ಲ್ ಫ್ರೆಂಡ್ ಫೋಟೋವನ್ನು ಅಧಿಕೃತವಾಗಿ ಹಂಚಿಕೊಳ್ಳುವ ಮೂಲಕ ವದಂತಿಗಳಿಗೆ ತೆರೆ ಎಳೆದಿದ್ದಾರೆ.
ಟಿ20 ಏಷ್ಯಾಕಪ್ ಟೂರ್ನಿ ಬಳಿಕ ರಿಲ್ಯಾಕ್ಸ್ ಮಾಡುತ್ತಿರುವ ಪಾಂಡ್ಯ, ಹೊಸ ಗರ್ಲ್‌ಫ್ರೆಂಡ್ ಮಹೀಕಾ ಶರ್ಮಾ ಅವರೊಂದಿಗೆ ಬೀಚ್ ಎದುರು ಹಾಗೂ ನೈಟ್ ಔಟ್ ವೇಳೆ ತೆಗೆದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅವುಗಳನ್ನು ಮಹೀಕಾ ಅವರಿಗೂ ಟ್ಯಾಗ್ ಮಾಡಿದ್ದಾರೆ.
ಮೊದಲ ಫೋಟೋದಲ್ಲಿ ಪಾಂಡ್ಯ, ಮಹೀಕಾ ಅವರ ಹೆಗಲ ಮೇಲೆ ರೊಮ್ಯಾಂಟಿಕ್ ಆಗಿ ಕೈ ಹಾಕಿಕೊಂಡಿದ್ದಾರೆ. ಮತ್ತೊಂದು ಫೋಟೋದಲ್ಲಿ ಇಬ್ಬರು ನೈಟ್‌ಔಟ್‌ನಲ್ಲಿ ಕಾಲ ಕಳೆಯುತ್ತಿದ್ದಾರೆ. ಮಹೀಕಾ ಹಾಟ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ರೆ, ಪಾಂಡ್ಯ ಸಿಂಪಲ್ಲಾಗಿ ಡ್ರೆಸ್ ಮಾಡಿಕೊಂಡಿದ್ದಾರೆ. ಫೋಟೋಗಳಿಗೆ ಪಾಂಡ್ಯ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಯಾರಿದು ಮಹೀಕಾ ಶರ್ಮಾ?
ಅರ್ಥಶಾಸ್ತ್ರದಲ್ಲಿ ಪದವಿ ಪಡೆದಿರುವ ಮಹೀಕಾ ಶರ್ಮಾ, ಫ್ಯಾಷನ್ ಉದ್ಯಮದಲ್ಲಿ ಹೆಸರು ಮಾಡಿದ್ದಾರೆ. ಐಎಫ್‌ಎ ಮಾಡೆಲ್ ಆಫ್ ದಿ ಇಯರ್ ಹಾಗೂ ಎಲ್ಲೆ ಮಾಡೆಲ್ ಆಫ್ ದಿ ಸೀಸನ್ ಪ್ರಶಸ್ತಿಗಳನ್ನು ಮಹೀಕಾ ಮುಡಿಗೇರಿಸಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿರುವ ಮಹೀಕಾ ಶರ್ಮಾ ಇನ್‌ಸ್ಟಾದಲ್ಲಿ 1.47 ಲಕ್ಷ ಫಾಲೋವರ್ಸ್ ಹೊಂದಿದ್ದಾರೆ.
ಹಾರ್ದಿಕ್ ಪಾಂಡ್ಯ ಈ ಹಿಂದೆ ಮಾಡೆಲ್ ನತಾಶಾ ಅವರಿಗೆ ಜುಲೈ 2024 ರಲ್ಲಿ ವಿಚ್ಚೇಧನ ಘೋಷಿಸಿದ್ದರು. ಅವರು ತಮ್ಮ ಮಗ ಅಗಸ್ತ್ಯನಿಗೆ ಸಹ-ಪೋಷಕರಾಗಿದ್ದಾರೆ. ಬಳಿಕ ಈ ವರ್ಷದ ಆರಂಭದಲ್ಲಿ ನಟಿ ಇಶಾ ಗುಪ್ತಾ ಅವರೊಂದಿಗೆ ಡೇಟಿಂಗ್ ಮಾಡ್ತಿದ್ದಾರೆ ಎಂಬ ವದಂತಿ ಕೇಳಿಬಂದಿತ್ತು. ಆದರೆ ಅದನ್ನು ಇಶಾ ಗುಪ್ತ ನಿರಾಕರಿಸಿದ್ದರು.