ಸ್ಮೃತಿ ಮಂದಾನ 
ಕ್ರಿಕೆಟ್

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ 2025ರ ನಾಲ್ಕನೇ ಪಂದ್ಯ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ಸ್ಫೋಟಕ ಬ್ಯಾಟಿಂಗ್ ಮಾಡಿದ್ದು ತಂಡ 330 ರನ್ ಗಳ ಬೃಹತ್ ಮೊತ್ತ ಕಲೆಹಾಕಿದೆ.

ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ 2025ರ ನಾಲ್ಕನೇ ಪಂದ್ಯ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ಸ್ಫೋಟಕ ಬ್ಯಾಟಿಂಗ್ ಮಾಡಿದ್ದು ತಂಡ 330 ರನ್ ಗಳ ಬೃಹತ್ ಮೊತ್ತ ಕಲೆಹಾಕಿದೆ. ವಿಶಾಖಪಟ್ಟಣದ ಎಸಿಎ-ವಿಡಿಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಭಾರತದ ಸ್ಮೃತಿ ಮಂದಾನ ಇತಿಹಾಸ ಸೃಷ್ಟಿಸಿದ್ದಾರೆ.

ಸ್ಮೃತಿ ಮಂಧಾನ ಮತ್ತು ಪ್ರತೀಕಾ ರಾವಲ್ ಈ ಪಂದ್ಯದಲ್ಲಿ ಭಾರತೀಯ ತಂಡಕ್ಕೆ ಬಲವಾದ ಆರಂಭವನ್ನು ನೀಡಿದರು. ಇಬ್ಬರೂ ಆಟಗಾರ್ತಿಯರು ಪವರ್‌ಪ್ಲೇನಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದರು. ಪವರ್‌ಪ್ಲೇಯಲ್ಲಿ ಭಾರತ ತಂಡವು ವಿಕೆಟ್ ಕಳೆದುಕೊಳ್ಳದೆ 58 ರನ್ ಗಳಿಸಿತು. ಈ ಅವಧಿಯಲ್ಲಿ ಸ್ಮೃತಿ ಪ್ರಮುಖ ದಾಖಲೆಯನ್ನು ಸ್ಥಾಪಿಸಿದರು. ಎಡಗೈ ಬ್ಯಾಟ್ಸ್‌ಮನ್ ಸ್ಮೃತಿ ಈ ವರ್ಷ ಮಹಿಳಾ ಏಕದಿನ ಪಂದ್ಯಗಳಲ್ಲಿ 1,000 ರನ್ ಪೂರೈಸಿ ದಾಖಲೆ ಬರೆದರು.

ಸ್ಮೃತಿ ಮಂಧಾನ ಕ್ಯಾಲೆಂಡರ್ ವರ್ಷದಲ್ಲಿ ಮಹಿಳಾ ಏಕದಿನ ಪಂದ್ಯಗಳಲ್ಲಿ 1,000 ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೊದಲು ಬೇರೆ ಯಾವುದೇ ಮಹಿಳಾ ಆಟಗಾರ್ತಿ ಈ ಸಾಧನೆ ಮಾಡಿರಲಿಲ್ಲ. ಈ ಹಿಂದೆ ಆಸ್ಟ್ರೇಲಿಯಾದ ಮಾಜಿ ನಾಯಕಿ ಬೆಲಿಂಡಾ ಕ್ಲಾರ್ಕ್ 1997ರಲ್ಲಿ ಮಹಿಳಾ ಏಕದಿನ ಪಂದ್ಯಗಳಲ್ಲಿ 80.83 ಸರಾಸರಿಯಲ್ಲಿ 970 ರನ್ ಗಳಿಸಿದ್ದರು.

ಮಹಿಳಾ ಏಕದಿನ ಪಂದ್ಯಗಳಲ್ಲಿ ಸ್ಮೃತಿ ಮಂಧಾನ ಕೂಡ 5,000 ರನ್ ಪೂರೈಸಿದರು. ಈ ಸಾಧನೆ ಮಾಡಿದ ಎರಡನೇ ಭಾರತೀಯ ಮತ್ತು ವಿಶ್ವದ ಐದನೇ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಸ್ಮೃತಿ ಕೇವಲ 112 ಇನ್ನಿಂಗ್ಸ್‌ಗಳಲ್ಲಿ ಈ ಮೈಲಿಗಲ್ಲು ಸಾಧಿಸಿದರು. ಮಹಿಳಾ ಏಕದಿನ ಪಂದ್ಯಗಳಲ್ಲಿ ಕಡಿಮೆ ಇನ್ನಿಂಗ್ಸ್ ಮತ್ತು ಎಸೆತಗಳಲ್ಲಿ 5,000 ರನ್ ತಲುಪಿದ ಆಟಗಾರ್ತಿ ಸ್ಮೃತಿ. ಅವರು ಸ್ಟೆಫಾನಿ ಟೇಲರ್ (129 ಇನ್ನಿಂಗ್ಸ್) ಮತ್ತು ಸುಜೀ ಬೇಟ್ಸ್ (6182 ಎಸೆತಗಳು) ಅವರ ದಾಖಲೆಗಳನ್ನು ಮುರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

GBA ಆಯ್ತು.. ಈಗ ಗ್ರೇಟರ್ ಮೈಸೂರು ಸಿಟಿ ಕಾರ್ಪೋರೇಷನ್ ಗೆ ಸಂಪುಟ ಅನುಮೋದನೆ!

'ಮಾತು' ಜಗತ್ತಿಗೆ ಉತ್ತಮವಾಗದ ಹೊರತು ಅದು ಶಕ್ತಿಯಲ್ಲ; ಡಿಕೆಶಿ ಪೋಸ್ಟ್​​ಗೆ CM ಸಿದ್ದರಾಮಯ್ಯ ಕೌಂಟರ್

ಮಹಿಳೆಗೆ ಕಚ್ಚಿದ ನಾಯಿ, ಪ್ರಶ್ನೆ ಮಾಡಿದ ಸಂತ್ರಸ್ಥೆಗೆ ಮಾಲಕಿ ಕಪಾಳಮೋಕ್ಷ, Video Viral

ಸಂಸತ್ತಿನಲ್ಲಿ 'ವಂದೇ ಮಾತರಂ', 'ಜೈ ಹಿಂದ್' ಘೋಷಣೆಗಳಿಗೆ ಆಕ್ಷೇಪಣೆ ಯಾಕೆ?: ಬಿಜೆಪಿ ಪ್ರಶ್ನಿಸಿದ ಕಾಂಗ್ರೆಸ್

ಯುದ್ಧ ಸಾರಿದ ನ್ಯೂಜಿಲೆಂಡ್, 25 ಲಕ್ಷ Stone Cold Killers ನಿರ್ಮೂಲನೆ ಮಾಡುವ ಶಪಥ!

SCROLL FOR NEXT