ರೋಹಿತ್ ಶರ್ಮಾ 
ಕ್ರಿಕೆಟ್

ಕಳಪೆ ಪ್ರದರ್ಶನ ನೀಡಿದರೂ, ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯದಲ್ಲಿ ರೋಹಿತ್ ಶರ್ಮಾ ಸಾಧನೆ!

500 ಪಂದ್ಯಗಳಲ್ಲಿ, ರೋಹಿತ್ 42.18ರ ಸರಾಸರಿಯಲ್ಲಿ 11,168 ರನ್ ಗಳಿಸಿದ್ದಾರೆ. ಇದರಲ್ಲಿ 49 ಶತಕಗಳು ಮತ್ತು 108 ಅರ್ಧಶತಕಗಳು ಸೇರಿವೆ. 264 ಅವರ ಅತ್ಯುತ್ತಮ ಸ್ಕೋರ್ ಆಗಿದೆ.

ಭಾನುವಾರ ಪರ್ತ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳಿದ ಭಾರತದ ಬ್ಯಾಟಿಂಗ್ ದಿಗ್ಗಜ ರೋಹಿತ್ ಶರ್ಮಾ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದಾರೆ. 2025ರ ಚಾಂಪಿಯನ್ಸ್ ಟ್ರೋಫಿ ಫೈನಲ್ ನಂತರ ಮೊದಲ ಬಾರಿಗೆ ಟೀಂ ಇಂಡಿಯಾ ಪರ ಆಡುತ್ತಿರುವ ರೋಹಿತ್ ಅವರನ್ನು ಜಾಶ್ ಹೇಜಲ್‌ವುಡ್ 8 ರನ್‌ಗಳಿಗೆ ಔಟ್ ಮಾಡಿದರು. ಈ ಕಡಿಮೆ ಸ್ಕೋರ್ ಹೊರತಾಗಿಯೂ, ಈ ಪಂದ್ಯವು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ಅವರ 500ನೇ ಪಂದ್ಯವಾಗಿದೆ. ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ಎಂಎಸ್ ಧೋನಿ ಮತ್ತು ರಾಹುಲ್ ದ್ರಾವಿಡ್ ನಂತರ ಈ ಸಾಧನೆ ಮಾಡಿದ ಐದನೇ ಭಾರತೀಯ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ರೋಹಿತ್ ಜೊತೆಗೆ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಕೂಡ ಭಾರತ ತಂಡಕ್ಕೆ ಮರಳಿದ್ದಾರೆ. ರೋಹಿತ್ ಅವರಂತೆಯೇ ಕೊಹ್ಲಿ ಕೂಡ ಮಿಚೆಲ್ ಸ್ಟಾರ್ಕ್ ಬೌಲಿಂಗ್‌ನಲ್ಲಿ ಶೂನ್ಯಕ್ಕೆ ಔಟಾಗುವ ಮೂಲಕ ಅಭಿಮಾನಿಗಳಲ್ಲಿ ತೀವ್ರ ನಿರಾಸೆ ಮೂಡಿಸಿದ್ದಾರೆ.

ಭಾರತದ ಮಾಜಿ ನಾಯಕ ರೋಹಿತ್ ಶರ್ಮಾ ಜೂನ್‌ನಲ್ಲಿ ಮುಕ್ತಾಯಗೊಂಡ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಆಡಿದರು ಮತ್ತು ಅಂದಿನಿಂದ ತಿಂಗಳುಗಟ್ಟಲೆ ಕ್ರಿಕೆಟ್‌ನಿಂದ ದೂರವಿದ್ದರು.

500 ಪಂದ್ಯಗಳಲ್ಲಿ, ರೋಹಿತ್ 42.18ರ ಸರಾಸರಿಯಲ್ಲಿ 11,168 ರನ್ ಗಳಿಸಿದ್ದಾರೆ. ಇದರಲ್ಲಿ 49 ಶತಕಗಳು ಮತ್ತು 108 ಅರ್ಧಶತಕಗಳು ಸೇರಿವೆ. 264 ಅವರ ಅತ್ಯುತ್ತಮ ಸ್ಕೋರ್ ಆಗಿದೆ.

ಭಾರತದ ಪರ ಅತಿ ಹೆಚ್ಚು ಏಕದಿನ ರನ್ ಗಳಿಸಿದ ಮೂರನೇ ಆಟಗಾರನಾಗಲು, ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ (11,221 ರನ್) ಅವರನ್ನು ಹಿಂದಿಕ್ಕಲು ರೋಹಿತ್‌ಗೆ ಇನ್ನೂ 54 ರನ್‌ಗಳ ಅಗತ್ಯವಿದೆ.

ಸೌರವ್ ಗಂಗೂಲಿ 273 ಪಂದ್ಯಗಳಲ್ಲಿ 48.76 ಸರಾಸರಿ ಮತ್ತು 92.80 ಸ್ಟ್ರೈಕ್ ರೇಟ್‌ನಲ್ಲಿ 11,221 ರನ್‌ಗಳನ್ನು ಗಳಿಸಿದ್ದಾರೆ. ಇದರಲ್ಲಿ 32 ಶತಕಗಳು ಮತ್ತು 58 ಅರ್ಧಶತಕಗಳು ಸೇರಿವೆ. 183 ಅವರ ಅತ್ಯುತ್ತಮ ಸ್ಕೋರ್‌ ಆಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Flood Relief: ಕರ್ನಾಟಕ, ಮಹಾರಾಷ್ಟ್ರಕ್ಕೆ ರೂ. 1,950 ಕೋಟಿ ಬಿಡುಗಡೆಗೆ ಕೇಂದ್ರದ ಅನುಮೋದನೆ!

ದೊಡ್ಡಬಳ್ಳಾಪುರ: "ಹೃದಯವಂತ ಆರ್.ಎಲ್.ಜಾಲಪ್ಪ ಜೀವನ‌ ಪಥ"; ಕೃತಿ ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ!

ವಿಕೃತ ಮನಸ್ಥಿತಿ: ಪ್ರತಿಭಟನೆ ನಡೆಸುತ್ತಿದ್ದ ತನ್ನದೇ ಜನರ ಮೇಲೆ 'ಮಲ' ಸುರಿಸುವ AI ವಿಡಿಯೋ ಹರಿಬಿಟ್ಟ Donald Trump

ಮಂಗಳೂರು: Honeytrap ಯುವಕ ಆತ್ಮಹತ್ಯೆ; ಗೆಳತಿಯರು ಬಟ್ಟೆ ಬದಲಿಸುವ ವಿಡಿಯೋ ಸೆರೆಹಿಡಿದು ವೈರಲ್, ಯುವತಿ ಬಂಧನ!

"ನನಗೆ ಬೇಕಿರುವುದು ಅದೊಂದೆ...": ರಷ್ಯಾ-ಯುಕ್ರೇನ್ ಯುದ್ಧ ಕೊನೆಗೊಳಿಸಲು ಟ್ರಂಪ್ ಗೆ ಪುತಿನ್ ಷರತ್ತು; ಈಡೇರುತ್ತಾ 11 ವರ್ಷಗಳ ಗುರಿ?

SCROLL FOR NEXT