ಮಿಚೆಲ್ ಮಾರ್ಷ್ - ಸೂರ್ಯಕುಮಾರ್ ಯಾದವ್ 
ಕ್ರಿಕೆಟ್

India vs Australia, 1st T20I: ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ; ನಿತೀಶ್ ಕುಮಾರ್ ರೆಡ್ಡಿ ಔಟ್, ಕುಲದೀಪ್ ಯಾದವ್‌ಗೆ ಸ್ಥಾನ!

ಭಾರತವು ಜಸ್ಪ್ರೀತ್ ಬುಮ್ರಾ ಮತ್ತು ಹರ್ಷಿತ್ ರಾಣಾ ಎಂಬ ಇಬ್ಬರು ಮುಂಚೂಣಿಯ ವೇಗಿಗಳೊಂದಿಗೆ ಕಣಕ್ಕಿಳಿದಿದ್ದರೆ, ಕುಲದೀಪ್ ಯಾದವ್ ಮತ್ತು ವರುಣ್ ಚಕ್ರವರ್ತಿ ಸ್ಪಿನ್ ಬೌಲರ್‌ಗಳಾಗಿದ್ದಾರೆ.

ಕ್ಯಾನ್‌ಬೆರಾ: ಬುಧವಾರ ಇಲ್ಲಿ ನಡೆದ ಐದು ಪಂದ್ಯಗಳ ಸರಣಿಯ ಮೊದಲ ಟಿ20 ಪಂದ್ಯದಲ್ಲಿ ಭಾರತ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕ ಮಿಚೆಲ್ ಮಾರ್ಷ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ಭಾರತವು ಜಸ್ಪ್ರೀತ್ ಬುಮ್ರಾ ಮತ್ತು ಹರ್ಷಿತ್ ರಾಣಾ ಎಂಬ ಇಬ್ಬರು ಮುಂಚೂಣಿಯ ವೇಗಿಗಳೊಂದಿಗೆ ಕಣಕ್ಕಿಳಿದಿದ್ದರೆ, ಕುಲದೀಪ್ ಯಾದವ್ ಮತ್ತು ವರುಣ್ ಚಕ್ರವರ್ತಿ ಸ್ಪಿನ್ ಕರ್ತವ್ಯಗಳನ್ನು ನಿರ್ವಹಿಸಲಿದ್ದಾರೆ.

ನಿತೀಶ್ ಕುಮಾರ್ ರೆಡ್ಡಿ ಔಟ್

ಮೊದಲ ಮೂರು ಟಿ20 ಪಂದ್ಯಗಳಿಂದ ನಿತೀಶ್ ಕುಮಾರ್ ರೆಡ್ಡಿ ಹೊರಗುಳಿದಿದ್ದಾರೆ. ಅಡಿಲೇಡ್‌ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದ ವೇಳೆ ಗಾಯಗೊಂಡಿದ್ದ ಆಲ್‌ರೌಂಡರ್ ಕುತ್ತಿಗೆ ಸೆಳೆತದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಬಿಸಿಸಿಐ ವೈದ್ಯಕೀಯ ತಂಡವು ಅವರ ಪ್ರಗತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ ಎಂದು ಬಿಸಿಸಿಐ ತಿಳಿಸಿದೆ.

ಭಾರತ ತಂಡ: ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ.

ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಟಿಮ್ ಡೇವಿಡ್, ಮಿಚೆಲ್ ಓವನ್, ಮಾರ್ಕಸ್ ಸ್ಟೊಯಿನಿಸ್, ಜೋಶ್ ಫಿಲಿಪ್, ಕ್ಸೇವಿಯರ್ ಬಾರ್ಟ್ಲೆಟ್, ನಾಥನ್ ಎಲ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಜೋಶ್ ಹೇಜಲ್‌ವುಡ್.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT