ನವಿ ಮುಂಬೈ: ಇಲ್ಲಿನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮಹಿಳಾ ಏಕದಿನ ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ನಲ್ಲಿ ಭಾರತ ವಿರುದ್ಧ ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕಿ ಅಲಿಸಾ ಹೀಲಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.
ಗಾಯದಿಂದಾಗಿ ಟೂರ್ನಿಯಿಂದಲೇ ಹೊರಬಿದ್ದಿರುವ ಪ್ರತೀಕಾ ರಾವಲ್ ಬದಲಿಗೆ ಭಾರತ ತಂಡದಲ್ಲಿ ಶೆಫಾಲಿ ವರ್ಮಾ ಸ್ಥಾನ ಪಡೆದಿದ್ದಾರೆ. ಉಮಾ ಚೇಟ್ರಿ ಮತ್ತು ಹರ್ಲೀನ್ ಡಿಯೋಲ್ ಬದಲಿಗೆ ರಿಚಾ ಘೋಷ್ ಮತ್ತು ಕ್ರಾಂತಿ ಗೌಡ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ನಾಯಕಿ ಅಲಿಸಾ ಹೀಲಿ ಆಸ್ಟ್ರೇಲಿಯಾ ತಂಡಕ್ಕೆ ಸೋಫಿ ಮೊಲಿನಿಕ್ಸ್ ಅವರನ್ನು ಸೇರಿಸಿಕೊಂಡಿದ್ದಾರೆ. ಜಾರ್ಜಿಯಾ ವೇರಮ್ ಮತ್ತು ಜಾರ್ಜಿಯಾ ವೋಲ್ ಪ್ಲೇಯಿಂಗ್ ಇಲೆವೆನ್‌ನಿಂದ ಹೊರಗುಳಿದಿದ್ದಾರೆ.
ಈ ಪಂದ್ಯದಲ್ಲಿ ಗೆಲುವು ಸಾಧಿಸುವವರು ಭಾನುವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದ್ದಾರೆ.
ಭಾರತ ತಂಡ
ಶೆಫಾಲಿ ವರ್ಮಾ, ಸ್ಮೃತಿ ಮಂಧಾನ, ಅಮನ್ಜೋತ್ ಕೌರ್, ಜೆಮಿಮಾ ರೋಡ್ರಿಗಸ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ರಾಧಾ ಯಾದವ್, ಕ್ರಾಂತಿ ಗೌಡ, ಶ್ರೀ ಚರಣಿ, ರೇಣುಕಾ ಸಿಂಗ್ ಠಾಕೂರ್.
ಆಸ್ಟ್ರೇಲಿಯಾ ತಂಡ
ಫೋಬೆ ಲಿಚ್‌ಫೀಲ್ಡ್, ಅಲಿಸಾ ಹೀಲಿ (ವಿಕೆಟ್ ಕೀಪರ್/ನಾಯಕಿ), ಎಲ್ಲಿಸ್ ಪೆರ್ರಿ, ಬೆತ್ ಮೂನಿ, ಅನ್ನಾಬೆಲ್ ಸದರ್ಲ್ಯಾಂಡ್, ಆಶ್ಲೀ ಗಾರ್ಡ್ನರ್, ತಹ್ಲಿಯಾ ಮೆಕ್‌ಗ್ರಾತ್, ಸೋಫಿ ಮೊಲಿನಿಕ್ಸ್, ಅಲಾನಾ ಕಿಂಗ್, ಕಿಮ್ ಗಾರ್ತ್, ಮೇಗನ್ ಶುಟ್.