ದುಬೈ: ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ ಪಂದ್ಯ ನಡೆಯುತ್ತಿದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 127 ರನ್ ಗಳಿಸಿದೆ.
ಆರಂಭದಿಂದಲೂ ಪಾಕ್ ಬ್ಯಾಟ್ಸ್ ಮನ್ ಗಳನ್ನು ನಿಯಂತ್ರಿಸುವಲ್ಲಿ ಭಾರತೀಯ ಬೌಲರ್ ಗಳು ಯಶಸ್ವಿಯಾದರು. ಪಾಕ್ ಪರ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳ ವೈಫಲ್ಯದಿಂದಾಗಿ ತಂಡಕ್ಕೆ ಹೆಚ್ಚಿನ ರನ್ ಗಳಿಸಲು ಸಾಧ್ಯವಾಗಲಿಲ್ಲ.
ಆರಂಭಿಕ ಆಟಗಾರ ಸಯೀಂ ಅಯೂಬ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರೆ, ಮಧ್ಯಮ ಕ್ರಮಾಂಕದ ಬಹುತೇಕ ಬ್ಯಾಟ್ಸ್ ಮನ್ ಗಳು 2 ಅಂಕಿಯ ಸ್ಕೋರ್ ನ್ನೂ ದಾಟಲು ಸಾಧ್ಯವಾಗಲಿಲ್ಲ. ಸಾಹಿಬ್‌ಜಾದಾ ಫರ್ಹಾನ್ 44 ಎಸೆತಗಳಲ್ಲಿ 40 ರನ್ ಗಳಿಸಿದ್ದು ತಂಡದಲ್ಲಿ ಗರಿಷ್ಠ ಸ್ಕೋರ್ ಆಗಿದೆ.
ಭಾರತದ ಬೌಲಿಂಗ್ ವಿಭಾಗದಲ್ಲಿ ಕುಲ್ದೀಪ್ ಯಾದವ್ 18 ರನ್ ನೀಡಿ 3 ವಿಕೆಟ್ ಕಬಳಿಸಿದರೆ, ಜಸ್ಪ್ರೀತ್ ಬೂಮ್ರಾ, ಅಕ್ಸರ್ ಪಟೇಲ್ ತಲಾ 2 ವಿಕೆಟ್, ಹಾರ್ದಿಕ್ ಪಾಂಡ್ಯ 1 ವಿಕೆಟ್ ಗಳಿಸಿದರು.