ಭಾರತದ ವಿರುದ್ಧ ಪ್ರತಿಭಟನೆ ದಾಖಲಿಸಲು ಪಿಸಿಬಿ ನಿರ್ಧಾರ 
ಕ್ರಿಕೆಟ್

Asia CUP 2025: ಭಾರತೀಯ ಆಟಗಾರರ ವರ್ತನೆ ವಿರುದ್ಧ PCB ಕಿಡಿ! ಪ್ರತಿಭಟನೆ ದಾಖಲಿಸಲು ನಿರ್ಧಾರ!

ಇದು ವಿವಾದಕ್ಕೆ ಕಾರಣವಾಗಿದೆ. ಪಾಕಿಸ್ತಾನದ ಆಟಗಾರರೊಂದಿಗಿನ ಎಲ್ಲಾ ಸೌಹಾರ್ದಯುತ ಸಂಕೇತಗಳನ್ನು ಕಡಿದುಕೊಳ್ಳುವ ಟೀಂ ಇಂಡಿಯಾದ ನಿರ್ಧಾರವು ಪ್ರಪಂಚದಾದ್ಯಂತದ ಕ್ರಿಕೆಟ್ ಕ್ಷೇತ್ರದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ದುಬೈ: ಭಾನುವಾರ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಬದ್ಧ ವೈರಿಗಳ ನಡುವಿನ ಕಾಳಗದಲ್ಲಿ ಪಾಕಿಸ್ತಾನದ ನಾಯಕ ಸಲ್ಮಾನ್ ಅಘಾ ಅವರೊಂದಿಗೆ ಭಾರತದ ನಾಯಕ ಸೂರ್ಯ ಕುಮಾರ್ ಯಾದವ್ ಹ್ಯಾಂಡ್ ಶೇಕ್ ಮಾಡಲು ನಿರಾಕರಿಸಿದರೆ, ಪಂದ್ಯ ಮುಗಿದ ಬಳಿಕವೂ ಉಳಿದ ಭಾರತೀಯ ಆಟಗಾರರು ಪಾಕಿಸ್ತಾನ ಆಟಗಾರರೊಂದಿಗೆ ಹ್ಯಾಂಡ್ ಶೇಕ್ ಮಾಡಲಿಲ್ಲ.

ಇದು ವಿವಾದಕ್ಕೆ ಕಾರಣವಾಗಿದೆ. ಪಾಕಿಸ್ತಾನದ ಆಟಗಾರರೊಂದಿಗಿನ ಎಲ್ಲಾ ಸೌಹಾರ್ದಯುತ ಸಂಕೇತಗಳನ್ನು ಕಡಿದುಕೊಳ್ಳುವ ಟೀಂ ಇಂಡಿಯಾದ ನಿರ್ಧಾರವು ಪ್ರಪಂಚದಾದ್ಯಂತದ ಕ್ರಿಕೆಟ್ ಕ್ಷೇತ್ರದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಈ ಕುರಿತು ಮೌನ ಮುರಿದಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ(PCB) ಟಾಸ್ ಸಮಯದಲ್ಲಿ ಸೂರ್ಯಕುಮಾರ್ ಅವರೊಂದಿಗೆ ಹಸ್ತಲಾಘವ ಮಾಡಬೇಡಿ ಎಂದು ಪಾಕ್ ನಾಯಕ ಸಲ್ಮಾನ್ ಅವರಿಗೆ ಮ್ಯಾಚ್ ರೆಫರಿ ಸೂಚಿಸಿದ್ದರು ಎಂದು ಹೇಳಿದ್ದು, ಭಾರತದ ನಿರ್ಧಾರವನ್ನು unsportsmanlike ಎಂದು ಕರೆಯಲಾಗಿದ್ದು, ಅಧಿಕೃತವಾಗಿ ಪ್ರತಿಭಟನೆಯನ್ನು ದಾಖಲಿಸಲು ಪಿಸಿಬಿ ನಿರ್ಧರಿಸಿದೆ.

ಭಾರತದ ವಿರುದ್ಧ ಪ್ರತಿಭಟನೆಯ ಭಾಗವಾಗಿ ಮುಂದ್ಯ ಮುಗಿದ ನಂತರದ ಕಾರ್ಯಕ್ರಮದಲ್ಲಿ ನಾಯಕ ಸಲ್ಮಾನ್ ಅಘಾ ಪಾಲ್ಗೊಂಡಿಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಖಚಿತಪಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

Maharashtra: ಶಾಲಾ ಹಾಸ್ಟೆಲ್‌ನಲ್ಲಿ ಭೀಕರ ದುರಂತ: ಮಲಗಿದ್ದ 6 ಬಾಲಕಿಯರಿಗೆ ಹಾವು ಕಡಿತ, ಮೂವರ ಸಾವು!

ಶಾಲೆಗಳಿಗೆ ಯೂಟ್ಯೂಬರ್‌ಗಳು, ಸೋಷಿಯಲ್ ಮೀಡಿಯಾ ಮಂದಿಗೆ ನೋ ಎಂಟ್ರಿ: ಉತ್ತರ ಪ್ರದೇಶ ಸರ್ಕಾರದ ಖಡಕ್ ಆದೇಶ

'ಬಿಜೆಪಿಗೆ ಖುಷಿ ಕೊಡುವ ಹೇಳಿಕೆ ನೀಡಬೇಡಿ': Rahul Gandhi ಕುರಿತ ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿಕೆಗೆ KC ವೇಣುಗೋಪಾಲ್ ಖಡಕ್ ವಾರ್ನಿಂಗ್