ದುಬೈ: ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿ ಭಾರತದ ವಿರುದ್ದದ ಪಂದ್ಯ ಮುಗಿದ ನಂತರ post Match presentation ಕಾರ್ಯಕ್ರಮದಲ್ಲಿ ಪಾಕಿಸ್ತಾನ ನಾಯಕ
ಸಲ್ಮಾನ್ ಅಘಾ ಕಾಣಿಸಿಕೊಳ್ಳಲಿಲ್ಲ. ಇದು ಚರ್ಚೆಗೆ ಗ್ರಾಸವಾಗುತ್ತಿದ್ದಂತೆಯೇ ಪಾಕಿಸ್ತಾನದ ಮುಖ್ಯ ಕೋಚ್ ಮೈಕ್ ಹೆಸ್ಸನ್ ಕಾರಣಗಳನ್ನು ಬಹಿರಂಗಪಡಿಸಿದ್ದಾರೆ. ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಭಾರತ ತಂಡ ಪಾಕಿಸ್ತಾನದ ಆಟಗಾರರೊಂದಿಗೆ ಹಸ್ತಲಾಘವ ಮಾಡದಿರುವುದಕ್ಕೆ ಈ ನಿರ್ಧಾರ ಮಾಡಿರುವುದಾಗಿ ಹೆಸ್ಸನ್ ಹೇಳಿದ್ದಾರೆ.
ಪಂದ್ಯದ ಕೊನೆಯಲ್ಲಿ ಭಾರತೀಯ ಆಟಗಾರರಿಗೆ ಹ್ಯಾಂಡ್ ಶೇಕ್ ಮಾಡಲು ಉತ್ಸಾಹದಿಂದ ಕಾಯುತ್ತಿದ್ದೇವು. ಆದರೆ ಅದು ಆಗಲಿಲ್ಲ. ಹೀಗಾಗಿ ಸಲ್ಮಾನ್ ಅಘಾ post Match presentation ತೊರೆದಿದ್ದಾರೆ ಎಂದು ಹೆಸ್ಸೆನ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಳೆದ ಏಪ್ರಿಲ್‌ನಲ್ಲಿ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಆಪರೇಷನ್ ಸಿಂಧೂರ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ರಾಜಕೀಯ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯ ಬಹಿಷ್ಕರಿಸಬೇಕು ಎಂಬ ಬೇಡಿಕೆಯೂ ಹೆಚ್ಚಾಗಿತ್ತು.
ಪಂದ್ಯ ಆರಂಭಕ್ಕೂ ಮುನ್ನಾ ಟಾಸ್ ಸಂದರ್ಭದಲ್ಲಿ ಸಲ್ನಾನ್ ಅಘಾ ಹಾಗೂ ಸೂರ್ಯ ಕುಮಾರ್ ಯಾದವ್ ಹ್ಯಾಂಡ್ ಶೇಕ್ ಮಾಡಲಿಲ್ಲ. ಮುಖವನ್ನು ಕೂಡಾ ನೋಡಲಿಲ್ಲ. ಪಂದ್ಯ ಮುಗಿಯುತ್ತಿದ್ದಂತೆಯೇ ಭಾರತೀಯ ಆಟಗಾರರು ಪಾಕಿಸ್ತಾನ ಆಟಗಾರರಿಗೆ ಹಸ್ತಲಾಘವ ಮಾಡಲಿಲ್ಲ. ಇದಕ್ಕೆ ನಿರಾಸೆ ವ್ಯಕ್ತಪಡಿಸಿದ ಹೆಸ್ಸೆನ್, ಕೊನೆಯಲ್ಲಿ ನಾವು ಹ್ಯಾಂಡ್ ಶೇಕ್ ಮಾಡಲು ಹೋದೆವು, ಆದರೆ ಅವರು ಡ್ರೆಸ್ಸಿಂಗ್ ರೂಮ್ ಗೆ ಹೋದರು ಎಂದು"ಹೆಸ್ಸನ್ ಹೇಳಿದರು.