ದುಬೈ: ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಸೂಪರ್ 4 ಹಂತದ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ತಂಡ 172 ರನ್ ಗಳ ಸವಾಲಿನ ಗುರಿ ನೀಡಿದೆ.
ದುಬೈ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು.
ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ ಸಾಹಿಬ್‌ಜಾದಾ ಫರ್ಹಾನ್ (58 ರನ್) ಅರ್ಧಶತಕದ ನೆರವಿನಿಂದ ನಿಗಧಿತ 20 ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 171ರನ್ ಪೇರಿಸಿ ಭಾರತಕ್ಕೆ ಗೆಲ್ಲಲು 172 ರನ್ ಗಳ ಸವಾಲಿನ ಗುರಿ ನೀಡಿದೆ.
ಅಂತಿಮ ಹಂತದಲ್ಲಿ ಮಹಮದ್ ನವಾಜ್ 21ರನ್, ನಾಯಕ ಸಲ್ಮಾನ್ ಅಘಾ 17 ರನ್ ಮತ್ತು ಫಹೀಂ ಅಶ್ರಫ್ (20 ರನ್) ಸ್ಫೋಟಕ ಬ್ಯಾಟಿಂಗ್ ಮಾಡಿ ಪಾಕ್ ತಂಡದ ಮೊತ್ತ 170ರ ಗಡಿ ದಾಟುವಂತೆ ಮಾಡಿದರು.
ಟೀಮ್ ಇಂಡಿಯಾ ಪರ ಶಿವಂ ದುಬೆ 4 ಓವರ್ಗಳಲ್ಲಿ 33 ರನ್ ನೀಡಿ 2 ವಿಕೆಟ್ ಕಬಳಿಸಿದರೆ, ಕುಲದೀಪ್ ಯಾದವ್ ಮತ್ತು ಹಾರ್ದಿಕ್ ಪಾಂಡ್ಯಾ ತಲಾ 1 ವಿಕೆಟ್ ಪಡೆದರು. ಈ ಪಂದ್ಯದಲ್ಲಿ ಭಾರತದ ಬೌಲಿಂಗ್ ಅಸ್ತ್ರ ಜಸ್ ಪ್ರೀತ್ ಬುಮ್ರಾ ವಿಫಲರಾಗಿ ದುಬಾರಿ ಬೌಲರ್ ಎನಿಸಿಕೊಂಡರು. ಬುಮ್ರಾ 4 ಓವರ್ ಎಸೆದು 11.20 ಸರಾಸರಿಯಲ್ಲಿ 45 ರನ್ ನೀಡಿದ್ದು ಭಾರತಕ್ಕೆ ದುಬಾರಿಯಾಯಿತು.