ದುಬೈ: ಏಷ್ಯಾಕಪ್ 2025 ಟೂರ್ನಿಯ ಸೂಪರ್ 4 ಹಂತದ ಪಾಕಿಸ್ತಾನ ವಿರುದ್ಧ ಹೈವೋಲ್ಟೇಜ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಸೂರ್ಯ ಕುಮಾರ್ ಯಾದವ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ದುಬೈ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಟಾಸ್ ಬಳಿಕ ಮಾತನಾಡಿದ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್, 'ನಾವು ಮೊದಲು ಬೌಲಿಂಗ್ ಮಾಡುತ್ತೇವೆ. ಟ್ರ್ಯಾಕ್ ಚೆನ್ನಾಗಿ ಕಾಣುತ್ತಿದೆ ಮತ್ತು ನಿನ್ನೆ ಇಬ್ಬನಿ ಬಿದ್ದಿತ್ತು. ಮೊದಲ ಸುತ್ತಿನಿಂದ ನಾವು ನಾಕೌಟ್ ಟೂರ್ನಮೆಂಟ್ ಆಡುತ್ತಿದ್ದೇವೆ ಎಂದು ಭಾವಿಸಿದ್ದೆವು. ಪಿಚ್ ನಲ್ಲಿ ಏನೂ ಬದಲಾಗಿಲ್ಲ. ಅಬುಧಾಬಿ ಪಿಚ್ ಸಂಪೂರ್ಣವಾಗಿ ವಿಭಿನ್ನವಾದ ವಿಕೆಟ್ ಆಗಿತ್ತು ಇದು ಇನ್ನೊಂದು ಪಂದ್ಯ ಎಂದರು.
ಅಂತೆಯೇ ಇಂದಿನ ಪಂದ್ಯಕ್ಕೆ ನಾಯಕ ಸೂರ್ಯಕುಮಾರ್ ಯಾದವ್ ತಂಡದಲ್ಲಿ ಎರಡು ಬದಲಾವಣೆ ಮಾಡಿದ್ದು, ಅರ್ಶ್ ದೀಪ್ ಸಿಂಗ್ ಮತ್ತು ಹರ್ಷಿತ್ ರಾಣಾ ಬದಲಿಗೆ ಜಸ್ ಪ್ರೀತ್ ಬುಮ್ರಾ ಮತ್ತು ವರುಣ್ ಗೆ ಸ್ಥಾನ ನೀಡಿದ್ದಾರೆ.
ತಂಡಗಳು ಇಂತಿವೆ
ಭಾರತ: ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ
ಪಾಕಿಸ್ತಾನ: ಸೈಮ್ ಅಯೂಬ್, ಸಾಹಿಬ್ಜಾದಾ ಫರ್ಹಾನ್, ಫಖರ್ ಜಮಾನ್, ಸಲ್ಮಾನ್ ಅಘಾ(ನಾಯಕ), ಹುಸೇನ್ ತಲಾತ್, ಮೊಹಮ್ಮದ್ ಹ್ಯಾರಿಸ್(ವಿಕೆಟ್ ಕೀಪರ್), ಮೊಹಮ್ಮದ್ ನವಾಜ್, ಫಹೀಮ್ ಅಶ್ರಫ್, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ಅಬ್ರಾರ್ ಅಹ್ಮದ್