ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾಕಪ್ 2025ರ ಸೂಪರ್ ಫೋರ್ ಪಂದ್ಯ ಇಂದು ದುಬೈನಲ್ಲಿ ನಡೆಯಲಿದೆ. ಈ ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಅಭಿಮಾನಿಗಳು ತುಂಬಾ ಉತ್ಸುಕರಾಗಿದ್ದಾರೆ. ಏಷ್ಯಾಕಪ್‌ನಲ್ಲಿ ಟೀಮ್ ಇಂಡಿಯಾ ಮತ್ತೊಮ್ಮೆ ಪಾಕಿಸ್ತಾನವನ್ನು ಸೋಲಿಸಲಿ ಎಂಬುದು ಕ್ರಿಕೆಟ್ ಪ್ರೇಮಿಗಳ ಬಯಕೆಯಾಗಿದೆ. ಭಾರತ-ಪಾಕಿಸ್ತಾನ ಪಂದ್ಯದ ವೇಳೆ ಉತ್ಸಾಹ ಹೆಚ್ಚಲಿದೆ.
2025ರ ಏಷ್ಯಾಕಪ್‌ನಲ್ಲಿ ಉಭಯ ದೇಶಗಳು ಪರಸ್ಪರ ಎದುರಿಸುತ್ತಿರುವುದು ಇದು ಎರಡನೇ ಬಾರಿ. ಈ ಪಂದ್ಯದಲ್ಲಿ ಭಾರತ ಮತ್ತೊಮ್ಮೆ ಪಾಕಿಸ್ತಾನವನ್ನು ಸೋಲಿಸಲಿ ಎಂದು ನಾವು ಪ್ರಾರ್ಥಿಸುತ್ತೇವೆ. ಸೂರ್ಯಕುಮಾರ್ ಯಾದವ್ ಮತ್ತು ಅಭಿಷೇಕ್ ಶರ್ಮಾ ಅವರ ಮೇಲೆ ನಮಗೆ ಹೆಚ್ಚಿನ ಭರವಸೆ ಇದೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.
ಇದೇ ವೇಳೆ ಆಫ್ಘಾನಿಸ್ತಾನದ ಅಭಿಮಾನಿಗಳು ಸಹ ಭಾರತ ತಂಡವನ್ನು ಪ್ರೋತ್ಸಾಹಿಸುತ್ತಿದ್ದಾರೆ. 2025ರ ಏಷ್ಯಾ ಕಪ್ ನಿಂದ ಅಫ್ಘಾನಿಸ್ತಾನ ತಂಡ ಹೊರಬಿದ್ದ ನಂತರ ಅಫ್ಘಾನಿಸ್ತಾನ ಅಭಿಮಾನಿಗಳು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು ಟೀಮ್ ಇಂಡಿಯಾವನ್ನು ಬೆಂಬಲಿಸಿದ್ದಾರೆ. ವಹೀದಾ ಎಂಬ ಬಳಕೆದಾರ ನಾವು ಹೊರಬಿದ್ದಿರಬಹುದು. ಆದರೆ ಭಾರತ ಇನ್ನೂ ನಮ್ಮ ಭರವಸೆಯನ್ನು ಹೊತ್ತುಕೊಂಡಿದೆ ಎಂದು ಬರೆದಿದ್ದಾರೆ. ಈ ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ಪೋಸ್ಟ್ ಅನ್ನು ಸುಮಾರು 8 ಲಕ್ಷ ಬಾರಿ ವೀಕ್ಷಿಸಲಾಗಿದೆ.