ದುಬೈ: ದುಬೈ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಅವರ 74 ರನ್ ಗಳ ನೆರವಿನಿಂದ ಪಾಕಿಸ್ತಾನವನ್ನು ಆರು ವಿಕೆಟ್ ಗಳಿಂದ ಸೋಲಿಸಿದ ಭಾರತ, ಸೂಪರ್ ನಾಲ್ಕರ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು.
ಪಾಕಿಸ್ತಾನ ನೀಡಿದ್ದ 172 ರನ್ ಗಳ ಸವಾಲಿನ ಗುರಿಯನ್ನು ಬೆನ್ನು ಹತ್ತಿದ ಭಾರತ ತಂಡ 18.5 ಓವರ್ ನಲ್ಲೇ ಕೇವಲ 4 ವಿಕೆಟ್ ಕಳೆದುಕೊಂಡು 174 ರನ್ ಪೇರಿಸಿ 6 ವಿಕೆಟ್ ಗಳ ಅಂತರದಲ್ಲಿ ಭರ್ಜರಿ ಜಯ ದಾಖಲಿಸಿತು.
ಭಾರತದ ಪರ ಆರಂಭಿಕ ಆಟಗಾರರಾದ ಅಭಿಶೇಕ್ ಶರ್ಮಾ ಮತ್ತು ಶುಭ್ ಮನ್ ಗಿಲ್ ಮೊದಲ ವಿಕೆಟ್ ಗೆ ಈ ಜೋಡಿ 105ರನ್ ಪೇರಿಸಿ ಭಾರತದ ಗೆಲುವಿಗೆ ಪ್ರಮುಖ ಕೊಡುಗೆ ನೀಡಿದರು.
ಗಿಲ್ 28 ಎಸೆತಗಳಲ್ಲಿ 8 ಬೌಂಡರಿ ಸಹಿತ 47 ರನ್ ಸಿಡಿಸಿ ಕೇವಲ 3 ರನ್ ಅಂತರದಲ್ಲಿ ಅರ್ಧಶತಕ ಮಿಸ್ ಮಾಡಿಕೊಂಡರು. ಅಭಿಷೇಕ್ ಶರ್ಮಾ 39 ಎಸೆತಗಳಲ್ಲಿ 5 ಸಿಕ್ಸರ್ ಮತ್ತು 6 ಬೌಂಡರಿಗಳ ನೆರವಿನಿಂದ 74 ರನ್ ಸಿಡಿಸಿದರು. ಇದರೊಂದಿಗೆ ಭಾರತ ಸೂಪರ್ ನಾಲ್ಕರ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು. ಪಾಕಿಸ್ತಾನ ಕೊನೆಯ ಸ್ಥಾನಕ್ಕೆ ತಳಲ್ಪಟ್ಟಿತು.
ಪ್ರಸ್ತುತ ಸೂಪರ್ ನಾಲ್ಕರ ಪಾಯಿಂಟ್ ಪಟ್ಟಿಯಲ್ಲಿ ಭಾರತ ಅಗ್ರಸ್ಥಾನದಲ್ಲಿದ್ದರೆ, ಬಾಂಗ್ಲಾದೇಶ ಎರಡನೇ ಸ್ಥಾನ, ಶ್ರೀಲಂಕಾ ಮೂರು ಹಾಗೂ ಪಾಕಿಸ್ತಾನ ನಾಲ್ಕನೇ ಸ್ಥಾನದಲ್ಲಿದೆ.