ಅಬುದಾಬಿ: ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಇಂದಿನ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಪಾಕಿಸ್ತಾನ ತಂಡ 5 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.
ಅಬುದಾಬಿಯ ಶೇಕ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಶ್ರೀಲಂಕಾ ನೀಡಿದ್ದ 134 ರನ್ ಗಳ ಸಾಮಾನ್ಯ ಗುರಿಯನ್ನು ಬೆನ್ನು ಹತ್ತಿದ ಪಾಕಿಸ್ತಾನ ತಂಡ 18 ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 138 ರನ್ ಗಳಿಸಿ 5 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.
ಪಾಕಿಸ್ತಾನದ ಪರ ಆರಂಭಿಕ ಸಾಹಿಬ್ಜಾದಾ ಫರ್ಹಾನ್ 24, ಹುಸ್ಸೇನ್ ಟಲಟ್ ಅಜೇಯ 32 ರನ್ ಮತ್ತು ಮಹಮದ್ ನವಾಜ್ ಅಜೇಯ 38 ರನ್ ಗಳಿಸಿ ಪಾಕಿಸ್ತಾನದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದರು.
ಶ್ರೀಲಂಕಾ ಪರ ವನಿಂದು ಹಸರಂಗ ಮತ್ತು ಮಹೀಶ ತೀಕ್ಷ್ಣ ತಲಾ 2 ವಿಕೆಟ್ ಪಡೆದರೆ, ಚಮೀರಾ 1 ವಿಕೆಟ್ ಪಡೆದರು.
ಶ್ರೀಲಂಕಾ ಕಳಪೆ ಬ್ಯಾಟಿಂಗ್
ಇದಕ್ಕೂ ಮೊದಲು ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಶ್ರೀಲಂಕಾ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿತು.
ಪಾಕಿಸ್ತಾನದ ಶಾಹೀನ್ ಅಫ್ರಿದಿ ಮತ್ತು ಹ್ಯಾರಿಸ್ ರೌಫ್, ಹುಸ್ಸೇನ್ ಟಲಟ್ ಬೌಲಿಂಗ್ ದಾಳಿಗೆ ತತ್ತರಿಸಿ 20 ಓವರ್ ನಲ್ಲಿ 8 ವಿಕೆಟ್ ಕಳೆದುಕೊಂಡು 133 ರನ್ ಕಲೆಹಾಕಿತು. ಶ್ರೀಲಂಕಾ ಪರ ಕಮಿಂಡು ಮೆಂಡಿಸ್ ಅರ್ಧಶತಕ ಗಳಿಸಿದ್ದು ಬಿಟ್ಟರೆ ಉಳಿದಾವ ಬ್ಯಾಟರ್ ನಿಂದಲೂ ಉತ್ತಮ ಬ್ಯಾಟಿಂಗ್ ಮೂಡಿಬರಲಿಲ್ಲ.