ದುಬೈ: ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಇಂದಿನ ಪಂದ್ಯದಲ್ಲಿ ಭಾರತ ತಂಡದ ವಿರುದ್ಧ ಟಾಸ್ ಗೆದ್ದ ಬಾಂಗ್ಲಾದೇಶ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಆರಂಭವಾಗಿರುವ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ನಾಯಕ ಜೇಕರ್ ಅಲಿ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಉಭಯ ತಂಡಗಳು ಸೂಪರ್ 4 ಹಂತದ ಮೊದಲ ಪಂದ್ಯದಲ್ಲಿ ಗೆಲುವು ದಾಖಲಿಸಿ ಅಜೇಯವಾಗಿ ಉಳಿದಿವೆ.
ಬಾಂಗ್ಲಾದೇಶ ತಂಡ ಈ ಹಿಂದೆ ಶ್ರೀಲಂಕಾ ವಿರುದ್ಧ ಜಯಬೇರಿ ಭಾರಿಸಿದ್ದರೆ, ಇತ್ತ ಭಾರತ ತಂಡ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಮಣಿಸಿತ್ತು. ಇದೀಗ ಉಭಯ ತಂಡಗಳು ಮುಖಾಮುಖಿಯಾಗುತ್ತಿದ್ದು, ಬಾಂಗ್ಲಾದೇಶಕ್ಕೆ ಲಿಟ್ಟನ್ ದಾಸ್ ಗಾಯದ ಸಮಸ್ಯೆಯಿಂದಾಗಿ ಭಾರತದ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.
ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಹಿಂದೆ ಪಾಕಿಸ್ತಾನ ವಿರುದ್ದ ಆಡಿದ್ದ ಅದೇ ತಂಡವನ್ನು ಬಾಂಗ್ಲಾದೇಶದ ವಿರುದ್ಧವೂ ಕಣಕ್ಕಿಳಿಸಲಾಗುತ್ತಿದೆ.
ತಂಡಗಳು ಇಂತಿವೆ
ಬಾಂಗ್ಲಾದೇಶ: ಸೈಫ್ ಹಸನ್, ತಂಜಿದ್ ಹಸನ್ ತಮೀಮ್, ಪರ್ವೇಜ್ ಹೊಸೈನ್ ಎಮನ್, ತೌಹಿದ್ ಹೃದಯ್, ಶಮೀಮ್ ಹೊಸೈನ್, ಜೇಕರ್ ಅಲಿ (ವಿಕೆಟ್ ಕೀಪರ್/ನಾಯಕ), ಮೊಹಮ್ಮದ್ ಸೈಫುದ್ದೀನ್, ರಿಶಾದ್ ಹೊಸೈನ್, ತಂಝಿಮ್ ಹಸನ್ ಸಾಕಿಬ್, ನಸುಮ್ ಅಹ್ಮದ್, ಮುಸ್ತಫಿಜುರ್ ರಾಹ್
ಭಾರತ: ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್(ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ